ನನ್ನ ಮುಂದೆ ತಗ್ಗಿ ಬಗ್ಗಿ ನಡೆಯಬೇಕು ಎಂದು ಕಟ್ಟಾಜ್ಞೆ ಮಾಡಿರುವ ಅಡೋಲ್ಫ್ ಹಿಟ್ಲರ್‌ನ (Adolf hitler) ಅಪರಾವತಾರ ಆ ದಿನಗಳ ಡಿಕೆ ಶಿವಕುಮಾರ್ ಸಾಹೇಬ್!!! ಕನ್ನಡಿಗರು ಶಾಂತಿ ಪ್ರಿಯರು ಎಂದ ಮಾತ್ರಕ್ಕೆ ನಿಮ್ಮ ದರ್ಪ ದಬ್ಬಾಳಿಕೆಯನ್ನು ಸಹಿಸುವುದಿಲ್ಲ. ನಿಮ್ಮ ಆ ದಿನಗಳ ಕೊತ್ವಾಲ್ ದರ್ಬಾರ್ ಅಂದಿಗೆ ಸೀಮಿತ ಇಂದಿಗಲ್ಲ ಎಂದು ಪೋಸ್ಟ್ ಮಾಡುವ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ (Dcm Dk shivakumar) ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.
ಕಳೆದ ವಾರ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳ ಪೈಕಿ 27 ಕ್ಷೇತ್ರಕ್ಕೆ ಅನುದಾನವನ್ನು ಬಿಡುಗಡೆ ಮಾಡಲಾಗಿತ್ತು. ಆದರೆ, ಜಯನಗರ ಕ್ಷೇತ್ರಕ್ಕೆ (Jayanagar constituency) ಅನುದಾನವನ್ನು ನಿಲ್ಲಿಸಲಾಗಿತ್ತು. ಉದ್ದೇಶಪೂರ್ವಕವಾಗಿಯೇ ತಮ್ಮ ಕ್ಷೇತ್ರಕ್ಕೆ ಅನುದಾನ ತಡೆಹಿಡಿದಿದ್ದಾರೆ ಎಂದು ಜಯನಗರದ ಶಾಸಕ ಸಿ.ಕೆ.ರಾಮಮೂರ್ತಿ ಆರೋಪಿಸಿದ್ದರು.
ಈ ಬಗ್ಗೆ ಮಾತನಾಡಿದ್ದ ಡಿಕೆಶಿ, ನಾನು ಬಂದ ಮೇಲೆ ಬೆಂಗಳೂರು ಅಧೋಗತಿ ಆಗೋಯ್ತು ಎಂದು ಜಯನಗರ ಶಾಸಕ ಹೇಳಿದ್ದ. ನನ್ನ ಜೊತೆ ಮಾತನಾಡಬೇಕಾದರೆ ತಗ್ಗಿಬಗ್ಗಿ ಇರಬೇಕು. ಬೇರೆಯವರ ಜೊತೆಗೆ ಇದ್ದಂತೆ, ಇದ್ದರೆ ಆಗುವುದಿಲ್ಲ ಎಂದು ಡಿಕೆ ಹೇಳಿದ್ದರು. ಇದಕ್ಕೆ ಸನ್ಮಾನ್ಯ ಡಿ.ಕೆ.ಶಿವಕುಮಾರ್ ಅವರೇ, ನಿಮ್ಮ ಬಳಿ ತಗ್ಗಿ-ಬಗ್ಗಿ ಇರಬೇಕು ಎನ್ನುವುದಕ್ಕೆ ಬೆಂಗಳೂರು ನಗರವನ್ನು ನಿಮ್ಮ ಜಹಗೀರು ಅಂದುಕೊಂಡಿದ್ದೀರಾ ವಿಪಕ್ಷ ನಾಯಕ ಆರ್.ಅಶೋಕ್ (R Ashok) ಈ ಹಿಂದೆ ಪ್ರಶ್ನೆ ಮಾಡಿದ್ದರು.