ರಾಜ್ಯ ಬಿಜೆಪಿ ವತಿಯಿಂದ ಕಾಂಗ್ರೆಸ್ ನಾಯಕರ ವಿರುದ್ಧ ದೂರು ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಡಿ.ಕೆ ಸುರೇಶ್ ಸೇರಿದಂತೆ ವಿವಿಧ ಕಾಂಗ್ರೆಸ್ ನಾಯಕರ ವಿರುದ್ಧ ದೂರು ಸಲ್ಲಿಕೆ ಮಾಡಲಾಗಿದೆ
ಚುನಾವಣಾ ದಿನ ಮಾಡಿರುವ ಲೋಪಗಳನ್ನು ಉಲ್ಲೇಖಿಸಿ ಬಿಜೆಪಿ ದೂರು ಸಲ್ಲಿಕೆ ಮಾಡಿದೆ. ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿರುವ ಬಿಜೆಪಿ, ಕಾನೂನು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯ ಮಾಡಿದೆ. ಪರಿಷತ್ ಸದಸ್ಯ ಚಲವಾದಿ ನಾರಾಯಣ್ವಾಮಿ ನೇತೃತ್ವದಲ್ಲಿ ದೂರು ಸಲ್ಲಿಸಿದ್ದು, ಐದು ಅಂಶಗಳನ್ನು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಸಿಎಂ ಆಗಿದ್ದರೂ ಬೆಂಬಲಿಗರ ಸಹಿತ ವೊಟಿಂಗ್ ಬೂತ್ಗೆ ಹೋಗಿ ವೋಟಿಂಗ್ ಮಾಡಿದ್ದಾರೆ. ಇದು ನೀತಿ ಸಂಹಿತೆ ಉಲ್ಲಂಘನೆ ಎಂದು ದೂರಲಾಗಿದೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಗ್ಯಾರಂಟಿ ಕಾರ್ಡ್ಗಳ ಹಂಚಿಕೆ ಮಾಡಲಾಗಿದೆ. ನಿನ್ನೆ ಬಹಿರಂಗವಾಗಿಯೇ ಗ್ಯಾರಂಟಿ ಕಾರ್ಡ್ಗಳ ಹಂಚಿಕೆ ಮಾಡಿರುವ ಆರೋಪದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ವಿರುದ್ಧ ದೂರು ನೀಡಲಾಗಿದೆ. ಖಾಸಗಿ ಮಾಲ್ ಹೆಸರಿನಲ್ಲಿ ಗಿಫ್ಟ್ ಕೂಪನ್ ಹಂಚಿಕೆ ಹಂಚಿಕೆ ಮಾಡಿದ್ದಾರೆ ಎಂದು ಆರೋಪ ಮಾಡಲಾಗಿದೆ.ಬಂಗಾರಪೇಟೆಯಲ್ಲಿ ಕಾಂಗ್ರೆಸ್ ಮುಖಂಡನಿಂದ ಹಣ ಹಂಚಿಕೆ ಮಾಡಲಾಗಿದೆ. ಬಹಿರಂಗವಾಗಿಯೇ ಮತಗಟ್ಟೆ ಎದುರು ಮತದಾರರಿಗೆ ಹಣ ಹಂಚಿಕೆ ಮಾಡಿ ಆಮಿಷ ಒಡ್ಡಲಾಗಿದೆ ಎಂದು ಆರೋಪ ಮಾಡಲಾಗಿದೆ.
ಇನ್ನು ಯೂತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ ವಿ ಶ್ರೀನಿವಾಸ್ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಚುನಾವಣಾ ನೀತಿ ಸಂಹಿತಿ ನಡುವೆ ಪ್ರತಿಭಟನೆ ಮಾಡಿ ಕಾನೂಣು ಉಲ್ಲಂಘನೆ ಮಾಡಿದ ಆರೋಪ ಮಾಡಿದ್ದಾರೆ. ಮತದಾನ ದಿನ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಪ್ರತಿಭಟಿಸಿದ್ದಾರೆ ಎಂದು ದೂರಲಾಗಿದೆ.
ಮಾಧ್ಯಮಗಳ ವರದಿ, ಫೋಟೋ, ವಿಡಿಯೋಗಳನ್ನು ಸಾಕ್ಷಿಯಾಗಿ ಸಲ್ಲಿಕೆ ಮಾಡಲಾಗಿದೆ. ಚುನಾವಣೆ ದಿನ ಮಾಡಿರುವ ತಪ್ಪುಗಳನ್ನು ಸಂಗ್ರಹ ಮಾಡಿ ಚುನಾವಣಾ ಆಯೋಗದ ಗಮನ ಸೆಳೆಯುವ ಪ್ರಯತ್ನ ಮಾಡಲಾಗಿದೆ.