ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರೆ ಹತ್ಯೆ ಪ್ರಕರಣ ಇದೀಗ ಬಿಜೆಪಿ ತೀವ್ರ ತಲೆನೋವಾಗಿ ಪರಿಣಮಿಸಿದೆ. ಹಿಂದೂ ಸಂಘಟನೆಗಳ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರು ಇದೀಗ ಬಿಜೆಪಿ ಹಾಗೂ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರ ನಡುವೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಬಿಜೆಪಿ ವಿರುದ್ಧ ವ್ಯಂಗ್ಯವಾಡಿದ್ದಾರೆ.
ಹೌದು, ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಮುಖಂಡ ಪ್ರವೀಣ ಹತ್ಯೆಯ ವಿಚಾರದಲ್ಲಿ ಬಿಜೆಪಿ ಯಾಕೋ ಇನ್ನು ಗಲಭೆ ಎಬ್ಬಿಸಿಲ್ಲ ಇದು ನಮ್ಮ ಪುಣ್ಯ ಅಂತ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರವೀಣ್ ಹತ್ಯೆ ವಿಚಾರವನ್ನು ಬಿಜೆಪಿ ರಾಜಕೀಯವಾಗಿ ಬಳಸಿಕೊಳ್ಳೋ ಯತ್ನ ಮಾಡುತ್ತದೆ. ಬಿಜೆಪಿಯವರು ಯಾವಾಗ ಬೇಕೊ ಆವಾಗ ಪ್ಲೇಟ್ ಚೇಂಜ್ ಮಾಡುತ್ತಾರೆ. ಆದರೆ ಇನ್ನು ಯಾಕೋ ಹಿಂದೂ ಕಾರ್ಯಕರ್ತ ಕೊಲೆ ಹಳ್ಳಿ ಹಳ್ಳಿಗೂ ಹಬ್ಬಿಸಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಅವರ ಸರ್ಕಾರದಲ್ಲಿ ಅವರ ಕಾರ್ಯಕರ್ತರಿಗೇ ರಕ್ಷಣೆ ಇಲ್ಲ ಇನ್ನು ಜನಸಮಾನ್ಯರ ಗತಿಯೇನು? ಎಂದು ಕಿಡಿಕಾರಿದ್ದಾರೆ.