ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ನಡುವೆ BJP ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಜೆಪಿ ನಡ್ಡಾ ಅವರ ಟ್ವಿಟರ್ ಖಾತೆಯಿಂದ ರಷ್ಯಾ – ಉಕ್ರೇನ್ ಬಿಕ್ಕಟ್ಟು, ಬಿಟ್ ಕಾಯಿನ್ ಮತ್ತು ಕ್ರಿಪ್ಟೋಕರೆನ್ಸಿಯ ವಿಷಯದ ಕುರಿತು ಹಲವಾರು ಟ್ವೀಟ್ಗಳನ್ನು ಮಾಡಲಾಗಿದೆ.
ಹೌದು, ನಡ್ಡಾ ಅವರ ಟ್ವಿಟರ್ ಖಾತೆಯನ್ನು ಕೆಲ ಕಾಲ ಹ್ಯಾಕ್ ಮಾಡಿದ ಕಿಡಿಗೇಡಿಗಳು ಹಲವಾರು ಟ್ವೀಟ್ ಮಾಡಿದ್ದಾರೆ. ಟ್ವೀಟ್ ನಲ್ಲಿ, ಉಕ್ರೇನ್ಗೆ ಸಹಾಯ ಮಾಡಲು ದೇಣಿಗೆಯನ್ನು ಕೋರಿದೆ.ಈಗ ಕ್ರಿಪ್ಟೋ ಕರೆನ್ಸಿ ದೇಣಿಗೆಗಳನ್ನು ಸ್ವೀಕರಿಸಲಾಗುತ್ತಿದೆ ಎಂದು ಟ್ವೀಟ್ ನಲ್ಲಿ ಬರೆಯಲಾಗಿದೆ.
ನಡ್ಡಾ ಅವರ ಟ್ವಿಟರ್ ಖಾತೆಯನ್ನು ಕೆಲ ಕಾಲ ಹ್ಯಾಕ್ ಮಾಡಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಈಗ ನಿಯಂತ್ರಣದಲ್ಲಿದೆ ಎಂದು ಪಕ್ಷದ ಮುಖಂಡರು ಹೇಳಿದ್ದಾರೆ. ನಿಜವಾದ ಕಾರಣವನ್ನು ಏನು ಎಂಬುದನ್ನು ಕಂಡುಹಿಡಿಯಲು ನಾವು Twitter ನೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ ಎಂದಿದ್ದಾರೆ.

ಕಳೆದ ವರ್ಷ ಡಿಸೆಂಬರ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಟ್ವಿಟರ್ ಖಾತೆಯನ್ನು ಸಂಕ್ಷಿಪ್ತವಾಗಿ ಹ್ಯಾಕ್ ಮಾಡಲಾಗಿದ್ದು, ಬಿಟ್ಕಾಯಿನ್ಗೆ ಸಂಬಂಧಿಸಿದ ಸಂದೇಶವನ್ನು ಪೋಸ್ಟ್ ಮಾಡಲಾಗಿತ್ತು.