ರಾಮನಗರ : ರಾಜ್ಯದಲ್ಲಿಂದು ನಾಮಪತ್ರ ಸಲ್ಲಿಕೆ ಪರ್ವ ಜೋರಾಗಿದೆ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಂದ ಬಿ ಫಾರ್ಮ್ ಪಡೆದ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕ್ರಮವಾಗಿ ರಾಮನಗರ ಹಾಗೂ ಚನ್ನಪಟ್ಟಣದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಚನ್ನಪಟ್ಟಣದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ ಬಳಿಕ ಮಾತನಾಡಿದ ಅವರು, ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಸೋಲಿಸಲು ದೊಡ್ಡ ರಣತಂತ್ರ ಹೆಣೆಯಲಾಗಿದೆ. ಇಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಒಳ ಒಪ್ಪಂದ ಮಾಡಿಕೊಂಡು ಜೆಡಿಎಸ್ ಅಭ್ಯರ್ಥಿಯನ್ನು ಸೋಲಿಸಲು ಪ್ಲಾನ್ ಮಾಡಿವೆ ಎಂದು ಆರೋಪಿಸಿದ್ದಾರೆ.
ಇವರೆಲ್ಲ ನಮ್ಮನ್ನು ಬಿ ಟೀಂ ಎಂದು ಕರೀತಾರೆ. ಆದರೆ ಶಿಕಾರಿಪುರದಲ್ಲಿ ವಿಜಯೇಂದ್ರಗೆ ಗೆಲುವು ಸಿಗಲೆಂದು ಕಾಂಗ್ರೆಸ್ ಪ್ಲಾನ್ ಮಾಡಿ ಡಮ್ಮಿ ಅಭ್ಯರ್ಥಿಗೆ ಟಿಕೆಟ್ ನೀಡಿದೆ . ಆದರೆ ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿಯನ್ನು ಸೋಲಿಸಲು ದೊಡ್ಡ ಪ್ಲಾನ್ ಮಾಡಲಾಗಿದೆ ಎಂದು ಹೇಳಿದ್ದಾರೆ.