• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿಯ ʼಮತಕ್ಕಾಗಿ ಮರಣಮೃದಂಗʼದ ಆಳ- ಅಗಲ ಈಗ ಜನರಿಗೂ ಅರ್ಥವಾಗುತ್ತಿದೆ : HDK

ಪ್ರತಿಧ್ವನಿ by ಪ್ರತಿಧ್ವನಿ
July 28, 2022
in ಕರ್ನಾಟಕ
0
ಸಿಎಂ ಬೊಮ್ಮಾಯಿಯವರಿಗೆ ಗಂಡಸ್ತನ ಇದ್ದರೆ ಇಂತಹ ಸಮಯದಲ್ಲಿ ಮೌನವಾಗಿರಬೇಡಿ : ಹೆಚ್‌ಡಿ ಕುಮಾರಸ್ವಾಮಿ | HDK |  Bommai
Share on WhatsAppShare on FacebookShare on Telegram

ADVERTISEMENT

ದಕ್ಷಿಣ‌ ಕನ್ನಡ ಜಿಲ್ಲೆಯ ರಾಜ್ಯ ಬಿಜೆಪಿ ಯುವ ಘಟಕದ ಕಾರ್ಯಕರ್ತ ಹತ್ಯೆಯನ್ನು ವಿರೋಧಿಸಿ ತನ್ನದೇ ಪಕ್ಷದ ಕಾರ್ಯಕರ್ತರು ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ. ಇತ್ತ ಪ್ರವೀಣ್ ಹತ್ಯೆಯ ಹಿನ್ನೆಲೆ ಜನೋತ್ಸವ ಸಾಧನ ಸಮಾವೇಶ ಕಾರ್ಯಕ್ರಮವನ್ನು ಸಿಎಂ ಬೊಮ್ಮಾಯಿ ರದ್ದುಗೊಳಿಸಿದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸರಣಿ ಟ್ವೀಟ್ಗಳ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಸಾವಿನ ಮನೆಯಲ್ಲಿ ಸಂಭ್ರಮಿಸುವ ವಿಕೃತಿ ಬೇಡವೆಂದು ನಾನು ಹೇಳಿದ್ದೆ. ಪಾಪ.. ರಾಜ್ಯ ಬಿಜೆಪಿ ಸರಕಾರಕ್ಕೆ ಮಧ್ಯರಾತ್ರಿಯಲ್ಲೇ ಜ್ಞಾನೋದಯವಾಗಿದೆ.
ʼಸಾವುಗಳನ್ನೇ ಸಾಧನೆʼಗಳನ್ನಾಗಿ ಮಾಡಿಕೊಂಡು, ಅವುಗಳನ್ನೇ ಅಧಿಕಾರದ ಏಣಿ ಮಾಡಿಕೊಂಡವರಿಗೆ ಅಂತೂ ಪಾಪಪ್ರಜ್ಞೆ ಕಾಡಿತಲ್ಲ ಎನ್ನುವ ಸಮಾಧಾನ, ಸರಕಾರ ಮುಖ ಉಳಿಸಿಕೊಂಡಿದೆ ಎಂದು ಹೇಳಿದ್ದಾರೆ.

ಸರಕಾರದ ಕಾಳಜಿಯಲ್ಲಿ ಸಾಚಾತನವಿಲ್ಲ. ʼಸಾವಿನಲ್ಲೂ ಸಿಂಪಥಿʼ ಗಿಟ್ಟಿಸುವ ವ್ಯರ್ಥ ಪ್ರಯತ್ನ ವಾಕರಿಕೆ ತರಿಸುತ್ತದೆ. ಸಾಧನಾ ಸಮಾವೇಶ ನಿಂತಿತಲ್ಲ ಎನ್ನುವ ಹತಾಶೆ ಎದ್ದು ಕಾಣುತ್ತಿದೆ. ರಾಜ್ಯದಲ್ಲಿ ಸಾವುಗಳ ಮೆರವಣಿಗೆ ನಡೆಯುತ್ತಿರುವುದಷ್ಟೇ ಬಿಜೆಪಿ ಸರಕಾರದ ವರ್ಷದ ಸಾಧನೆ!! ಎಂದು ಕಿಡಿಕಾರಿದ್ದಾರೆ.

ಜಾತಿ, ಧರ್ಮ, ಆಚಾರ, ವಿಚಾರ, ಆಹಾರ, ವ್ಯಾಪಾರ, ಉಡುಗೆ-ತೊಡುಗೆ ನೆಪದಲ್ಲಿ ರಾಜ್ಯವನ್ನು ಭಾವನಾತ್ಮಕವಾಗಿ ಛಿದ್ರ ಛಿದ್ರ ಮಾಡಿದ್ದಾ ಸಾಧನೆ? ತಿನ್ನುವ ಅನ್ನದಲ್ಲಿ, ಕಲಿಯುವ ಅಕ್ಷರದಲ್ಲಿ, ಉರಿಯುವ ಮನೆಯಲ್ಲಿ ʼಮತಕ್ಕಾಗಿ ಕೋಮು ಗಳʼ ಇರಿಯುವುದಾ ಸಾಧನೆ? ಸಾಧನೆ ನೆಪದಲ್ಲಿ ನಲಿಯುವ ಮುನ್ನ ಕನಿಷ್ಠ ನಾಚುವ ಸೂಕ್ಷ್ಮತೆಯೂ ಇಲ್ಲವಲ್ಲ ಎಂದು ದೂರಿದ್ದಾರೆ.

ಇನ್ನೆಷ್ಟು ಯುವಕರ ಕಗ್ಗೊಲೆ ಆಗಬೇಕು? ಅದೆಷ್ಟು ಬಡಮನೆಗಳ ದೀಪಗಳು ಆರಬೇಕು? ಮತ್ತೆಷ್ಟು ಹೆತ್ತ ಕರುಳುಗಳು ಕಣ್ಣೀರಿಡಬೇಕು? ಹರ್ಷ, ಚಂದ್ರು ತಾಯಿಂದರ ಆರ್ತನಾದ ಸರಕಾರಕ್ಕೆ ಕೇಳಿಸಿದ್ದಿದ್ದರೆ ಪ್ರವೀಣ್ ನೆಟ್ಟಾರು ಅಮ್ಮನ ಆರ್ತನಾದ ಕೇಳುವ ಸ್ಥಿತಿ ಬರುತ್ತಿತ್ತಾ? ಕೊಲೆಯನ್ನೇ ತಡೆಯಲಾಗದೇ ಈಗ ʼಕೃತಕ ಸಾಂತ್ವನʼ ಹೇಳಿದರೇನು ಪ್ರಯೋಜನ? ಎಂದು ಪ್ರಶ್ನಿಸಿದ್ದಾರೆ.

ತಾಯಿಂದಿರ ಆರ್ತನಾದ ಸರಕಾರದ ಕಿವಿಗೆ ಇಂಪಾದ ʼನಾದʼದಂತೆ ಕೇಳುತ್ತಿವೆಯಾ? ಬಿಜೆಪಿಯ ʼಮತಕ್ಕಾಗಿ ಮರಣಮೃದಂಗʼದ ಆಳ-ಅಗಲ ಈಗ ಜನರಿಗೂ ಅರ್ಥವಾಗುತ್ತಿದೆ. ಬಿಜೆಪಿ ಅಧ್ಯಕ್ಷರು ಸೇರಿ ಸಚಿವರಿಬ್ಬರಿಗೆ ಎದುರಾದ ಪ್ರತಿರೋಧವೇ ಜನರ ತಾಳ್ಮೆ ಕಟ್ಟೆಯೊಡೆದಿದೆ ಎನ್ನುವುದಕ್ಕೆ ಸಾಕ್ಷಿ. ಕರಾವಳಿ ಕೆರಳಿದೆ. ಕರ್ನಾಟಕ ಕೆರಳುವುದು ಬಾಕಿ ಇದೆ ಎಂದಿದ್ದಾರೆ.

ಏನು ಸಾಧನೆ ಅಂತ ಸರಕಾರ ಜನರಿಗೆ ಹೇಳುತ್ತದೆ?
*40% ಕಮಿಷನ್
*ಕೋವಿಡ್ ಹೆಸರಿನಲ್ಲಿ ಕೊಳ್ಳೆ
*ಅಧಿಕಾರಿಗಳ ವರ್ಗದಲ್ಲಿ ಪೇಮೆಂಟ್‌ ಕೋಟಾ
*ಪಿಎಸ್ಐ ನೇಮಕದಲ್ಲಿ ಕಾಸಿನಾಟ
*ಸಹಾಯಕ ಪ್ರಾಧ್ಯಾಕರ ನೇಮಕದಲ್ಲೂ ನೋಟಿನಾಟ.
ಜೇಬು ತುಂಬಿಸಿಕೊಳ್ಳುವ ಧನದಾಟ ಬಿಟ್ಟರೆ, ಜನರಿಗೆ ಸರಕಾರ ಮಾಡಿದ್ದೇನು? ಎಂದು ಪ್ರಶ್ನಿಸಿದ್ದಾರೆ.

ನಡುರಸ್ತೆಯಲ್ಲಿ ಹರಿದ ಪ್ರವೀಣ್ ನೆಟ್ಟಾರು ನೆತ್ತರು, ನಾಡಿನ ಆತ್ಮಸಾಕ್ಷಿಯನ್ನು ಕಲಕಿದೆ. ಒಂದೇ ಊರಿನಲ್ಲಿ ಎಂಟೇ ದಿನದಲ್ಲಿ 2 ಕೊಲೆ ನಡೆದಿವೆ ಎಂದರೆ ಈ ಸರಕಾರ ಬದುಕಿದೆಯಾ? ಸತ್ತಿದೆಯಾ? 7/8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 28, 2022

ನಡುರಸ್ತೆಯಲ್ಲಿ ಹರಿದ ಪ್ರವೀಣ್ ನೆಟ್ಟಾರು ನೆತ್ತರು, ನಾಡಿನ ಆತ್ಮಸಾಕ್ಷಿಯನ್ನು ಕಲಕಿದೆ. ಒಂದೇ ಊರಿನಲ್ಲಿ ಎಂಟೇ ದಿನದಲ್ಲಿ 2 ಕೊಲೆ ನಡೆದಿವೆ ಎಂದರೆ ಈ ಸರಕಾರ ಬದುಕಿದೆಯಾ? ಸತ್ತಿದೆಯಾ?

ಸತ್ತ ಸರಕಾರದ ಸಾಹುಕಾರನಿಗೆ ಸಂಭ್ರಮದ ಚಿಂತೆ, ಆಗದ ಸಾಧನೆ ಹೇಳಿಕೊಳ್ಳುವ ಅನಿವಾರ್ಯತೆ..
ಇನ್ನಾದರೂ ಕಂಡೋರ ಮಕ್ಕಳನ್ನು ಸಾವಿನ ದವಡೆಗೆ ನೂಕಿ ಮತ ಫಸಲು ತೆಗೆಯುವ ʼನರಹಂತಕ ರಾಜಕಾರಣʼ ನಿಲ್ಲಲಿ. 8/8 #ಕರಾವಳಿ_ಕೆರಳಿದೆ ಎಂದು ಸಾಲು ಸಾಲು ಟ್ವೀಟ್ಗಳ ಮೂಲಕ ಕಿಡಿಕಾರಿದ್ದಾರೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ರಾಜ್ಯ ಸರ್ಕಾರದಿಂದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ: ಇಲ್ಲಿದೆ ಪಟ್ಟಿ!

Next Post

ಪ್ರವೀಣ್ ನೆಟ್ಟಾರು ಹತ್ಯೆ | ಕೇರಳ-ಕರ್ನಾಟಕ ಪೊಲೀಸರು ಜಂಟಿ ಕಾರ್ಯಚಾರಣೆ ಮಾಡಿದರೆ ಮಾತ್ರ, ಕೊಲೆಗಡುಕರಿಗೆ ಶಿಕ್ಷೆ : ಗೃಹ ಸಚಿವ ಆರಗ ಜ್ಞಾನೇಂದ್ರ

Related Posts

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
0

ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಗೆ (KS Eshwarappa) ಲೋಕಾಯುಕ್ತ (Lokayukta) ಶಾಕ್ ಎದುರಾಗಿದೆ. ಈ ಹಿಂದೆ ಬಿಜೆಪಿ (Bjp) ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಈಶ್ವರಪ್ಪ ಅವರ...

Read moreDetails
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

July 3, 2025
Next Post
ಮತಾಂತರ ನಿಷೇಧ ಕಾಯ್ದೆಯು ಧಾರ್ಮಿಕ ಹಕ್ಕುಗಳನ್ನು ಕಿತ್ತುಕೊಳ್ಳುವುದಿಲ್ಲ : ಆರಗ ಜ್ಞಾನೇಂದ್ರ

ಪ್ರವೀಣ್ ನೆಟ್ಟಾರು ಹತ್ಯೆ | ಕೇರಳ-ಕರ್ನಾಟಕ ಪೊಲೀಸರು ಜಂಟಿ ಕಾರ್ಯಚಾರಣೆ ಮಾಡಿದರೆ ಮಾತ್ರ, ಕೊಲೆಗಡುಕರಿಗೆ ಶಿಕ್ಷೆ : ಗೃಹ ಸಚಿವ ಆರಗ ಜ್ಞಾನೇಂದ್ರ

Please login to join discussion

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
Top Story

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!