• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಖಾತೆ ಹಂಚಿಕೆ ವಿಳಂಬ ಕಾಂಗ್ರೆಸ್ ದಿವಾಳಿತನ ತೋರುತ್ತದೆ: ಹೆಚ್.ಡಿ ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
August 8, 2026
in Top Story, ಕರ್ನಾಟಕ, ರಾಜಕೀಯ
0
ತಮಿಳುನಾಡು ಜನ ಮಾತ್ರ ರೈತರಾ? ಕರ್ನಾಟಕದವರು ರೈತರಲ್ಲವೇ?-ಹೆಚ್.ಡಿ ಕುಮಾರಸ್ವಾಮಿ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಜಾತ್ಯತೀತ ಜನತಾದಳದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಬಿಡದಿ ಬೃಹತ್ ಪಾದಯಾತ್ರೆಗೆ ಮಿತ್ರಪಕ್ಷ ಬಿಜೆಪಿ ನೈತಿಕ ಬೆಂಬಲ ವ್ಯಕ್ತಪಡಿಸಿದೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

HD Kumaraswamy Angry : ಏಯ್.. ಅಲ್ಲಿ ಟಾಯ್ಲೆಟ್ ಕಟ್ತೀನಿ ಅದನ್ನ ಕೇಳೋಕೆ ನೀನ್ಯಾರು..? | pratidhvani

ಜೆಡಿಎಸ್ ಮತ್ತು ಬಿಜೆಪಿ ಹಿರಿಯ ನಾಯಕರ ಸಭೆಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಡದಿ ಟೌನ್ ಶಿಪ್ ಯೋಜನೆಯ ಬಗ್ಗೆ ನಾವು ಅತ್ಯಂತ ವಿವರವಾಗಿ ಚರ್ಚೆ ನಡೆಸಿದ್ದೇವೆ ಹಾಗೂ ಮುಂಬರುವ ವಿಧಾನಕಲಾಪದಲ್ಲಿ ಪ್ರಸ್ತಾಪಿಸಲು ಉದ್ದೇಶಿಸಿರುವ ವಿವಿಧ ವಿಷಯಗಳ ಬಗ್ಗೆ ಸಮಾಲೋಚಿಸಿದ್ದೇವೆ. ಬಿಡದಿ ಪಾದಯಾತ್ರೆಯ ಬೈರಮಂಗಲದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ವರೆಗೂ ಹಮ್ಮಿಕೊಳ್ಳಲಾಗಿದೆ. ನಿಖಿಲ್ ಕುಮಾರಸ್ವಾಮಿ ಅವರು ಪಾದಯಾತ್ರೆಯ ನೇತೃತ್ವ ವಹಿಸಿದ್ದಾರೆ. ಬಿಜೆಪಿ ನಾಯಕರು ಕೂಡ ಪಾದಯಾತ್ರೆಯ ಬಗ್ಗೆ ಅತ್ಯಂತ ಸಕಾರಾತ್ಮಕ ಮನಸ್ಸು ಹೊಂದಿದ್ದು, ಅವರು ಕೂಡ ಪಾದಯಾತ್ರೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳಿಸಿದ್ದಾರೆ ಎಂದು ತಿಳಿಸಿದರು.

ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್, ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಸೇರಿದಂತೆ ಬಿಜೆಪಿಯ ಅನೇಕ ಹಿರಿಯ ನಾಯಕರು ಪಾದಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೇ, ಮುಂಬರುವ ವಿಧಾನಮಂಡಲ ಕಲಾಪದಲ್ಲಿ ಬಿಡದಿ ಟೌನ್‌ಶಿಪ್‌ ವಿಷಯ ಹಾಗೂ ನೈಸ್ ಯೋಜನೆಯ ಅಕ್ರಮಗಳ ಬಗ್ಗೆ ಧ್ವನಿ ಎತ್ತಲು ನಿರ್ಧರಿಸಲಾಗಿದೆ. ಈ ಬಗ್ಗೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಒಮ್ಮತದಿಂದ ಹೋರಾಟ ನಡೆಸಲಿದೆ ಎಂದು ಸಚಿವ ಕುಮಾರಸ್ವಾಮಿ ತಿಳಿಸಿದ್ದಾರೆ.

Kumarswamy on NICE: ಇವತ್ತಿಂದನೇ ನೈಸ್​ರೋಡ್ ಟೋಲ್ ಕಟ್ಟಬೇಡಿ ಅಂತ ಜನಕ್ಕೆ ಹೇಳ್ತೀನಿ ಎಂದ ಕುಮಾರಣ್ಣ #pratidhvani

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಯಾವುದು ಸರಿ ಇಲ್ಲ ಎಂಬುದಕ್ಕೆ ಅನೇಕ ನಿದರ್ಶನಗಳು ಇವೆ. ಸಂಪುಟ ವಿಸ್ತರಣೆಗೆ ತಿಂಗಳಗಟ್ಟಲೆ ಸಮಯ ತೆಗೆದುಕೊಂಡರು. ಈಗ ಖಾತೆ ಹಂಚಿಕೆ ಕೂಡ ನಡೆದಿಲ್ಲ. ಸರ್ಕಾರದ ಕಾರ್ಯವೈಖರಿ ನೋಡಿದರೆ ತುಂಬಾ ನಿರಾಶೆಯಾಗುತ್ತದೆ, ಖಾತೆ ಹಂಚಿಕೆ ವಿಷಯ ಕಾಂಗ್ರೆಸ್ ದಿವಾಳಿತನ ತೋರುತ್ತದೆ. ರಾಜ್ಯ ಹಿಂದೆಂದೂ ಸಿಲುಕಿರದಷ್ಟು ತೀವ್ರ ಬರಕ್ಕೆ ತುತ್ತಾಗಿದೆ. ಸರ್ಕಾರ ಜನರಿಗೆ ನೆರವಾಗುವಲ್ಲಿ ವಿಫಲವಾಗಿದೆ. ಈ ಬಗ್ಗೆಯೂ ಪ್ರಸ್ತಾಪಿಸಿ ಹೋರಾಟ ಮಾಡಲು ನಿರ್ಧರಿಸಲಾಯಿತು ಎಂದು ಮಾಹಿತಿ ನೀಡಿದರು.

Laxman Savadi : ಕಾರ್ಯಕರ್ತರ ಫೇಸ್ ವಾಶ್ ಮಾಡಲ್ಲ, ಸಂಕಷ್ಟ ಬಗೆಹರಿಸ್ತೀನಿ.. #laxmansavadi #congress

ಬಿಡದಿ ವಿಚಾರದಲ್ಲಿ ಸದನದಲ್ಲೂ ಚರ್ಚೆ ಆಗಲೇಬೇಕು. ರೈತರ ಮಹಿಳೆಯರ ಹೋರಾಟವನ್ನು ಇಡೀ ರಾಜ್ಯ ನೋಡುತ್ತಿದೆ. ರೈತರು ಭೂಮಿ ಕೊಡಲು ತಯಾರಿಲ್ಲ. ಕೇವಲ ರೈತರ ಭೂಮಿಯನ್ನು ಲೂಟಿ ಒಡೆಯಲು ಯೋಜನೆಯನ್ನು ಮಾಡುತ್ತಿದ್ದಾರೆ. ಈ ಬಗ್ಗೆ ಬಿಜೆಪಿ ನಾಯಕರು ಜೊತೆ ವಿಸ್ತೃತವಾಗಿ ಚರ್ಚೆ ನಡೆಸಿದ್ದೇನೆ. ಇದಲ್ಲದೇ, ವಾಲ್ಮೀಕಿ ಹಗರಣ, ಬೆಂಗಳೂರಿನಲ್ಲಿ ಅಸಮರ್ಪಕ ಕಸ ವಿಲೇವಾರಿ, ಕೆಪಿಎಸ್ಸಿ ಅಕ್ರಮಗಳು, ಪೊಲೀಸ್ ಇಲಾಖೆ ನೇಮಕಾತಿಯಲ್ಲಿ ನಡೆದಿರುವ ಅಕ್ರಮಗಳು, ಗೃಹಲಕ್ಷ್ಮಿ ಯೋಜನೆಯ ಹಣ ದುರ್ಬಳಕೆ ಮುಂತಾದ ವಿಷಯಗಳ ಬಗ್ಗೆ ಎರಡು ಪಕ್ಷಗಳು ದನಿಯ ಎತ್ತಲಿವೆ ಎಂದು ಕುಮಾರಸ್ವಾಮಿ ಹೇಳಿದರು.

H.D.Kumaraswamy : ರೈತರ ಸಮಸ್ಯೆಗಳನ್ನು ಕಡೆಗಣಿಸಿರುವ ಈ ಕಾಂಗ್ರೆಸ್‌ಗೆ ಪಾಠ ಕಲಿಸ್ತೀವಿ ಎಂದ ಕುಮಾರಸ್ವಾಮಿ..
Previous Post

ಶಿವಗಂಗೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಯುವಕ ದಿಢೀರ್‌ ನಾಪತ್ತೆ: ಶೋಧ ಕಾರ್ಯ ಚುರುಕು

Next Post

ಕೆಪಿಟಿಸಿಎಲ್‌ನ ‘ಡಾರ್ಕ್ ಫೈಬರ್’ ವಾಣಿಜ್ಯ ಬಳಕೆಗೆ: ₹130 ಕೋಟಿ ಹೆಚ್ಚುವರಿ ಆದಾಯದ ನಿರೀಕ್ಷೆ

Related Posts

*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*
ಕರ್ನಾಟಕ

*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*

by ಪ್ರತಿಧ್ವನಿ
August 8, 2026
0

*ಬೆಂಗಳೂರು, ಆಗಸ್ಟ್ 8, 2026*: ಸ್ವಚ್ಚ, ಸುರಕ್ಷಿತ ಬೆಂಗಳೂರಿಗಾಗಿ ಜಿಬಿಎ ಜತೆ ಕೈಜೋಡಿಸಿರುವ ಬೆಸ್ಕಾಂ,ನಗರದ ಜನರಿಗೆ ಸುರಕ್ಷಿತ ನಡಿಗೆಯ ಗ್ಯಾರಂಟಿ ನೀಡುವ ಉದ್ದೇಶದಿಂದ ನಿಗಮದ ವ್ಯವಸ್ಥಾಪಕ ನಿರ್ದೇಶಕ...

Read moreDetails
ಬೆಂಗಳೂರು ಟ್ರಾಫಿಕ್‌ಗೆ AI ಅಸ್ತ್ರ; ಜಾಮ್ ನಿಯಂತ್ರಣಕ್ಕೆ ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್

ಬೆಂಗಳೂರು ಟ್ರಾಫಿಕ್‌ಗೆ AI ಅಸ್ತ್ರ; ಜಾಮ್ ನಿಯಂತ್ರಣಕ್ಕೆ ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್

August 8, 2026
ಗೃಹ ಜ್ಯೋತಿ ಪರಿಷ್ಕರಣೆ: ಫಲಾನುಭವಿಗಳ ಆತಂಕಕ್ಕೆ ಬ್ರೇಕ್‌ ಹಾಕಿದ ಸಚಿವ ಕೆ.ಜೆ ಜಾರ್ಜ್

ಕೆಪಿಟಿಸಿಎಲ್‌ನ ‘ಡಾರ್ಕ್ ಫೈಬರ್’ ವಾಣಿಜ್ಯ ಬಳಕೆಗೆ: ₹130 ಕೋಟಿ ಹೆಚ್ಚುವರಿ ಆದಾಯದ ನಿರೀಕ್ಷೆ

August 8, 2026
ಶಿವಗಂಗೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಯುವಕ ದಿಢೀರ್‌ ನಾಪತ್ತೆ: ಶೋಧ ಕಾರ್ಯ ಚುರುಕು

ಶಿವಗಂಗೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಯುವಕ ದಿಢೀರ್‌ ನಾಪತ್ತೆ: ಶೋಧ ಕಾರ್ಯ ಚುರುಕು

August 8, 2026
SIR ಪ್ರಕ್ರಿಯೆ: ನ್ಯಾಯಾಂಗದ ತೀರ್ಪು ಮತ್ತು ವಿಶ್ಲೇಷಣೆ-ಭಾಗ 3

SIR ಪ್ರಕ್ರಿಯೆ: ನ್ಯಾಯಾಂಗದ ತೀರ್ಪು ಮತ್ತು ವಿಶ್ಲೇಷಣೆ-ಭಾಗ 3

August 8, 2026
Next Post
ಗೃಹ ಜ್ಯೋತಿ ಪರಿಷ್ಕರಣೆ: ಫಲಾನುಭವಿಗಳ ಆತಂಕಕ್ಕೆ ಬ್ರೇಕ್‌ ಹಾಕಿದ ಸಚಿವ ಕೆ.ಜೆ ಜಾರ್ಜ್

ಕೆಪಿಟಿಸಿಎಲ್‌ನ 'ಡಾರ್ಕ್ ಫೈಬರ್' ವಾಣಿಜ್ಯ ಬಳಕೆಗೆ: ₹130 ಕೋಟಿ ಹೆಚ್ಚುವರಿ ಆದಾಯದ ನಿರೀಕ್ಷೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada