• Home
  • About Us
  • ಕರ್ನಾಟಕ
Thursday, January 29, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ರಾಜ್ಯದ ಘನತೆ ಹಾಳು ಮಾಡಿದೆ ; ಸಿದ್ದರಾಮಯ್ಯ

Any Mind by Any Mind
April 16, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ರಾಜ್ಯದ ಘನತೆ ಹಾಳು ಮಾಡಿದೆ ; ಸಿದ್ದರಾಮಯ್ಯ
Share on WhatsAppShare on FacebookShare on Telegram

ಕೋಲಾರ :ಏ.16: ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ 14 ತಿಂಗಳು ಸಮ್ಮಿಶ್ರ ಸರ್ಕಾರ, ಉಳಿದ ನಾಲ್ಕು ವರ್ಷ ಬಿಜೆಪಿ ಸರ್ಕಾರ ಆಡಳಿತ ಮಾಡಿದೆ. ಮೇ 10ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಯಾವ ಪಕ್ಷ ಅಧಿಕಾರ ಮಾಡಲು ಅವಕಾಶ ಕೊಟ್ಟರೆ ರಾಜ್ಯದ ಜನರು, ರಾಜ್ಯದ ನೆಲ, ಜಲ, ಭಾಷೆ ರಕ್ಷಣೆ ಮಾಡುತ್ತಾರೆ ಎಂದು ನೀವು ಆಲೋಚನೆ ಮಾಡಬೇಕು. ಕೇಂದ್ರದಲ್ಲಿ ಕಳೆದ 9 ವರ್ಷಗಳಿಂದ ಬಿಜೆಪಿ ಆಡಳಿತ ಮಾಡುತ್ತಿದೆ. ಕರ್ನಾಟಕದಲ್ಲಿ ಐದು ವರ್ಷಗಳಲ್ಲಿ ಮೂರು ಜನ ಮುಖ್ಯಮಂತ್ರಿಗಳಾಗಿದ್ದಾರೆ. ಮೊದಲು ಕುಮಾರಸ್ವಾಮಿಗಳು, 2 ವರ್ಷ ಯಡಿಯೂರಪ್ಪ ನಂತರದ 2 ವರ್ಷ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ADVERTISEMENT

ಕೋಲಾರದಲ್ಲಿ ನಡೆದ ಜೈ ಭಾರತ ಸಮಾವೇಶದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಪ್ರಧಾನಿ ಮೋದಿ ಹಾಗೂ ಸಿಎಂ ಬೊಮ್ಮಾಯಿ ಅವರು ನಮ್ಮದು ಡಬಲ್ ಇಂಜಿನ್ ಸರ್ಕಾರ ರಾಜ್ಯದ ಅಭಿವೃದ್ಧಿ ವೇಗವಾಗಿ ಆಗಲಿದೆ ಎಂದು ಹೇಳಿದ್ದರು. ಈ ಡಬಲ್ ಇಂಜಿನ್ ಸರ್ಕಾರ ಬಂದ ನಂತರ ರಾಜ್ಯ ಇಷ್ಟು ಕೆಟ್ಟ ಹೆಸರನ್ನು ಹಿಂದೆಂದೂ ತೆಗೆದುಕೊಂಡಿರಲಿಲ್ಲ. ಬಿಜೆಪಿ ಸರ್ಕಾರ ರಾಜ್ಯದ ಘನತೆ ಹಾಳು ಮಾಡಿದೆ. ಗುತ್ತಿಗೆದಾರರ ಸಂಘ, ಅನುದಾನರಹಿತ ಶಿಕ್ಷಣ ಸಂಸ್ಥೆ ರುಪ್ಸಾದವರು ರಾಜ್ಯದಲ್ಲಿ ಪ್ರತಿ ಕೆಲಸಕ್ಕೆ ಈ ಸರ್ಕಾರ 40% ಕಮಿಷನ್ ತೆಗೆದುಕೊಳ್ಳುತ್ತಾರೆ ಎಂದು ಪ್ರಧಾನಿಗೆ ಪತ್ರ ಬರೆದಿದ್ದು, ರಾಜ್ಯದ ಇತಿಹಾಸದಲ್ಲಿ ಇದೇ ಮೊದಲು. ಅಷ್ಟರ ಮಟ್ಟಿಗೆ ಬಿಜೆಪಿ ಸರ್ಕಾರ ರಾಜ್ಯದ ಗೌರವ ಹಾಳು ಮಾಡಿದೆ. ಈ ಬಗ್ಗೆ ಜನ ಬೀದಿ ಬೀದಿಗಳಲ್ಲಿ ಮಾತನಾಡುತ್ತಿದ್ದಾರೆ. ಇಂತಹ ಭ್ರಷ್ಟಾ ಸರ್ಕಾರ ರಾಜ್ಯದ ಇತಿಹಾಸದಲ್ಲಿ ಬಂದಿರಲಿಲ್ಲ ಎಂದರು.

ಕರ್ನಾಟಕದ ಬ್ಯಾಂಕುಗಳನ್ನು ನುಂಗಿ ನೀರು ಕುಡಿದು ಆಗಿದೆ. ಈಗ ನಮ್ಮ ಹೆಮ್ಮೆಯ ನಂದಿನಿ ಸಂಸ್ಥೆ ನುಂಗಲು ಹೊರಟಿದ್ದಾರೆ. ರಾಜ್ಯದಲ್ಲಿ ಹಾಲು ಒಕ್ಕೂಟಗಳನ್ನು ಸಂಘಟಿಸಿ ದಿನಕ್ಕೆ 99 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗಿ ಬೆಂಗಳೂರು ಮತ್ತು ಬೇರೆ ಬೇರೆ ನಗರಗಳಲ್ಲಿ ಮಾರುವ ವ್ಯವಸ್ಥೆ ಕಲ್ಪಿಸಲಾಗಿದೆ. ಲಕ್ಷಾಂತರ ರೈತರು ಹಾಲು ಉತ್ಪಾದಿಸಿ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಅಮಿತ್ ಶಾ ಅವರು ಕೇಂದ್ರ ಸಹಕಾರಿ ಮಂತ್ರಿಯಾದ ನಂತರ ನಂದಿನಿಯನ್ನು ಅಮೂಲ್ ಜತೆ ವಿಲೀನಕ್ಕೆ ಮುಂದಾಗಿದ್ದರು. ಈಗ ಅಮೂಲ್ ಸಂಸ್ಥೆಯ ಹಾಲನ್ನು ರಾಜ್ಯದ ಮಾರುಕಟ್ಟೆಗೆ ಕರೆತಂದು ನಂದಿನಿ ಉತ್ಪನ್ನಗಳ ಜತೆ ಸ್ಪರ್ಧೆಗಿಳಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ನಂದಿನಿ ಉತ್ಪನ್ನಗಳು ದೊರೆಯದಂತೆ ಕೃತಕ ಅಭಾವ ಸೃಷ್ಟಿಸಿ ಅಮೂಲ್ ಉತ್ಪನ್ನಗಳನ್ನು ತರುತ್ತಿದ್ದಾರೆ. ಈ ಕಾರಣದಿಂದಾಗಿ ಹಾಲಿನ ಉತ್ಪಾದನೆ 99 ಲಕ್ಷ ಲೀಟರ್ ನಿಂದ 81 ಲಕ್ಷ ಲೀಟರ್ ಗೆ ಇಳಿದಿದೆ. ನಾನು ಕನ್ನಡಿಗರಲ್ಲಿ ಮಾಡುವ ಮನವಿ ಎಂದರೆ, ಕೇಂದ್ರ ಸರ್ಕಾರದ ಈ ದುಷ್ಟ ಪ್ರಯತ್ನವನ್ನು ನಾವೆಲ್ಲರೂ ತಡೆಗಟ್ಟಬೇಕು. ಇದು ನಮ್ಮ ಕನ್ನಡಿಗರ ಮರ್ಯಾದೆಯ ಪ್ರಶ್ನೆ. ನಾವೆಲ್ಲರೂ ಕನ್ನಡಿಗರು ಅಮೂಲ್ ಉತ್ಪನ್ನಗಳನ್ನು ಖರೀದಿಸದೇ ನಂದಿನಿ ಉತ್ಪನ್ನಗಳನ್ನು ಮಾತ್ರ ಖರೀದಿ ಮಾಡುತ್ತೇವೆ ಎಂಬ ಶಪಥ ಮಾಡಬೇಕು. ಆಮೂಲಕ ಕೇಂದ್ರದ ಹುನ್ನಾರವನ್ನು ತಡೆಗಟ್ಟಬೇಕು.

ಬಿಜೆಪಿ ಸರ್ಕಾರವನ್ನು ಮುಂದಿನ ಚುನಾವಣೆಯಲ್ಲಿ ಕಿತ್ತೊಗೆದು ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ಮತ್ತೆ ತರುವ ಪ್ರಯತ್ನ ಮಾಡಿದರೆ ಕೆಎಂಎಫ್, ರಾಜ್ಯದ ರೈತರ ಬದುಕು ಉಳಿಯುತ್ತದೆ. ಕಾಂಗ್ರೆಸ್ ಪಕ್ಷ ಈಗಾಗಲೇ ನಾಲ್ಕು ಗ್ಯಾರಂಟಿ ಯೋಜನೆ ನೀಡಿದ್ದು, 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡುತ್ತೇವೆ. ಬೆಲೆ ಏರರರಿಕೆಯಿಂದ ತತ್ತರಿಸಿರುವ ಪ್ರತಿ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರ ಪ್ರೋತ್ಸಾಹ ಧನ ನೀಡಲಾಗುವುದು. ಇನ್ನು ಅನ್ನಭಾಗ್ಯ ಯೋಜನೆಯಲ್ಲಿ ಬಡ ಕುಟುಂಬದ ಸದಸ್ಯರಿಗೆ ನೀಡುತ್ತಿರುವ 5 ಕೆ.ಜಿ ಅಕ್ಕಿಯನ್ನು 10 ಕೆ.ಜಿಗೆ ಹೆಚ್ಚಳ ಮಾಡಲಾಗುವುದು. ನಮ್ಮ ಸರ್ಕಾರ 7 ಕೆ.ಜಿ ಅಕ್ಕಿ ನೀಡುತ್ತಿದ್ದು, ಅದನ್ನು ಇಳಇಸಿದ್ದು ಯಾಕೆ ಎಂದು ಸರ್ಕಾರವನ್ನು ಪ್ರಶ್ನಿಸಿದಾಗ, ಅದಕ್ಕೆ ಕೋವಿಡ್ ನಿಂದ ಆರ್ಥಿಕ ಸಮಸ್ಯೆ ಎದುರಾಗಿದೆ ಹೀಗಾಗಿ ಕಡಿಮೆ ಮಾಡುತ್ತಿದ್ದೇವೆ ಎಂದರು. ಅದಕ್ಕೆ ನಾನು ನೀವು ಲಂಚ ಹೊಡೆಯುವುದು ಕಡಿಮೆ ಮಾಡಿದರೆ 7 ಕೆ.ಜಿಯಲ್ಲಿ 10 ಕೆ.ಜಿ ನೀಡಬಹುದು ಎಂದು ಹೇಳಿದೆ. ನಿರುದ್ಯೋಗ ಪದವೀಧರ ಯುವಕರಿಗೆ ಪ್ರತಿ ತಿಂಗಳಂತೆ 2 ವರ್ಷಗಳ ಕಾಲ 3 ಸಾವಿರ, ಡಿಪ್ಲೋಮಾ ಪದವೀಧರರಿಗೆ 1500 ರೂ. ನಿರುದ್ಯೋಗ ಭತ್ಯೆ ನೀಡಲಾಗುವುದು.

ನಮ್ಮ ಕಾಲದಲ್ಲಿ 2 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿದ್ದೆವು. ಈಗ ರಾಜ್ಯದಲ್ಲಿ 2.50 ಲಕ್ಷ ಹುದ್ದೆ ಖಾಲಿ ಇವೆ. ಇದರ ಜತೆಗೆ ಖಾಸಗಿ ಕ್ಷೇತ್ರಗಳಲ್ಲಿ ಉದ್ಯೋಗ ದೊರಕಿಸಿ ಕೊಡಲು ಕೌಶಲ್ಯ ಅಭಿವೃದ್ಧಿಗೆ ಪ್ರತ್ಯೇಕ ಇಲಾಖೆ ಆರಂಭಿಸಿದ್ದೆ. ಈಗ ಅದನ್ನು ಸ್ಥಗಿತಗೊಳಿಸಿದ್ದಾರೆ. ನಾವು ಮತ್ತೆ ಅಧಿಕಾರಕ್ಕೆ ಬಂದ ನಂತರ ಈ ಇಲಾಖೆ ಚುರುಕುಗೊಳಿಸಿ ನಿರುದ್ಯೋಗಿ ಯುವಕರಿಗೆ ಕೌಶಲ್ಯ ತರಬೇತಿ ನೀಡಿ ಖಾಸಗಿ ಕ್ಷೇತ್ರದಲ್ಲಿ ಕೆಲಸ ಸಿಗುವಂತೆ ಮಾಡುತ್ತೇವೆ.

ಯಾವುದೇ ದೇಶದಲ್ಲಿ ಉದ್ಯೋಗ ಸೃಷ್ಟಿಯಾಗದೇ, ಜನರ ಕೈಯಲ್ಲಿ ಹಣವಿಲ್ಲದೆ ದೇಶದ ಆರ್ಥಿಕತೆ, ರಾಜ್ಯದ ಜಿಡಿಪಿ ಬೆಳೆಯಲು ಸಾಧ್ಯವಿಲ್ಲ. ಹೀಗಾಗಿ ನಾವು ಅಧಿಕಾರಕ್ಕೆ ಬಂದಾಗ ಉದ್ಯೋಗ ಸಂಖ್ಯೆ ಹೆಚ್ಚಿಸಿ, ಬಂಡವಾಳ ಹೂಡಿಕೆಗೆ ಉತ್ತಮ ವಾತಾವರಣ ನಿರ್ಮಿಸುತ್ತೇವೆ. ಬಿಜೆಪಿ ದ್ವೇಷದ ರಾಜಕಾರಣದಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಾಶವಾಗಿದೆ. ಇದನ್ನು ಸರಿಪಡಿಸುತ್ತೇವೆ. ಬಿಇಎಂಎಲ್ ಗೆ ಶಕ್ತಿ ತುಂಬುತ್ತೇವೆ.ಈ ಚುನಾವಣೆಯಲ್ಲಿ ಬಿಜೆಪಿ ಸೋಲಿಸಿ, ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು. ಅದಕ್ಕಾಗಿ ಕೋಲಾರ ಜಿಲ್ಲೆಯ 6 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಬೇಕು.

Tags: 2023 election2023 Election ResultAICCassembly electionBJPBJP GovernmentBOMMAIBSYCMCmIbrahimCongress PartyctraviDKShivakumarElection Commissionelection resultHDDHDKjaibharath rallyJanasankalpa YatreJDSKannadaKarnataka ElectionKPCCkumaraswamymallikarjunkhargeNalin Kumar KateelNewsPancharatna YatrePratidhvanirahulgandhisiddaramaiahState ElectionVijayasankalpaಬಿಜೆಪಿಸಿದ್ದರಾಮಯ್ಯ
Previous Post

ನನಗೆ ಟಿಕೆಟ್ ಕೈ ತಪ್ಪಲು ಮಾಜಿ ಸಿಎಂ ಸಿದ್ದರಾಮಯ್ಯ ಕಾರಣ ; ಮಾಜಿ ಶಾಸಕ ವಾಸು ಆರೋಪ

Next Post

ಸಿದ್ದು vs ಡಿಕೆಶಿ ಪೈಪೋಟಿಗೆ ಅಖಂಡ ಶ್ರೀನಿವಾಸ ಬಲಿ?

Related Posts

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ
ಇದೀಗ

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

by ಪ್ರತಿಧ್ವನಿ
January 28, 2026
0

ಬೆಂಗಳೂರು: ರಾಜ್ಯ ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ (85) ಇಂದು ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಂಜೆ ವಿಜಯನಗರದ ತಮ್ಮ ಮನೆಯಿಂದ ಹೊರಗಡೆ ಬಂದಿದ್ದ ಸುಬ್ಬರಾವ್ ಗೆ ಹೃದಯಾಘಾತವಾಗಿದ್ದು,...

Read moreDetails
ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

January 28, 2026
ಬಸ್ ಡ್ರೈವಿಂಗ್ ವೇಳೆ ಚಾಲಕರ ಮೊಬೈಲ್ ಬಳಕೆಗೆ ಕಡಿವಾಣ ಹಾಕಿ : ಸರ್ಕಾರಕ್ಕೆ ಜಯ ಕರ್ನಾಟಕ ಸಂಘಟನೆ ಒತ್ತಾಯ..!

ಬಸ್ ಡ್ರೈವಿಂಗ್ ವೇಳೆ ಚಾಲಕರ ಮೊಬೈಲ್ ಬಳಕೆಗೆ ಕಡಿವಾಣ ಹಾಕಿ : ಸರ್ಕಾರಕ್ಕೆ ಜಯ ಕರ್ನಾಟಕ ಸಂಘಟನೆ ಒತ್ತಾಯ..!

January 28, 2026
ಅಜಿತ್‌ ಪವಾರ್‌ NDA ಕೂಟ ಬಿಟ್ಟು, INDIA ಒಕ್ಕೂಟ ಸೇರ್ಪಡೆಯಾಗಬೇಕಿತ್ತು: ವಿಮಾನ ಅಪಘಾತಕ್ಕೆ ದೀದಿ ಸ್ಪೋಟಕ ತಿರುವು..?

ಅಜಿತ್‌ ಪವಾರ್‌ NDA ಕೂಟ ಬಿಟ್ಟು, INDIA ಒಕ್ಕೂಟ ಸೇರ್ಪಡೆಯಾಗಬೇಕಿತ್ತು: ವಿಮಾನ ಅಪಘಾತಕ್ಕೆ ದೀದಿ ಸ್ಪೋಟಕ ತಿರುವು..?

January 28, 2026
Siddaramaiah: ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

Siddaramaiah: ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

January 28, 2026
Next Post
ಸಿದ್ದು vs ಡಿಕೆಶಿ ಪೈಪೋಟಿಗೆ ಅಖಂಡ ಶ್ರೀನಿವಾಸ ಬಲಿ?

ಸಿದ್ದು vs ಡಿಕೆಶಿ ಪೈಪೋಟಿಗೆ ಅಖಂಡ ಶ್ರೀನಿವಾಸ ಬಲಿ?

Please login to join discussion

Recent News

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?
Top Story

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

by ಪ್ರತಿಧ್ವನಿ
January 28, 2026
ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌
Top Story

ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
January 28, 2026
‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!
Top Story

‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!

by ಪ್ರತಿಧ್ವನಿ
January 28, 2026
JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?
Top Story

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

by ಪ್ರತಿಧ್ವನಿ
January 28, 2026
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್
Top Story

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 28, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

January 28, 2026
ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada