ಹುಬ್ಬಳ್ಳಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಕುಟುಂಬಸ್ಥರ ಹತ್ಯೆಗೆ ಬಿಜೆಪಿ ಅಭ್ಯರ್ಥಿ ಸಂಚು ರೂಪಿಸಿದ್ದಾರೆ ಎಂಬ ಆಡಿಯೋ ವೈರಲ್ ಆದ ಬೆನ್ನಲ್ಲೇ ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಈ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಪ್ರತಿಕ್ರಯಿಸಿದ್ದು ಆಡಿಯೋದ ಸತ್ಯಾಸತ್ಯತೆಯ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.
ವೈರಲ್ ಆಗಿರುವ ಆಡಿಯೋವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಆಡಿಯೋ ಬಗ್ಗೆ ತನಿಖೆ ನಡೆಸುವ ಮೂಲಕ ಸತ್ಯಾಸತ್ಯೆಯ ಬಗ್ಗೆ ತಿಳಿದುಕೊಳ್ಳುತ್ತೇವೆ. ಕಾನೂನು ಪ್ರಕಾರ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತೆ ಅಂತಾ ಸಿಎಂ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ತಿಳಿಸಿದ್ದಾರೆ.
ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಹಾಗೂ ಪಕ್ಷದ ಕಾರ್ಯಕರ್ತ ರವಿ ಮಾತನಾಡಿರುವ ಆಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಕಾಂಗ್ರೆಸ್ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದೆ.