ಮೈಸೂರು : ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ಬೆಳವಣಿಗೆ ಸಂಭವಿಸುತ್ತಿದೆ. ಮೈಸೂರಿನ ರಾಜಕಾರಣದಲ್ಲಿ ಇದೀಗ ಬದಲಾವಣೆಯ ಗಾಳಿ ಬೀಸಿದೆ. ಮೈಸೂರಿನ ಮಾಜಿ ಶಾಸಕ ವಾಸು ಪುತ್ರ ಕವೀಶ್ ಗೌಡ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಪುತ್ರ ಚಾಮುಂಡೇಶ್ವರಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಗಿಟ್ಟಿಸಿಕೊಂಡರೆ ಪಕ್ಕದ ಚಾಮರಾಜನಗರ ಕ್ಷೇತ್ರಕ್ಕೆ ತಂದೆ ವಾಸು ಕಾಂಗ್ರೆಸ್ನಿಂದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ಚಾಮುಂಡೇಶ್ವರಿಯಿಂದ ಬಿಜೆಪಿ ಟಿಕೆಟ್ ಗಿಟ್ಟಿಸಿಕೊಂಡಿರುವ ಕವೀಶ್ ಗೌಡ ಈ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಚಾಮುಂಡೇಶ್ವರಿ ಕ್ಷೇತ್ರದಿಂದ ಯಾವುದೇ ಘಟಾನುಘಟಿ ನಾಯಕರು ಸ್ಪರ್ಧೆ ಮಾಡಿದರೂ ನಮಗೆ ಅಡ್ಡಿಯಿಲ್ಲ. ನಾನು ಬಿಜೆಪಿಯಂತಹ ರಾಷ್ಟ್ರೀಯ ಪಕ್ಷದ ಅಭ್ಯರ್ಥಿ, ಇಲ್ಲಿ ವ್ಯಕ್ತಿಗಿಂತ ಪಕ್ಷ ಮುಖ್ಯ. ನನ್ನ ತಂದೆ ಕಾಂಗ್ರೆಸ್ನಲ್ಲಿರಬಹುದು, ನಾನು ಬಿಜೆಪಿಯಲ್ಲಿರಬಹುದು. ವೈಯಕ್ತಿಕ ಸಂಬಂಧಗಳೇ ಬೇರೆ. ಪಕ್ಷದ ತತ್ವ ಸಿದ್ಧಾಂತಗಳೇ ಬೇರೆ ಎಂದು ಹೇಳಿದರು.