ನವದೆಹಲಿ:ಏ.೦6: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಮತ್ತು ಭ್ರಷ್ಟಾಚಾರದ ವಿರುದ್ಧ ಹೋರಾಡಲು ಬಿಜೆಪಿ ಹನುಮನಿಂದ ಸ್ಫೂರ್ತಿ ಪಡೆದುಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ.

ಭಾರತೀಯ ಜನತಾ ಪಕ್ಷದ 44ನೇ ಸಂಸ್ಥಾಪನಾ ದಿನದ ಅಂಗವಾಗಿ ಪಕ್ಷದ ಕಾರ್ಯಕರ್ತರೊಂದಿಗೆ ಮೋದಿಯವರು ಸಂವಾದ ನಡೆಸಿದರು. ಈ ವೇಳೆ ಪಕ್ಷದ ಕಾರ್ಯಕರ್ತರು ಹಾಗೂ ದೇಶದ ಜನತೆಗೆ ಹನುಮ ಜಯಂತಿಯ ಶುಭಾಶಯಗಳನ್ನು ಕೋರಿದರು.


ಇಂದು ಭಾರತವು ಹನುಮಂತನ ಶಕ್ತಿಯಂತೆ ತನ್ನ ಸಾಮರ್ಥ್ಯವನ್ನು ಅರಿತುಕೊಳ್ಳುತ್ತಿದೆ. ಭ್ರಷ್ಟಾಚಾರ, ಕಾನೂನು ಮತ್ತು ಸುವ್ಯವಸ್ಥೆಯ ವಿರುದ್ಧ ಹೋರಾಡಲು ಬಿಜೆಪಿ ಹನುಮಂತನಿಂದ ಸ್ಫೂರ್ತಿ ಪಡೆದುಕೊಂಡಿದೆ. ನಾವು ಹನುಮಂತನ ಇಡೀ ಜೀವನವನ್ನು ನೋಡಿದರೆ, ಏನನ್ನು ಬೇಕಾದರೂ ಮಾಡಬಹುದು ಎಂಬ ಮನೋಭಾವ ಅವರಲ್ಲಿದ್ದದ್ದನ್ನು ಕಂಡು ಕೊಳ್ಳಬಹುದು. ಈ ಮನೋಭಾವವೇ ಹನುಮನಿಗೆ ಎಲ್ಲಾ ರೀತಿಯ ಯಶಸ್ಸನ್ನು ತರುವಲ್ಲಿ ಸಹಾಯ ಮಾಡಿತ್ತು ಎಂದು ಹೇಳಿದರು.







