ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ, ಶಿಕಾರಿಪುರ ಶಾಸಕ ಬಿ.ವೈ ವಿಜಯೇಂದ್ರ ಅವರು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿದ್ಯುಕ್ತವಾಗಿ ಪದಗ್ರಹಣ ಮಾಡಿದ್ದಾರೆ. ಈ ಮೂಲಕ ರಾಜ್ಯ ಬಿಜೆಪಿಯ ಅಧ್ಯಕ್ಷರಾಗಿ ಅಧಿಕಾರವನ್ನು ಸ್ವೀಕರಿಸಿದ್ದಾರೆ.
ಬಿಜೆಪಿಯ ಜಗನ್ನಾಥ ಭವನದಲ್ಲಿ ನಡೆದಂತ ಹೋಮದಲ್ಲಿ ಶಾಸಕ ಬಿವೈ ವಿಜಯೇಂದ್ರ ಅವರು ಭಾಗಿಯಾದರು. ಬೆಳಗ್ಗೆ 10.00 ಗಂಟೆಗೆ ನಡೆದಂತ ಪೂರ್ಣಾಹುತಿ ಹೋಮ ಮುಕ್ತಾಯಗೊಂಡ ನಂತ್ರ, ನಿಕಟ ಪೂರ್ವ ರಾಜ್ಯಾಧ್ಯಕ್ಷರಾದ ನಳಿನ್‍ಕುಮಾರ್ ಕಟೀಲ್ ಅವರು, ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ಅಧಿಕಾರವನ್ನು ಹಸ್ತಾಂತರಿಸಿದರು.

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವಂತ ತಂದೆಯಾದಂತ ಬಿ.ಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದರು. ತಂದೆಗೆ ಕಾಲು ಮುಟ್ಟಿ ನಮಸ್ಕರಿಸಿ ಆಶೀರ್ವಾದವನ್ನು ಪಡೆದಿದ್ದರು.











