• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವಿದ್ಯುತ್​ ದುರುಪಯೋಗ ಮಾಡುವಂತೆ ರಾಜ್ಯದ ಜನತೆಗೆ ಬಿಜೆಪಿಯಿಂದ ಕುಮ್ಮಕ್ಕು : ಸಿಎಂ ಸಿದ್ದರಾಮಯ್ಯ

Any Mind by Any Mind
June 5, 2023
in ಕರ್ನಾಟಕ
0
ವಿದ್ಯುತ್​ ದುರುಪಯೋಗ ಮಾಡುವಂತೆ ರಾಜ್ಯದ ಜನತೆಗೆ ಬಿಜೆಪಿಯಿಂದ ಕುಮ್ಮಕ್ಕು : ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು : ವಿದ್ಯುತ್​ ದುಂದುವೆಚ್ಚ – ದುರುಪಯೋಗ ಮಾಡುವಂತೆ ರಾಜ್ಯದ ಜನತೆಗೆ ಬಿಜೆಪಿ ಕುಮ್ಮಕ್ಕು ನೀಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದೆ. ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಅರಣ್ಯ ಇಲಾಖೆ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆಯಲ್ಲಿ ಭಾಗಿಯಾಗಿದ್ದ ಸಿದ್ದರಾಮಯ್ಯ ಪ್ರಕೃತಿ ಜೊತೆಗೆ ನಾವು ಬೆಳೆಯೋಣ ಎಂದು ಕರೆ ನೀಡಿದ್ದಾರೆ.

ADVERTISEMENT

ನಾವು ಅಗತ್ಯಕ್ಕೆ ತಕ್ಕಂತೆ ನೀರು, ಗಾಳಿ ಹಾಗೂ ವಿದ್ಯುತ್​ ಬಳಕೆ ಮಾಡಬೇಕು. ಯಾವುದನ್ನೂ ದುಂದುವೆಚ್ಚ ಮಾಡಬಾರದು. ನಾವು ಅಗತ್ಯಕ್ಕೆ ತಕ್ಕಂತೆ ವಿದ್ಯುತ್​ ಬಳಕೆ ಮಾಡಲು ನಾಡಿನ ಜನತೆಗೆ ನೆರವಾಗುತ್ತೇವೆ. ದುಂದುವೆಚ್ಚ-ದುರುಪಯೋಗ ಮಾಡೋದಕ್ಕೆ ಬ್ರೇಕ್​ ಹಾಕುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ವಿಶ್ವ ಪರಿಸರ ದಿನಾಚರಣೆ 2023 ಉದ್ಘಾಟಿಸಿದ ಬಳಿಕ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು , ಸಂಕಷ್ಟದಲ್ಲಿರುವ ನಾಡಿನ ಬಡವರು ಮತ್ತು ಮಧ್ಯಮ ವರ್ಗದವರ ನೆರವಿಗಾಗಿ ನಾವು ಉಚಿತ ವಿದ್ಯುತ್ ನೀಡಲು ಮುಂದಾಗಿದ್ದೇವೆ. ಒಂದು ವರ್ಷದ ಸರಾಸರಿ ಬಳಕೆಗಿಂತ ಶೇ10 ರಷ್ಟು ಹೆಚ್ಚು ಉಚಿತ ವಿದ್ಯುತ್ ಬಳಕೆಗೆ ನಾವು ಅವಕಾಶ ನೀಡಿದ್ದೇವೆ. ಇದನ್ನು ನಾಡಿನ ಜನತೆ ಸಂಭ್ರಮದಿಂದ ಒಪ್ಪಿಕೊಂಡಿದ್ದಾರೆ ಮತ್ತು ಸ್ವೀಕರಿಸಿದ್ದಾರೆ ಎಂದು ಹೇಳಿದ್ದಾರೆ.

ಆದರೆ ಜನರಿಂದ ತಿರಸ್ಕೃತಗೊಂಡಿರುವ ಬಿಜೆಪಿ, ವಿದ್ಯುತ್ ಅನ್ನು ಅನಗತ್ಯ ದುರ್ಬಳಕೆ-ದುಂದುವೆಚ್ಚ-ದುರುಪಯೋಗ ಮಾಡಲು ಕುಮ್ಮಕ್ಕು ಕೊಡುತ್ತಿದೆ. ಇದು ಅತ್ಯಂತ ಜನವಿರೋಧಿಯಾದದ್ದು. ನಾಡಿನ ಪ್ರಜ್ಞಾವಂತ ಜನತೆ ಇದಕ್ಕೆ ಸೊಪ್ಪಾಕುವುದಿಲ್ಲ ಎನ್ನುವ ಭರವಸೆ ನಮಗಿದೆ ಎಂದು ಹೇಳಿದ್ದಾರೆ.

ಪರಿಸರ ಉಳಿಸುವುದು, ಕಾಡು ಬೆಳೆಸುವುದು ಮತ್ತು ಉಳಿಸುವುದು ಕೇವಲ ಅರಣ್ಯ ಇಲಾಖೆ ಕರ್ತವ್ಯ ಅಲ್ಲ. ಪ್ರತಿಯೊಬ್ಬರ ಜವಾಬ್ದಾರಿ. ಪ್ರಕೃತಿಯ ಪ್ರಯೋಜನವನ್ನು ಪಡೆಯುತ್ತಿರುವ ಪ್ರತಿಯೊಬ್ಬರ ಮೇಲೂ ಪ್ರಕೃತಿ ಉಳಿಸುವ ಜವಾಬ್ದಾರಿ ಇದೆ ಎಂದು ಹೇಳಿದ್ದಾರೆ .

Tags: BJPCM SiddaramaiahMisuse of electricityState GovernmentWorld Environment Day 2023ಬಿಜೆಪಿರಾಜ್ಯ ಸರ್ಕಾರವಿದ್ಯುತ್​ ದುರುಪಯೋಗವಿಶ್ವ ಪರಿಸರ ದಿನಾಚರಣೆ 2023ಸಿಎಂ ಸಿದ್ದರಾಮಯ್ಯ
Previous Post

ಆಡಳಿತ ಜವಾಬ್ದಾರಿಯೂ ಸಾರ್ವಜನಿಕ ಹಿತಾಸಕ್ತಿಯೂ..ಸಂವಿಧಾನಬದ್ಧ ಸರ್ಕಾರವು ಅಸ್ಮಿತೆಗಳನ್ನು ಮೀರಿ ಜನಾಸಕ್ತಿಯತ್ತ ಗಮನಹರಿಸಬೇಕು

Next Post

World Environment day 2023 : ವಿಶ್ವ ಪರಿಸರ ದಿನಾಚರಣೆಯಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ಭಾಗಿ

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
Next Post
World Environment day 2023 : ವಿಶ್ವ ಪರಿಸರ ದಿನಾಚರಣೆಯಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ಭಾಗಿ

World Environment day 2023 : ವಿಶ್ವ ಪರಿಸರ ದಿನಾಚರಣೆಯಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ಭಾಗಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!