2023ರ ಕರ್ನಾಟಕ ವಿಧಾನಸಭೆಯ ಫಲಿತಾಂಶ ಹೊರಬಿದ್ದಿದೆ. ರಾಜ್ಯಾದ್ಯಂತ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಮೈಸೂರಿನಲ್ಲಿ ಮತ ಎಣಿಕೆ ಕೇಂದ್ರದ ಬಳಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ʻಬಿಜೆಪಿ ಸರ್ಕಾರದ ದುರಾಡಳಿತಕ್ಕೆ ಜನ ಬೇಸತ್ತಿದ್ದರು. ಕಾಂಗ್ರೆಸ್ ಪಕ್ಷದ ಪರವಾಗಿ ಮತ ಹಾಕಿದ ಎಲ್ಲರಿಗೂ ನಾನು ಧನ್ಯವಾದ ಅರ್ಪಿಸುತ್ತೇನೆ. ನಾನು ಮಾನವತವಾದಿ. ನಾನು ಯಾವುದೇ ಜಾತಿ ವಿರೋಧಿ ಅಲ್ಲ. ಲಿಂಗಾಯತ ವಿರೋಧಿ ಅಂತಾ ನನ್ನ ಬಿಂಬಿಸಲು ಹೊರಟಿದ್ರು. ಆದ್ರೆ ಬಿಜೆಪಿ ಆಟ ಚುನಾವಣೆಯಲ್ಲಿ ನಡೆಯಲಿಲ್ಲ.

ಮೋದಿ, ಅಮಿತ್ ಶಾ , ನಡ್ಡ ನೂರೂ ಬಾರಿ ಬಂದರೂ ಏನೂ ನಡೆಯಲ್ಲ ಅಂತಾ ನಾನು ಹೇಳಿದೆ. ನಾವು ಮೊದಲ ಸಚಿವ ಸಂಪುಟ ಸಭೆಯಲ್ಲಿ ನಾವು ಕೊಟ್ಟ ಭರವಸೆಯನ್ನ ಈಡೇರಿಸುತ್ತೇವೆ. ಸಿಎಂ ಆಯ್ಕೆ ಬಗ್ಗೆ ಹೈ ಕಮಾಂಡ್ ತಿರ್ಮಾನ ಮಾಡ್ತಾರೆ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ರು. ನೀವು ಸಿಎಂ ಅಭ್ಯರ್ಥಿನ ಎಂಬ ಮಾಧ್ಯಮದವರ ಪ್ರಶ್ನೆಗೆ ಸಿದ್ದು ಮಾತನಾಡದೆ ಹೊರಟು ಹೋದರು.