• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿ ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪ ಬಂದಾಗ ಐಟಿ, ಇಡಿ ಎಲ್ಲಿದ್ದವು?: ಡಿ.ಕೆ.ಶಿ ಪ್ರಶ್ನೆ

ಪ್ರತಿಧ್ವನಿ by ಪ್ರತಿಧ್ವನಿ
August 5, 2021
in ಕರ್ನಾಟಕ, ರಾಜಕೀಯ
0
ಬಿಜೆಪಿ ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪ ಬಂದಾಗ ಐಟಿ, ಇಡಿ ಎಲ್ಲಿದ್ದವು?: ಡಿ.ಕೆ.ಶಿ ಪ್ರಶ್ನೆ
Share on WhatsAppShare on FacebookShare on Telegram

‘ಆಪರೇಷನ್ ಕಮಲದ ಮೂಲಕ, ಸಮ್ಮಿಶ್ರ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರ ರಚಿಸುವಲ್ಲಿಬಿಜೆಪಿನಾಯಕರು ಹಣ ಖರ್ಚು ಮಾಡಿದ ಬಗ್ಗೆ ಆರೋಪ ಕೇಳಿ ಬಂದಾಗ ಆದಾಯ ತೆರಿಗೆ,ಜಾರಿನಿರ್ದೇಶನಾಲಯ ಸಂಸ್ಥೆಗಳು ಎಲ್ಲಿದ್ದವು? ಬಿಜೆಪಿಯವರ ವ್ಯವಹಾರಗಳೆಲ್ಲಾ ಸರಿಯಾಗಿದ್ದಾವಾ..?’ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.

ADVERTISEMENT

ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಅವರ ನಿವಾಸ, ಕಚೇರಿ ಮೇಲೆ ಇಡಿ ಅಧಿಕಾರಿಗಳದಾಳಿಸಂಬಂಧ ನವದೆಹಲಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿವಕುಮಾರ ಅವರು,ನಮ್ಮ ಪಕ್ಷದ ಶಾಸಕರಾದ ಜಮೀರ್ ಅಹ್ಮದ್ ಅವರ ಮನೆ, ಕಚೇರಿ ಮೇಲಿನ ಇ.ಡಿ. ದಾಳಿಖಂಡನೀಯ. ಕಾನೂನು ಪ್ರಕಾರ ಅದನ್ನು ಎದುರಿಸಲು ಜಮೀರ್ ಅವರು ಸಮರ್ಥರಿದ್ದಾರೆ. ಎರಡುವರ್ಷಗಳ ಹಿಂದೆ ಇ.ಡಿ. ಅಧಿಕಾರಿಗಳು ಜಮೀರ್ ಅವರಿಗೆ ನೋಟೀಸ್ ಜಾರಿ ಮಾಡಿ, ಅವರನ್ನು ಕರೆಸಿವಿಚಾರಣೆ ಮಾಡಿದ್ದಾರೆ. ಅವರ ಪ್ರಶ್ನೆಗಳಿಗೆ ಉತ್ತರ ನೀಡಿರುವುದಾಗಿ ಜಮೀರ್ ಅವರೇ ನನಗೆ ತಿಳಿಸಿದ್ದರು. ಈಗಿನ ಸಂದರ್ಭದಲ್ಲಿ ದಾಳಿ ಅಗತ್ಯ ಇರಲಿಲ್ಲ. ಯಾವ ರೀತಿ ಕಿರುಕುಳ ನೀಡಲಾಗುತ್ತದೆ ಎಂಬುದು ನನಗೂ ಗೊತ್ತಿದೆ ಎಂದು ಹೇಳಿದ್ದಾರೆ.

‘ಜಮೀರ್ ಹೇಳಿಕೆಗಳು ಮುಗಿದಿರುವಾಗ ಅವರ ನಿವಾಸ ಹಾಗೂ ಆಪ್ತರ ಮನೆಗಳ ಮೇಲೆ ದಾಳಿ ಮಾಡಿ, ಕಿರುಕುಳ ನೀಡುತ್ತಿರುವುದು ಖಂಡನೀಯ. ಆದಾಯ ತೆರಿಗೆ, ಜಾರಿ ನಿರ್ದೇಶನಾಲಯ, ಎಸಿಬಿ ನಿಜಕ್ಕೂ ಕಾರ್ಯಪ್ರವೃತ್ತವಾಗಿದ್ದರೆ, ಮಾಜಿ ಸಚಿವ ಶ್ರೀನಿವಾಸಗೌಡರು ವಿಧಾನಸಭೆಯಲ್ಲಿ ಆಪರೇಷನ್ ಕಮಲದ ವಿಚಾರವಾಗಿ ಸಿ.ಪಿ. ಯೋಗೇಶ್ವರ್ ಹಾಗೂ ಅಶ್ವಥ್ ನಾರಾಯಣ ಅವರು 30 ಕೋಟಿ ಹಣದ ಆಮಿಷ ನೀಡಿ, 5 ಕೋಟಿ ಹಣವನ್ನು ನನ್ನ ಮನೆಯಲ್ಲಿ ಇಟ್ಟು ಹೋಗಿದ್ದರು ಎಂದು ಆರೋಪ ಮಾಡಿದಾಗ ಈ ಇಲಾಖೆಗಳು ಎಲ್ಲಿ ಹೋಗಿದ್ದವು. ಸಿ.ಪಿ. ಯೋಗೇಶ್ವರ್ ಮನೆ ಮಾರಿ 9 ಕೋಟಿ ಹಣ ಖರ್ಚು ಮಾಡಿ ಸರ್ಕಾರ ರಚನೆ ಮಾಡಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಅವರು ಹೇಳಿದಾಗ ಈ ಇಲಾಖೆಗಳು ಏನಾಗಿದ್ದವುʼ? ಎಂದು ಅವರು ಪ್ರಶ್ನಿಸಿದ್ದಾರೆ.

‘ಅವರ ಮೇನೆ ಮೇಲೆ ದಾಳಿ ಅಥವಾ? ಅವರಿಗೆ ಈ ತನಿಖಾ ಸಂಸ್ಥೆಗಳಿಂದ ನೋಟೀಸ ಜಾರಿಯಾಯ್ತಾ? ಬಿಜೆಪಿ ನಾಯಕರು ವಿಧಾನಸಭೆಯಲ್ಲೇ ನೀಡಿದ ಹೇಳಿಕೆಗಿಂತ ಬೇರೆ ಸಾಕ್ಷಿ ಏನು ಬೇಕಿತ್ತು..? ಇವುಗಳುಭ್ರಷ್ಟಾಚಾರ, ಹಣಅವ್ಯವಹಾರದ ಪ್ರಕರಣಗಳಲ್ಲವೇ? ಯಾಕೆ ಈ ಬಗ್ಗೆ ಪ್ರಕರಣಗಳು ದಾಖಲಾಗಲಿಲ್ಲ. ನಾನು ಅವರ ವೈಯಕ್ತಿಕ ವ್ಯವಹಾರಗಳ ಬಗ್ಗೆ ಮಾತನಾಡುತ್ತಿಲ್ಲ. ಅವರ ಬಾಯಿಂದ ಬಂದ ನುಡಿಮುತ್ತುಗಳನ್ನು ಆಧರಿಸಿ ಪ್ರಶ್ನೆ ಮಾಡುತ್ತಿದ್ದೇನೆ ಎಂದಿದ್ದಾರೆ.’

‘ಯಾರ್ಯಾರ ಅನುಕೂಲಕ್ಕೆ ಹೇಗೆ ಬೇಕೋ, ಹಾಗೆ ಈ ಸಂಸ್ಥೆಗಳು ನಡೆದುಕೊಳ್ಳುತ್ತಿವೆ. ಅಧಿಕಾರ ಇದೆ ಎಂದು ಈ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಈ ವಿಚಾರವಾಗಿ ಕಾನೂನು ರೀತಿಯಲ್ಲಿ ಜಮೀರ್ ಅವರು ಉತ್ತರ ನೀಡಲಿದ್ದಾರೆ. ಅವರಿಗೆ ಆ ಶಕ್ತಿ ಇದೆ. ಆದರೆ ಕಾಂಗ್ರೆಸ್ ನಾಯಕರಿಗೆ ಒಂದು ಕಾನೂನು, ಬಿಜೆಪಿಯವರಿಗೆ ಇನ್ನೊಂದು ಕಾನೂನು ಎಷ್ಟು ಸರಿ? ಬಿಜೆಪಿಯವರೆಲ್ಲಾ ಬಹಳ ಸಾಚಾತನದಲ್ಲಿ ವ್ಯವಹಾರ ಮಾಡುತ್ತಿದ್ದಾರಾ..? ಏಕೆ ಈ ತಾರತಮ್ಯ ಆಗುತ್ತಿದೆ?’ ಎಂದು ಅವರು ಪ್ರಶ್ನಿಸಿದ್ದಾರೆ. .

‘ಕಾನೂನು ಪ್ರಕಾರ ವಿಚಾರಣೆ ನಡೆಯಲಿ, ಅದನ್ನು ಪ್ರಶ್ನಿಸುವುದಿಲ್ಲ. ಈ ಹಿಂದೆ ಐಎಂಎ ವಿಚಾರವಾಗಿಯೇ ಇಡಿ ಅವರು ಕೊಟ್ಟ ನೋಟೀಸ್ ಗೆ ಜಮೀರ್ ಖಾನ್ ಅವರು ವಿಚಾರಣೆಗೆ ಹಾಜರಾಗಿ ಉತ್ತರ ನೀಡಿದ್ದಾರೆ. ಇದು ಮುಗಿದು ಎಷ್ಟೋ ದಿನ ಆಗಿದೆ. ಎಲ್ಲ ಮುಗಿದ ಮೇಲೆ ಈಗ ಐಎಂಎ ಪ್ರಕರಣದ ಹೆಸರಲ್ಲಿ ದಾಳಿ ಮಾಡುವ ಅಗತ್ಯ ಏನಿತ್ತು? ಇಷ್ಟು ದಿನ ಯಾಕೆ ಸುಮ್ಮನಿದ್ದರು?’ ಎಂದಿದ್ದಾರೆ.

‘ಏಳು ಬಾರಿ ಶಾಸಕರಾಗಿದ್ದ ರೋಶನ್ ಬೇಗ್ ಅವರು ಏನಾಗಿದ್ದಾರೆ ಎಂಬ ವಿಚಾರವಾಗಿ ನಾನು ಈಗ ಮಾತನಾಡುವುದಿಲ್ಲ. ನಿರ್ದಿಷ್ಟ ವರ್ಗಕ್ಕೆ ತೊಂದರೆ ನೀಡಲು ಈ ರೀತಿ ದಾಳಿಗಳು ನಡೆಯುತ್ತಿವೆ ಎಂಬುದು ಸ್ಪಷ್ಟವಾಗುತ್ತಿದೆʼ ಎಂದು ಅವರು ಹೇಳಿದ್ದಾರೆ.

ಕೋವಿಡ್ ದುಸ್ಥಿತಿ ಬಗ್ಗೆ ಕಮಲ್ ನಾಥ್ ಜತೆ ಚರ್ಚೆ:

‘ಕಮಲ್ ನಾಥ್ ಅವರು ಮಧ್ಯ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿದ್ದು, ಕೋವಿಡ್ ಸಾವು-ನೋವುಗಳ ಬಗ್ಗೆ ಡೆತ್ ಆಡಿಟ್ ವಿಚಾರವಾಗಿ ಚರ್ಚೆ ಮಾಡಿದೆವು. ಮಧ್ಯಪ್ರದೇಶದಲ್ಲಿಯೂ ಸಾವಿನ ವಿಚಾರದಲ್ಲಿ ಸರ್ಕಾರ ಸುಳ್ಳು ಲೆಕ್ಕ ನೀಡುತ್ತಿದ್ದು, ನಾವು ರಾಜ್ಯದಲ್ಲಿ ಡೆತ್ ಆಡಿಟ್ ಮಾಡುವ ರೀತಿಯಲ್ಲಿ ಅವರು ಚಿತಾಗಾರದಲ್ಲಿ ಅಂತ್ಯಸಂಸ್ಕಾರಗೊಂಡ ಶವಗಳ ಲೆಕ್ಕ ಹಾಕುತ್ತಿದ್ದಾರೆ. ಇತರ ವಿಚಾರಗಳ ಬಗ್ಗೆಯೂ ನಾವು ಚರ್ಚೆ ಮಾಡಿದೆವು.’ ಎಂದಿದ್ದಾರೆ.

ಇನ್ನು ನೂರು ವರ್ಷವಾದ್ರೂ ತಮಿಳುನಾಡು ಅನುಮತಿ ನೀಡಲ್ಲ:

‘ಮೇಕೆದಾಟು ಯೋಜನೆ ರಾಜಕೀಯ ಇಚ್ಛಾಶಕ್ತಿ ವಿಚಾರ. ನಮ್ಮ ರಾಜ್ಯದಲ್ಲಿ ನಮ್ಮ ಹಣದಲ್ಲಿ ನಮ್ಮ ನೀರನ್ನು ಬಳಸಿಕೊಳ್ಳಲು ಈ ಯೋಜನೆ ರೂಪಿಸುತ್ತಿದ್ದೇವೆ. ನಾವು ಯಾರ ಪಾಲಿನ ನೀರನ್ನೂ ತಡೆಯುತ್ತಿಲ್ಲ. ನೀರು ಬಿಡುಗಡೆ ವಿಚಾರದಲ್ಲಿ ಕೇಂದ್ರದ ಸಮಿತಿಯದ್ದೇ ಪರಮಾಧಿಕಾರ. ಈ ಯೋಜನೆಗೆ ಕೆಲವು ಇಲಾಖೆಗಳ ಅನುಮತಿ ಬೇಕಿದೆ ಅಷ್ಟೇ. ಅದನ್ನು ಕೊಡಬೇಕಾದ್ದು ಕೇಂದ್ರ ಸರ್ಕಾರದ ಕರ್ತವ್ಯ. ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಡಬಲ್ ಇಂಜಿನ್ ಸರ್ಕಾರ ಇದೆ. ರಾಜ್ಯ ಸರ್ಕಾರ ಯಾವುದೇ ರೀತಿಯ ಒತ್ತಡ ಬೇಕಾದರೂ ಹಾಕಲಿ. ನಾವು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಎಲ್ಲ ರೀತಿಯ ಸಹಕಾರ ನೀಡುತ್ತೇವೆ. ಅವರು ಕೂಡ ನೀರಾವರಿ ಸಚಿವರಾಗಿದ್ದವರು. ಅವರು ಕೂಡಲೇ ಗುದ್ದಲಿ ಪೂಜೆ ಮಾಡಿ ಕೆಲಸ ಆರಂಭಿಸಲಿ. ಅವರಿಗೆ ನಾವು ಬೆಂಬಲ ನೀಡುತ್ತೇವೆ. ಇದು ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಯೋಜನೆಯೇ ಹೊರತು ನೀರಾವರಿ ಯೋಜನೆ ಅಲ್ಲ. ಈ ವಿಚಾರದಲ್ಲಿ ತಮಿಳುನಾಡು ಇವತ್ತಲ್ಲ ಇನ್ನೂ ನೂರು ವರ್ಷವಾದರೂ ಅನುಮತಿ ನೀಡುವುದಿಲ್ಲ. ಈ ಯೋಜನೆಯಿಂದ ಹೆಚ್ಚುವರಿ ನೀರು ಅಗತ್ಯದ ಸಮಯದಲ್ಲಿ ಅವರಿಗೇ ದೊರೆಯುತ್ತದೆ. ತಮಿಳುನಾಡಿನವರು ಏನಾದರೂ ಮಾಡಿಕೊಳ್ಳಲಿ. ಆದರೆ ಇಲ್ಲಿ ಆಡಳಿತ ಮಾಡುತ್ತಿರುವವರು ಏನು ಮಾಡುತ್ತಿದ್ದಾರೆ ಎಂಬುದು ಮುಖ್ಯವಾಗುತ್ತದೆ.’ ಎಂದಿದ್ದಾರೆ.

ಅನ್ಯಾಯಕ್ಕೊಳಗಾದವರಿಗೆ ಸರ್ಕಾರ ನ್ಯಾಯ ಒದಗಿಸಲಿ:

‘ಐಎಂಎ ವಿಚಾರದಲ್ಲಿ ಯಾರು ಹಣ ಕಳೆದುಕೊಂಡಿದ್ದಾರೆ, ಯಾರಿಗೆ ಅನ್ಯಾಯ ಆಗಿದೆ ಅವರೆಲ್ಲರಿಗೂ ನ್ಯಾಯ ಒದಗಿಸಬೇಕು ಎಂದು ಕಾಂಗ್ರೆಸ್ ಪಕ್ಷ ಒತ್ತಾಯ ಮಾಡುತ್ತಿದೆ. ಈಗಾಗಲೇ ನಮ್ಮ ಸಮ್ಮಿಶ್ರ ಸರ್ಕಾರ ಇದ್ದ ಸಮಯದಲ್ಲಿ ತನಿಖೆಗೆ ಆದೇಶ ಮಾಡಿದ್ದೆವು. ಇದರಲ್ಲಿ ಯಾರೇ ಆಗಲಿ ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ನೊಂದವರಿಗೆ ಮತ್ತೆ ಹಣ ಸಿಗುವಂತಾಗಬೇಕು ಎಂದು ಸರ್ಕಾರವನ್ನು ಒತ್ತಾಯ ಮಾಡುತ್ತೇನೆ.’ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಹೇಳಿದ್ದಾರೆ.

‘ಸಂಪುಟ ವಿಸ್ತರಣೆ ವಿಚಾರದ ಬಗ್ಗೆ ಒಂದು ಮಾತಿನಲ್ಲಿ ಹೇಳುವುದಾದರೆ, ‘There is no Royalty on loyalty’ ಎಂಬಂತಾಗಿದೆ.’

‘ಸರ್ಕಾರ ಹೇಳಿದ ಮೇಲೆ ನಾವು ಲಸಿಕೆ ಪಡೆದಿದ್ದೇವೆ. ಆದರೆ ಈಗ ನಮ್ಮ ಮಕ್ಕಳು ಹೊರ ದೇಶಗಳಿಗೆ ವಿದ್ಯಾಭ್ಯಾಸಕ್ಕೆ ಹೋಗುವಾಗ ತೊಂದರೆ ಆಗುತ್ತಿದೆ. ಕೇಂದ್ರ ಸರ್ಕಾರ ಈ ಬಗ್ಗೆ ಗಮನಹರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Tags: DK ShivakumarED raidZameer Ahmed Khan
Previous Post

ಮಹಾರಾಷ್ಟ್ರ, ಕೇರಳದಿಂದ ಬರುತ್ತಿರುವ ಪ್ರಯಾಣಿಕರಿಂದ ಸ್ವ್ಯಾಬ್ ಟೆಸ್ಟ್ ಸಂಗ್ರಹ, ನೆಗೆಟಿವ್‌ ವರದಿ ತಪಾಸಣೆ: ಬಿಬಿಎಂಪಿ; ನಿಜವಾದ ವಾಸ್ತವ ಏನು?

Next Post

ಜಮೀರ್ ಅವರ ಮೇಲಿನ ಇ.ಡಿ. ದಾಳಿ ರಾಜಕೀಯ ಪ್ರೇರಿತ: ಸಂಸದ ಡಿ.ಕೆ.ಸುರೇಶ್

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
ಜಮೀರ್ ಅವರ ಮೇಲಿನ ಇ.ಡಿ. ದಾಳಿ ರಾಜಕೀಯ ಪ್ರೇರಿತ: ಸಂಸದ ಡಿ.ಕೆ.ಸುರೇಶ್

ಜಮೀರ್ ಅವರ ಮೇಲಿನ ಇ.ಡಿ. ದಾಳಿ ರಾಜಕೀಯ ಪ್ರೇರಿತ: ಸಂಸದ ಡಿ.ಕೆ.ಸುರೇಶ್

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada