ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳಲ್ಲಿ ಮಂದಗತಿಯ ಏರಿಕೆಯಾಗುತ್ತಿದ್ದು. ಸ್ಥಿತಿಗತಿ ಕುರಿತು ಇಂದು ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವರ್ಚುವಲ್ ಸಭೆ ನಡೆಸಿದ್ದರು.
ಸಭೆಯಲ್ಲಿ ಭಾಗಿಯಾಗಿದ್ದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಪ್ರಧಾನಿಗೆ ಗೌರವ ಸೂಚಿಸಿದ್ದಾರೆ. ಆದರೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೆಟ್ಟಿಗರಿಂದ ಹಾಗೂ ಬಿಜೆಪಿಗರಿಂದ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.
ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಮಾತನಾಡುವ ಸಮಯದಲ್ಲಿ ಅರವಿಂದ್ ಕೇಜ್ರಿವಾಲ್ ಕುಳಿತುಕೊಳ್ಳುವ ರೀತಿ ಸರಿಯಿಲ್ಲ ಎಂದು ಹೇಳಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ವಕ್ತಾರ ಅಮಿತ್ ಮಾಳವಿಯಾ ಅರವಿಂದ್ ಕೇಜ್ರಿವಾಲ್ ಸಭೆಯಲ್ಲಿನ ತಮ್ಮ ಅಸಭ್ಯ ವರ್ತನೆಯಿಂದಾಗಿ ತಮ್ಮ ಮರ್ಯಾದೆಯನ್ನು ಕಳೆದುಕೊಂಡಿದ್ದಾರೆ ಎಂದು ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.
ವಿಡಿಯೋದಲ್ಲಿ ಕೇಜ್ರಿವಾಲ್ ತಲೆ ಮೇಲೆ ಕೈ ಹೊತ್ತುಕೊಂಡು ನಿಶ್ಚಿಂತೆಯಿಂದ ಕುಳಿತುಕೊಂಡಿರುವುದು ಕಂಡು ಬರುತ್ತದೆ. ಮಹತ್ವದ ಸಭೆಯೊಂದರಲ್ಲಿ ಮುಖ್ಯಮಂತ್ರಿಯೊಬ್ಬರು ಹೀಗೆ ನಡೆದುಕೊಳ್ಳುತ್ತಾರ ಇದು ಅವರ ಬೇಜವಾಬ್ದಾರಿತನವನ್ನು ಎತ್ತಿ ತೋರಿಸುತ್ತದೆ ಎಂದು ಬಿಜೆಪಿ ವಕ್ತಾರ ಶಹಬಾಜ್ ಪೂನಾವಾಲ ಕಿಡಿಕಾರಿದ್ದಾರೆ.












