ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಹೆಂಡತಿ , ಮಕ್ಕಳ ಹತ್ಯೆಗೆ ಬಿಜೆಪಿ ಸಂಚು ರೂಪಿಸಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಇಂದು ಗಂಭೀರ ಆರೋಪ ಮಾಡಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಹತ್ಯೆಗೆ ಸಂಚು ನಡೆದಿದೆ. ಆದರೂ ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರು ಮೌನಕ್ಕೆ ಶರಣಾಗಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಬಹುಮತ ದೊರಕುವ ಸಾಧ್ಯತೆ ಜಾಸ್ತಿ ಇರೋದ್ರಿಂದ ಬಿಜೆಪಿ ಖರ್ಗೆ ಕುಟುಂಬದ ಹತ್ಯೆಗೆ ಸಂಚು ರೂಪಿಸಿದೆ ಎಂದು ಸುರ್ಜೇವಾಲಾ ಪತ್ರಿಕಾ ಪ್ರಕಟಣೆ ಮೂಲಕ ಆರೋಪಿಸಿದ್ದಾರೆ.
ಪ್ರಧಾನಿ ಮೋದಿ ಹಾಗೂ ಸಿಎಂ ಬೊಮ್ಮಾಯಿ ಆಪ್ತ ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಆಡಿಯೋ ವೈರಲ್ ಆಗಿದ್ದು ಇದರಲ್ಲಿ ಕೊಲೆ ಯತ್ನದ ಸಂಚು ಸ್ಪಷ್ಟವಾಗಿ ಬೆಳಕಿಗೆ ಬಂದಿದೆ.