ಗುತ್ತಿಗೆದಾರ ಸಚಿನ್ (Contractor sachin) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಪ್ರಕರಣವನ್ನು ಸಿಒಡಿ (COD) ತನಿಖೆಗೆ ವಹಿಸುತ್ತಿರುವ ವಿಚಾರವಾಗಿ ಬೆಂಗಳೂರಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ (Priyank kharge) ಮಾತನಾಡಿದ್ದಾರೆ. ಈ ಬಗ್ಗೆ ನಾನು ಗೃಹ ಸಚಿವರಿಗೆ ಪತ್ರ ಬರೆದಿದ್ದೆ.ಈ ಪ್ರಕರಣದ ಸತ್ಯಾಸತ್ಯತೆ ಸಂಬಂಧ ತನಿಖೆ ನಡೆಸಬೇಕೆಂದು ಮನವಿ ಮಾಡಿದ್ದೆ ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ, ಗೃಹ ಸಚಿವರನ್ನ ಭೇಟಿ ಮಾಡಿದ್ದೆ. ಈ ಪ್ರಕರಣದಲ್ಲಿ ತನಿಖೆ ನಡೆಸುವಂತೆ ಭೇಟಿ ವೇಳೆ ಮನವಿ ಮಾಡಿದ್ದೆ. ಸ್ವತಂತ್ರ ತನಿಖೆ ನಡೆಸಿದರೆ ಸೂಕ್ತ ಅಂತಾ ಸಿಎಂ ಹೇಳಿದ್ದಾರೆ ಹಾಗಾಗಿ ತನಿಖೆಯಾಗಲಿ ಎಂದು ಪ್ರಿಯಾಂಕ್ ಹೇಳಿದ್ದಾರೆ.
ಇನ್ನು ಬಿಜೆಪಿ ನಾಯಕರ ಮುತ್ತಿಗೆ ವಿಚಾರಕ್ಕೆ ಸಂಬಂಧಪಟ್ಟಂತೆ, ಇವರು ಯಾವ ಪ್ರಕರಣವನ್ನ ಸಿಬಿಐ ತನಿಖೆ ನಡೆಸಿದ್ದಾರೆ. ನಮ್ಮ ಮನೆಗೆ ಮುತ್ತಿಗೆ ಹಾಕಲಿ ಬೇಡ ಅಂದವರು ಯಾರು ? ಜನರು ನಗುತ್ತಿದ್ದಾರೆ, ದಾಖಲೆ ಇಲ್ಲದೆ ಯಾಕೆ ಪ್ರತಿಭಟನೆ ಮಾಡುತ್ತಾರೆ ಎಂದು ಕಿಡಿಕಾರಿದ್ದಾರೆ.