• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ಎಲ್ಲದರಲ್ಲಿಯೂ ರಾಜಕೀಯ ಮಾಡುತ್ತದೆ : ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
June 11, 2025
in Top Story, ಕರ್ನಾಟಕ, ರಾಜಕೀಯ
0
ಬಿಜೆಪಿ ಎಲ್ಲದರಲ್ಲಿಯೂ ರಾಜಕೀಯ ಮಾಡುತ್ತದೆ : ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬಿಜೆಪಿಯವರು ರಾಜಕೀಯವಾಗಿ ರಾಜಿನಾಮೆ ಕೇಳ್ತಾರೆ: ಸಿ.ಎಂ

ADVERTISEMENT

ಬಿಜೆಪಿಯವರಿಗೆ ಸುಳ್ಳು ಹೇಳಿ ಜನರ ದಾರಿ ತಪ್ಪಿಸುವುದು ಮತ್ತು ರಾಜಕೀಯವಾಗಿ ರಾಜೀನಾಮೆ ಕೇಳುವುದು ಅಭ್ಯಾಸವಾಗಿದೆ. ಬಿಜೆಪಿ ಎಲ್ಲದರಲ್ಲೂ ರಾಜಕೀಯ ಮಾಡೇ ಮಾಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಗೌರಿಬಿದನೂರಿನ ಬೊಮ್ಮಸಂದ್ರ ಗ್ರಾಮದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

C M Siddaramaiah on ED raids: ED ರೇಡ್ ಶಾಕಿಂಗ್ ಹೇಳಿಕೆ ಕೊಟ್ಟ ಸಿಎಂ #pratidhvani

ಬಿಜೆಪಿ ವತಿಯಿಂದ ಮುಖ್ಯಮಂತ್ರಿಗಳ ರಾಜೀನಾಮೆ ಒತ್ತಾಯಿಸಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕುಂಭ ಮೇಳದಲ್ಲಿ 40-50 ಜನ ಕಾಲ್ತುಳಿತದಲ್ಲಿ ಸತ್ತರು. ಆಗ ಅಲ್ಲಿನ ಮುಖ್ಯಮಂತ್ರಿಗಳ ರಾಜೀನಾಮೆ ಕೇಳಿದರೇ? ಸೇತುವೆಯೊಂದು ಉದ್ಘಾಟನೆಯಾದ ದಿನವೇ ಬಿದ್ದು 140 ಜನ ಸತ್ತರು ಆಗ ಪ್ರಧಾನಿಗಳು ರಾಜಿನಾಮೆ ಕೇಳಿದರೇ ? ಗೋಧ್ರಾ ಹತ್ಯಾಕಾಂಡದಲ್ಲಿ ಎಷ್ಟು ಜನ ಸತ್ತರು. ಆಗ ಗುಜರಾತ್ ಮುಖ್ಯಮಂತ್ರಿಗಳು ಯಾರಾಗಿದ್ದರು? ಅವರ ರಾಜಿನಾಮೆ ಕೇಳಿದರೇ? ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಸರಬರಾಜು ಮಾಡದೇ 23 ಜನ ಸತ್ತಾಗ ಬಸವರಾಜ ಬೊಮ್ಮಾಯಿ ರಾಜಿನಾಮೆ ನೀಡಿದರೆ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಬಿಜೆಪಿಯವರು ರಾಜಕೀಯವಾಗಿ ರಾಜಿನಾಮೆ ಕೊಡಿ ಎಂದು ಕೇಳುತ್ತಿದ್ದಾರೆ. ಇದರಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದರು.

ಇಡಿಯವರು ದಾಳಿ ಮಾಡಿದ್ದು ಯಾವುದೇ ಕಾನೂನಿನ ಉಲ್ಲಂಘನೆಯಾಗಿದ್ದರೆ ಅದಕ್ಕೆ ನಾವು ಬೆಂಬಲಿಸುವುದಿಲ್ಲ. ಕಾನೂನು ಪ್ರಕಾರವಾಗಿ ಕ್ರಮ ಕೈಗೊಳ್ಳಲಿ. ಕಾನೂನಿನ ಅನುಷ್ಠಾನಕ್ಕೆ ಅಡ್ಡಿಪಡಿಸುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸಾಮಾಜಿಕ ,ಆರ್ಥಿಕ, ಶೈಕ್ಷಣಿಕ ಸಮೀಕ್ಷೆ: ಮರು ಗಣತಿ

ಜಾತಿ ಗಣತಿ ಬಗ್ಗೆ ಕೆಲವು ದೂರುಗಳು ಬಂದಿವೆ. ಸಮೀಕ್ಷೆ ನಡೆದು 10 ವರ್ಷಗಳಾಗಿದ್ದು, ಹಳೆಯದಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರು ಕಡಿಮೆ ಅವಧಿಯಲ್ಲಿ ಮರುಗಣತಿ ಕೈಗೊಳ್ಳಲು ಸೂಚಿಸಿದ್ದಾರೆ. ವರದಿಯನ್ನು ನಾವು ತಿರಸ್ಕರಿಸುವುದಿಲ್ಲ. ತಾತ್ವಿಕವಾಗಿ ವರದಿಯನ್ನು ಒಪ್ಪಿಕೊಳ್ಳಲಾಗಿದೆ ಎಂದರು.

ಗ್ರೇಟರ್ ಬೆಂಗಳೂರಿಗೆ ತುಮಕೂರು: ಸಚಿವ ಸಂಪುಟದಲ್ಲಿ ಚರ್ಚೆ

ತುಮಕೂರು ಜಿಲ್ಲೆಯನ್ನು ಬೆಂಗಳೂರು ಉತ್ತರ ಎಂದು ನಾಮಕರಣ ಮಾಡಲು ಗೃಹ ಸಚಿವ ಜಿ.ಪರಮೇಶ್ವರ್ ಅವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಸಚಿವ ಸಂಪುಟದ ಮುಂದೆ ಬಂದಾಗ ಪರಿಶೀಲಿಸಲಾಗುವುದು ಎಂದರು.

30 ದಿನಗಳಲ್ಲಿ ವರದಿ
ಕಾಲ್ತುಳಿತ ಪ್ರಕರಣದಲ್ಲಿ ಅನೇಕ ಆಯೋಗ ರಚನೆಯಾಗಿದ್ದು ಇವು ತಾರ್ಕಿಕ ಅಂತ್ಯ ಕಾಣುವುದೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ತನಿಖೆ ಕೈಗೊಳ್ಳಲು ಏಕ ವ್ಯಕ್ತಿ ಆಯೋಗ ರಚನೆ ಮಾಡಿದ್ದು ಅದು 30 ದಿನಗಳಲ್ಲಿ ವರದಿ ಸಲ್ಲಿಸಲಿದೆ. ಈ ಬಗ್ಗೆ ಮಾತನಾಡಲು ಇಚ್ಛಿಸುವುದಿಲ್ಲ ಎಂದರು.

ಪಕ್ಷದ ವರಿಷ್ಠರ ತೀರ್ಮಾನ

ಕಾಂತರಾಜ ಆಯೋಗ ವರದಿ ಬಗ್ಗೆ ಪಕ್ಷದ ವರಿಷ್ಠರ ನಿರ್ಧಾರ ಮುಖ್ಯಮಂತ್ರಿಗಳಿಗೆ ನಿರಾಸೆ ತಂದಿದೆ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿ ಪಕ್ಷದ ವರಿಷ್ಠರು ನಿರ್ಧಾರ ಮಾಡಿದಂತೆ ನಾವು ಕ್ರಮ ಕೈಗೊಳ್ಳುತ್ತೇವೆ. ಇದು ನಮ್ಮ ತೀರ್ಮಾನವಲ್ಲ ಎಂದರು.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣಕ್ಕೆ ಸರ್ಕಾರ ಒತ್ತು ನೀಡಿದೆ

ರಾಜ್ಯದ ವಿಶ್ವ ವಿದ್ಯಾನಿಲಯಗಳಲ್ಲಿಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಮಾತನಾಡಿ ಖಾಲಿ ಇರುವಡೆಗಳಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಲಾಗಿದೆ. ಇನ್ನು ಹೆಚ್ಚಿನ ಉಪನ್ಯಾಸಕರನ್ನು ನೇಮಕ ಮಾಡಲಾಗುವುದು, ಅವರ ವೇತನವನ್ನು ಹೆಚ್ಚಿಸಿ, ಸೌಲಭ್ಯಗಳನ್ನು ನೀಡಲಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣಕ್ಕೆ ನಮ್ಮ ಸರ್ಕಾರ ಒತ್ತುನೀಡಿದೆ ಎಂದರು.

ಮೋದಿಯಿಂದ ದೇಶದ ಬಡತನ ಕಡಿಮೆಯಾಗಿಲ್ಲ

ಮೋದಿ ಆಡಳಿತದಲ್ಲಿ ದೇಶದಲ್ಲಿ ಬಡತನ ಕಡಿಮೆಯಾಗಿದೆ ಎಂಬ ವರದಿಯ ಬಗ್ಗೆ ಪ್ರತಿಕ್ರಿಯೆ ನೀಡಿ ಬಡತನ ಅವರಿಂದ ಕಡಿಮೆಯಾಗಿಲ್ಲ. ಬಡತನ ಹೋಗಲಾಡಿಸಲು ಅವರೇನು ಮಾಡಿದ್ದಾರೆ? ಗರೀಬಿ ಹಟಾವೋ ಸೇರಿದಂತೆ ಹಲವಾರು ಕಾರ್ಯಕ್ರಮಗಳಿಂದ ಬಡತನ ಕಡಿಮೆಯಾಗಿದೆ ಎಂದರು.

ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಠಾನ

ಜಲ ಜೀವನ್ ಯೋಜನೆಯಡಿ ರಾಜ್ಯ ಸರ್ಕಾರ 50% ಅನುದಾನ ನೀಡಿದ್ದಾರೆ 30% ಮಾತ್ರ ಕೇಂದ್ರ ಸರ್ಕಾರ ನೀಡುತ್ತದೆ. 20% ಫಲಾನುಭವಿಗಳು ನೀಡುತ್ತಾರೆ. ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಯಡಿ ರಾಜ್ಯ ಸರ್ಕಾರದ ಪಾಲು ಹೆಚ್ಚಿದ್ದರೂ ಆಯುಷ್ಮಾನ್ ಭಾರತ್ ಯೋಜನೆ ಎನ್ನುತ್ತಾರೆ. ಅನೇಕ ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ಪ್ರಧಾನ ಮಂತ್ರಿಗಳ ಹೆಸರಿರುತ್ತದೆ. ಕುಸುಮ್ ಬಿ ಯೋಜನೆಯಡಿ 30% ಕೇಂದ್ರದಿಂದ ಬರುತ್ತದೆ. ಒಪ್ಪದೇ ಹೋದರೆ ಅದೂ ಬರುವುದಿಲ್ಲ. ರೈತರಿಗೆ ಒಳ್ಳೆಯದಾಗಬೇಕು, ಗ್ರಾಮೀಣ ಪ್ರದೇಶದಲ್ಲಿ ಅಭಿವೃದ್ಧಿಯಾಗಬೇಕೆಂಬ ಉದ್ದೇಶದಿಂದ ಇದನ್ನು ಒಪ್ಪಿಕೊಳ್ಳಬೇಕಾಗುತ್ತದೆ ಎಂದರು.

ಎರಡು ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆ ಪೂರ್ಣವಾಗಲಿದೆ

ಎತ್ತಿನಹೊಳೆ ಯೋಜನೆ ಎರಡು ವರ್ಷಗಳಲ್ಲಿ ಮುಕ್ತಾಯವಾಗಬಹುದು ಎಂದು ತಿಳಿಸಿದ ಮುಖ್ಯಮಂತ್ರಿಗಳು, ಈ ಭಾಗದ ಸಚಿವರು, ಶಾಸಕರು, ಹಾಗೂ ಅಧಿಕಾರಿಗಳ ಸಭೆಯನ್ನು ಕರೆಯಲಾಗಿದೆ ಎಂದರು.

ರಾಜ್ಯದ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ

ರಾಜ್ಯದ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ. ಗ್ಯಾರಂಟಿ ಯೋಜನೆ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳಿಗೂ ಅನುದಾನ ಒದಗಿಸಲಾಗಿದೆ ಎಂದು ಮಾಧ್ಯಮಗಳ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ರಾಜ್ಯಪಾಲರ ಮಾತಿಗೆ ಗಂಭೀರದಿಂದ ಕುಳಿತ ಸಿಎಂ ಸಿದ್ದರಾಮಯ್ಯ #siddaramaiah #pratidhvani

ಕಳೆದ ವರ್ಷ 52000 ಕೋಟಿ ರೂ.ಗಳ ಬಂಡವಾಳ ವೆಚ್ಚ ಇತ್ತು. ಈ ವರ್ಷ 83 ಸಾವಿರ ಕೋಟಿಯಾಗಿದೆ ಎಂದರು. 31000 ಕೋಟಿ ಬಂಡವಾಳ ವೆಚ್ಚ ಒಂದು ವರ್ಷದಲ್ಲಿ ಹೆಚ್ಚಾಗಿದೆ. ಹೀಗಿರುವಾಗ ಸರ್ಕಾರ ದಿವಾಳಿ ಹೇಗೆ ಆಗುತ್ತದೆ. ಗ್ಯಾರಂಟಿ ಯೋಜನೆಗಳಿಗೆ ಐವತ್ತು ಸಾವಿರಕ್ಕೂ ಹೆಚ್ಚು ಅನುದಾನ ಒದಗಿಸಲಾಗಿದೆ ಎಂದರು.

ಎರಡು ವರ್ಷಗಳಲ್ಲಿ 242 ಭರವಸೆಗಳನ್ನು ಈಡೇರಿಸಿದೆ

ನಮ್ಮ ಸರ್ಕಾರ ಎರಡು ವರ್ಷಗಳಲ್ಲಿ 593 ಭರವಸೆಗಳಲ್ಲಿ 242 ಭರವಸೆಗಳನ್ನು ಈಡೇರಿಸಿದ್ದು, ಕೇಂದ್ರ ಸರ್ಕಾರ 600 ಭರವಸೆಗಳನ್ನು ನೀಡಿ ಶೇ.10ರಷ್ಟನ್ನೂ ಅನುಷ್ಠಾನ ಮಾಡಿಲ್ಲ ಎಂದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

BREAKING NEWS : ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ – 7 ವರ್ಷ ಜೈಲು ಶಿಕ್ಷೆಗೆ ತೆಲಂಗಾಣ ಹೈಕೋರ್ಟ್ ತಡೆ 

Next Post

Bangalore Stampede: ಬಿಜೆಪಿಗರು ಐಸಿಸಿ ಅಧ್ಯಕ್ಷ ಜಯ್ ಶಾ ವಿರುದ್ಧ ಹೋರಾಟ ಮಾಡಲಿ : ಬಿ.ಕೆ.ಹರಿಪ್ರಸಾದ್..!!

Related Posts

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ
Top Story

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

by ಪ್ರತಿಧ್ವನಿ
April 30, 2026
0

ದಶಕದ ಹಿಂದೆ ರಾಜ್ಯವನ್ನೇ ಕಂಗೊಳಿಸಿದ್ದ ಧರ್ಮಸ್ಥಳದ 17 ವರ್ಷದ ಬಾಲಕಿ ಸೌಜನ್ಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ ನೀಡಿದೆ. ಪ್ರಕರಣದ...

Read moreDetails
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
Next Post

Bangalore Stampede: ಬಿಜೆಪಿಗರು ಐಸಿಸಿ ಅಧ್ಯಕ್ಷ ಜಯ್ ಶಾ ವಿರುದ್ಧ ಹೋರಾಟ ಮಾಡಲಿ : ಬಿ.ಕೆ.ಹರಿಪ್ರಸಾದ್..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada