• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ಸರಕಾರ ಕೋಮು ಘಟನೆಯ ಸಾವಿರಾರು ಪ್ರಕರಣ ಕೈಬಿಟ್ಟಿದೆ: ಡಿ.ಕೆ.ಶಿ ತಿರುಗೇಟು

ಪ್ರತಿಧ್ವನಿ by ಪ್ರತಿಧ್ವನಿ
October 4, 2023
in Top Story, ಕರ್ನಾಟಕ
0
ಬಿಜೆಪಿ ಸರಕಾರ ಕೋಮು ಘಟನೆಯ ಸಾವಿರಾರು ಪ್ರಕರಣ ಕೈಬಿಟ್ಟಿದೆ: ಡಿ.ಕೆ.ಶಿ ತಿರುಗೇಟು
Share on WhatsAppShare on FacebookShare on Telegram

ಬೆಂಗಳೂರು: “ಹಿಂದಿನ ಬಿಜೆಪಿ ಸರಕಾರ ಕೋಮು ಘಟನೆಗೆ ಸಂಬಧಪಟ್ಟ ಸಾವಿರಾರು ಪ್ರಕರಣಗಳನ್ನು ಕೈಬಿಟ್ಟಿದೆ. ಜತೆಗೆ ಸಾವಿರಾರು ರೌಡಿ ಶೀಟರ್‌ಗಳನ್ನು ಬೀದಿಗೆ ಬಿಟ್ಟಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿರುಗೇಟು ನೀಡಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳು, ಗಲಭೆ ಪ್ರಕರಣ ಹಿಂಪಡೆಯುವಂತೆ ನೀವು ಪತ್ರ ಬರೆದಿದ್ದೀರಾ ಎನ್ನುವುದನ್ನು ಬಿಜೆಪಿ ಅಸ್ತ್ರವಾಗಿಸಿಕೊಂಡಿದೆ ಎಂದು ಕೇಳಿದ ಪ್ರಶ್ನೆಗೆ ಶಿವಕುಮಾರ್ ಅವರು ಬುಧವಾರ ಉತ್ತರಿಸಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಿಂಪಡೆಯಲಾದ ಕೋಮು ಪ್ರಕರಣಗಳ ಬಗ್ಗೆ ಮಾಹಿತಿ ನೀಡಿದರು.

ADVERTISEMENT

“ಬಿಜೆಪಿಯವರಿಗೆ ತಮ್ಮ ಮನೆ ಹುಳುಕು, ದೋಸೆ ತೂತು ಕಾಣುತ್ತಿಲ್ಲ. ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡದವರು ನಮಗೆ ಪ್ರಶ್ನೆ ಮಾಡುತ್ತಿದ್ದಾರೆ” ಎಂದು ವ್ಯಂಗ್ಯವಾಡಿದರು.

“ಬಿಜೆಪಿಯವರು ಅವರ ಅಧಿಕಾರವಧಿಯಲ್ಲಿ ಏನೇನು ಮಾಡಿದರು ಎಂಬುದು ಜನರಿಗೆ ಗೊತ್ತಿಲ್ಲ ಎಂದು ತಿಳಿದುಕೊಂಡಿದ್ದಾರೆ. ಜನ ಅವರನ್ನು ಎಲ್ಲಿ ಕೂರಿಸಬೇಕೊ ಅಲ್ಲಿ ಕೂರಿಸಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಯಾವ, ಯಾವ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಮನವಿ ಮಾಡಿದವರ ಪಟ್ಟಿ ನಮ್ಮ ಬಳಿ ಇದೆ. ಬಸವರಾಜ ಬೊಮ್ಮಾಯಿ, ಅರಗ ಜ್ಞಾನೇಂದ್ರ, ಮಾಧುಸ್ವಾಮಿ ಅವರು ಸೇರಿದಂತೆ ಅನೇಕರು ಮನವಿ ಮಾಡಿದ್ದರು. 2023 ರ ಜನವರಿ ಹಾಗೂ ಫೆಬ್ರವರಿ ತಿಂಗಳಿನಲ್ಲಿ 7,361 ರೌಡಿಶೀಟರ್‌ಗಳನ್ನು ಪಟ್ಟಿಯಿಂದ ಕೈ ಬಿಟ್ಟಿದ್ದೇ ಬಿಜೆಪಿ ಸರ್ಕಾರ. ಅವರು ಈಗ ನಮಗೆ ಬುದ್ಧಿ ಹೇಳಲು ಬರುತ್ತಿದ್ದಾರೆ” ಎಂದು ತಿಳಿಸಿದರು.

“ಬಿಜೆಪಿಯವರು ಅವರ ಕಾರ್ಯಕರ್ತರ ಪರವಾಗಿ ರಾಜಕಾರಣ ಮಾಡಿದ್ದಾರೆ. ನಾವು ಕಾನೂನು ಪ್ರಕಾರ ನಡೆದುಕೊಳ್ಳುತ್ತಿದ್ದೇವೆ. ಅಮಾಯಕರ ಮೇಲೆ ಇರುವ ಪ್ರಕರಣಗಳನ್ನು ಮಾತ್ರ ಪರಿಶೀಲನೆ ಮಾಡುತ್ತಿದ್ದೇವೆ. ಕಾನೂನಿನ ಚೌಕಟ್ಟಿನಲ್ಲಿ ಮಾಡಲು ಅವಕಾಶವಿದ್ದರೇ ಮಾಡಬಹುದು ಎಂದು ಅಧಿಕಾರಿಗಳು ಶಿಫಾರಸ್ಸು ಮಾಡುತ್ತಾರೆ. ಇದಕ್ಕೆಂದೇ ಸಮಿತಿ ಇದೆ. ಅವರು ವರದಿ ನೀಡಿದ ಮೇಲೆ ತೀರ್ಮಾನ ಮಾಡಲಾಗುತ್ತದೆ” ಎಂದು ಹೇಳಿದರು.

ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ಆತುರಲ್ಲಿ ಇದೆಯೇ ಎನ್ನುವ ಪ್ರಶ್ನೆಗೆ, “ನನ್ನ ಮೇಲೂ ಸಾಕಷ್ಟು ಪ್ರಕರಣಗಳು ಇವೆ, ಈಗಲೂ ಅನೇಕ ಚಾಲ್ತಿಯಲ್ಲಿವೆ. ಅನೇಕ ಪ್ರಕರಣಗಳನ್ನು ರಾಜಕೀಯ ಉದ್ದೇಶಕ್ಕೆ ಹಾಕಲಾಗಿದೆ. ಪ್ರಕರಣ ಹಿಂಪಡೆಯಲು ನಮಗೆ ಏನೂ ಅವಸರ ಇಲ್ಲ, ಬಿಜೆಪಿಯವರೇ ತರಾತುರಿಯಲ್ಲಿ ಇದ್ದಾರೆ. ನೀವು (ಮಾಧ್ಯಮದವರು) ಅವರನ್ನು ಪ್ರತಿದಿನ ತೋರಿಸುತ್ತಾ ಇದ್ದೀರಿ. ಅದಕ್ಕೆ ಅವರು ಆ ರೀತಿ ಹೇಳುತ್ತಿದ್ದಾರೆ” ಎಂದರು.

“ಯಾರ್ಯಾರು ಪ್ರಕರಣ ಹಿಂಪಡೆಯಲು ಪತ್ರ ಬರೆದಿದ್ದರು, ಸಹಿ ಹಾಕಿದ್ದರು ಆ ಪತ್ರಗಳನ್ನೆಲ್ಲಾ ಮುಂದಿಡಲೇ? ನಾನು ಹೆಸರಿಸಿದವರು ಗಲಭೆ ಪ್ರಕರಣಗಳನ್ನು ಹಿಂಪಡೆಯಲು ಶಿಫಾರಸ್ಸು ಮಾಡಿಲ್ಲ ಎಂದು ಹೇಳಲಿ. ಅವರೇ ಬರೆದಿರುವ ಪತ್ರಗಳನ್ನು ಬಿಡುಗಡೆ ಮಾಡುತ್ತೇನೆ” ಎಂದು ಸವಾಲು ಹಾಕಿದರು.

Tags: BangloreBJPDKShivakumarrowdy
Previous Post

ರಾಕ್ಷಸರ ರಾಜ್ಯಭಾರ ಈಗ ನಡೆಯುತ್ತಿದೆ: ಪ್ರತಾಪ್‌ ಸಿಂಹ

Next Post

ವರ್ಗ ಸಂಘರ್ಷ ಕುಲುಮೆಯಿಂದ ಕೋಮುವಾದದ ಹೊಂಡಕ್ಕೆ

Related Posts

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ
ಕರ್ನಾಟಕ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

by ಪ್ರತಿಧ್ವನಿ
April 13, 2026
0

ಬೆಂಗಳೂರು, ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿರುವ ಹಿನ್ನೆಲೆ, ಸಂಚಾರ ಪೊಲೀಸ್ ಸಿಬ್ಬಂದಿಗಳ ಆರೋಗ್ಯ ಹಿತದೃಷ್ಟಿಯಿಂದ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯ ಮೋಹನ್...

Read moreDetails
ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

April 13, 2026
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
Next Post
ವರ್ಗ ಸಂಘರ್ಷ ಕುಲುಮೆಯಿಂದ ಕೋಮುವಾದದ ಹೊಂಡಕ್ಕೆ

ವರ್ಗ ಸಂಘರ್ಷ ಕುಲುಮೆಯಿಂದ ಕೋಮುವಾದದ ಹೊಂಡಕ್ಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada