• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿ ಸರ್ಕಾರದಿಂದ ಅಧಿಕಾರ ದುರ್ಬಳಕೆ: ಡಿ.ಕೆ. ಶಿವಕುಮಾರ್

Any Mind by Any Mind
September 22, 2021
in ಕರ್ನಾಟಕ, ರಾಜಕೀಯ
0
ಪ್ರತಿ ಸನ್ನಿವೇಶದಲ್ಲೂ ಯುವಕರ ಪಾಲುದಾರಿಕೆ ಇದೆ ಎಂದು ತೋರಿಸಿಕೊಟ್ಟದ್ದೇ ರಾಜೀವ್ ಗಾಂಧಿ – ಡಿ ಕೆ ಶಿವಕುಮಾರ್
Share on WhatsAppShare on FacebookShare on Telegram

‘ಚಾಣಕ್ಯ ವಿಶ್ವವಿದ್ಯಾಲಯ ವಿಧೇಯಕದ ಮೂಲಕ ಕಾನೂನುಬಾಹಿರವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಜಮೀನು ನೀಡುವ ಮೂಲಕ ರಾಜ್ಯ ಬಿಜೆಪಿ ಸರಕಾರವು ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

ವಿಧಾನಸೌಧದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜತೆ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು.

ನಾನು ವಿದ್ಯಾಸಂಸ್ಥೆ ನಡೆಸುತ್ತಿದ್ದೇನೆ. ಯಾವುದೇ ಅಸ್ಥಿತ್ವದಲ್ಲಿರುವ ವಿದ್ಯಾಸಂಸ್ಥೆಯು ಖಾಸಗಿ ವಿಶ್ವವಿದ್ಯಾಲಯವಾಗಿ ರೂಪುಗೊಳ್ಳಲು ಅರ್ಜಿ ಹಾಕುವ ಅವಕಾಶವಿದೆ. ಖಾಸಗಿ ವಿವಿ ಹೇಗಿರಬೇಕು? ಯಾರಿಗೆ ಈ ಅವಕಾಶ ನೀಡಬೇಕು ಎನ್ನುವ ಕಾನೂನನ್ನು ವಿಧಾನಸಭೆಯಲ್ಲಿ ತಂದಿದ್ದೇವೆ. ಅದೇ ರೀತಿ, ಎಂ.ಎಸ್. ರಾಮಯ್ಯ, ಸಿಎಂಆರ್, ಕ್ರೈಸ್ಟ್, ಪಿಇಎಸ್ ಸೇರಿದಂತೆ ಅನೇಕ ವಿದ್ಯಾಸಂಸ್ಥೆಗಳು ಅಭಿವೃದ್ಧಿಗೊಂಡು, ಖಾಸಗಿ ವಿಶ್ವ ವಿದ್ಯಾಲಯಗಳಾಗಿ ಮಾನ್ಯತೆ ಪಡೆದಿವೆ.

ಯಾವುದೇ ವಿದ್ಯಾಸಂಸ್ಥೆ ಖಾಸಗಿ ವಿವಿಯಾಗಿ ಮಾನ್ಯತೆ ಪಡೆಯಬೇಕಾದರೆ, 25 ಎಕರೆ ಜಮೀನು, ನಿರ್ದಿಷ್ಠ ಹಣಕಾಸಿನ ನಿಧಿ ಸೇರಿದಂತೆ ಅನೇಕ ಮಾನದಂಡಗಳನ್ನು ನಿಗದಿ ಮಾಡಲಾಗಿದೆ. ಜತೆಗೆ ಖಾಸಗಿ ವಿವಿ ಮಾನ್ಯತೆ ಪಡೆಯಲು ಅರ್ಜಿ ಹಾಕಬೇಕಾದರೆ ಅರ್ಜಿ ಹಾಕುವ ವೇಳೆಗೆ ಅವರು ಐದು ವರ್ಷಗಳ ಅನುಭವ ಹೊಂದಿರಬೇಕು. ಈ ಅವಧಿಯಲ್ಲಿ ಅವರ ಅಕೌಂಟ್ ಆಡಿಟ್ ಆಗಿರಬೇಕು. ಜತೆಗೆ ಈ ವಿದ್ಯಾ ಸಂಸ್ಥೆಗಳು ತಮ್ಮ ಮಾತೃ ವಿಶ್ವವಿದ್ಯಾಲಯಗಳಿಂದ ನಿರಾಕ್ಷೇಪಣ ಪತ್ರ ಪಡೆಯಬೇಕು –  ಹೀಗೆ ಖಾಸಗಿ ವಿವಿ ಮಾನ್ಯತೆ ಪಡೆಯಲು ಅನೇಕ ಮಾನದಂಡಗಳನ್ನು ನಿಗದಿ ಮಾಡಲಾಗಿದೆ.

ಆದರೆ ಈಗ ಸೆಸ್ ಸಂಸ್ಥೆಯು ವಿದ್ಯಾಸಂಸ್ಥೆಯನ್ನೇ ಹೊಂದಿಲ್ಲ. ಅವರಿಗೆ ಈ ರೀತಿ ಜಮೀನು ಮಂಜೂರು ಮಾಡುತ್ತಿರುವುದು ಸರಿಯಲ್ಲ. ನಾಳೆ ಯಾರು ಬೇಕಾದರೂ ಒಂದು ಕಮಿಟಿ ಅಥವಾ ಟ್ರಸ್ಟ್ ಆರಂಭಿಸಿ ಈ ರೀತಿ ವಿವಿ ಹೆಸರಲ್ಲಿ ಸರ್ಕಾರದಿಂದ ಜಮೀನು ಪಡೆಯಲು ಸಾಧ್ಯವೇ?

ವಿದ್ಯಾ ಸಂಸ್ಥೆಗಳಿಗೆ ಸರ್ಕಾರದಿಂದ ಜಮೀನು ನೀಡುವುದು ಸಹಜ. ಈ ಹಿಂದೆ ಹಲವು ವಿದ್ಯಾಸಂಸ್ಥೆಗಳಿಗೆ ನಾವು ಕೂಡ ಈ ರೀತಿ ಜಮೀನು ನೀಡಿದ್ದೇವೆ. ಆದರೆ ಏರೋಸ್ಪೇಸ್ ಗಾಗಿ ಮೀಸಲಿಟ್ಟಿರುವ ವಿಮಾನ ನಿಲ್ದಾಣ ಪಕ್ಕದ ಕೋಟ್ಯಂತರ ರೂಪಾಯಿ ಮೌಲ್ಯದ ವಾಣಿಜ್ಯ ಭೂಮಿಯನ್ನು ಅರ್ಹತೆ ಇಲ್ಲದ ಸಂಸ್ಥೆಗೆ ನೀಡುತ್ತಿರುವುದು ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದಂತಾಗುತ್ತದೆ. ಸಂಪುಟ ಸಭೆ ತೀರ್ಮಾನದ ಪ್ರಕಾರ ರಾಷ್ಟ್ರೀಯ ಹೆದ್ದಾರಿ 207ರಿಂದ ಈ ವಿದ್ಯಾಸಂಸ್ಥೆಗೆ ನೇರವಾಗಿ ಸಂಪರ್ಕ ಸಾಧಿಸಲು ರಸ್ತೆ ನಿರ್ಮಾಣಕ್ಕೂ ಅನುಮತಿ ನೀಡಲಾಗಿದೆ.

ಸರ್ಕಾರ ಈ ವಿದ್ಯಾಸಂಸ್ಥೆಗೆ ಬೇರೆ ಜಿಲ್ಲೆಗಳಲ್ಲಿ ಜಾಗ ನೀಡಬಹುದಲ್ಲವೇ? ಉದ್ಯೋಗ ಸೃಷ್ಟಿಯಾಗುವ ಕೈಗಾರಿಕೆಗಳಿಗೆ, ಐಟಿ, ಬಿಟಿ ಪಾರ್ಕ್ ಗಳಿಗೆ ಜಾಗ ನೀಡುವ ಬದಲು ಈ ಸಂಸ್ಥೆಗೆ ನೀಡುತ್ತಿರುವುದು ಸರಿಯಲ್ಲ. ಮಾಗಡಿಯಲ್ಲಿ ಸಂಸ್ಕೃತ ವಿವಿಗೆ ನೀಡಿರುವ ಜಾಗದ ಪಕ್ಕದಲ್ಲೇ ಬೇಕಾದರೆ ಇದಕ್ಕೂ ನೀಡಲಿ, ಯಾರೂ ಬೇಡ ಎನ್ನುವುದಿಲ್ಲ.

ಆರ್ ಎಸ್ಎಸ್ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲು ಸರ್ಕಾರ ಹಿಂಬಾಗಿಲಿನಿಂದ ಇಂತಹ ಪ್ರಯತ್ನ ಮಾಡುತ್ತಿದೆ. ಆರ್ ಎಸ್ಎಸ್ ನವರು ಈಗಾಗಲೇ ಅನೇಕ ವಿದ್ಯಾ ಸಂಸ್ಥೆಗಳನ್ನು ಹೊಂದಿರುವಂತೆ ಇದನ್ನು ತನ್ನದೇ ಹೆಸರು ಹಾಕಿಕೊಂಡು ನಡೆಸಬಹುದಲ್ಲವೇ? ಈ ರೀತಿ ಅಡ್ಡದಾರಿ ಹಿಡಿಯುವ ಪ್ರಯತ್ನ ಯಾಕೆ? ಸರ್ಕಾರ ಕೂಡಲೇ ತನ್ನ ತೀರ್ಮಾನವನ್ನು ಹಿಂಪಡೆಯಬೇಕು. ಬೇಕಾದರೆ ಬಿಜಾಪುರ, ಕಲ್ಬುರ್ಗಿ ಸೇರಿದಂತೆ ಉತ್ತರ ಕರ್ನಾಟಕದ ಬೇರೆ ಜಿಲ್ಲೆಗಳಲ್ಲಿ ಈ ಸಂಸ್ಥೆಗೆ ಜಮೀನು ನೀಡಲಿ.’ ಈ ವೇಳೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್ ಪಾಟೀಲ್ ಅವರು ಉಪಸ್ಥಿತರಿದ್ದರು.

Tags: BJPCongress PartyD K ShivakumarEducation SystemRSSRSS affiliateಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸದನದಲ್ಲಿ ವಸತಿ ಸಚಿವ ಸೋಮಣ್ಣರನ್ನು ತರಾಟೆಗೆ ತೆಗೆದುಕೊಂಡ : Siddaramaiah

Next Post

ದೇವರ ಚಿಕ್ಕನಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿ ಬೆಂಕಿ ಅವಘಡ: ಸಿಲಿಂಡರ್ ಸ್ಫೋಟ ದುರಂತದಲ್ಲಿ ಓರ್ವ ಮಹಿಳೆ ಸಾವು

Related Posts

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?
ರಾಜಕೀಯ

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

by ಪ್ರತಿಧ್ವನಿ
April 27, 2026
0

ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಹೋರಾಟ ಕೇವಲ ಪಕ್ಷಗಳ ನಡುವಿನ ಪೈಪೋಟಿಯಲ್ಲ, ಪ್ರಾದೇಶಿಕ ಅಸ್ಮಿತೆ ಮತ್ತು ರಾಷ್ಟ್ರೀಯ ರಾಜಕೀಯದ ನಡುವಿನ ಸಂಘರ್ಷವಾಗಿ ರೂಪುಗೊಂಡಿದೆ. ಇದೇ ಹಿನ್ನೆಲೆಯಲ್ಲಿ...

Read moreDetails
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
Next Post
ದೇವರ ಚಿಕ್ಕನಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿ ಬೆಂಕಿ ಅವಘಡ: ಸಿಲಿಂಡರ್ ಸ್ಫೋಟ ದುರಂತದಲ್ಲಿ ಓರ್ವ ಮಹಿಳೆ ಸಾವು

ದೇವರ ಚಿಕ್ಕನಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿ ಬೆಂಕಿ ಅವಘಡ: ಸಿಲಿಂಡರ್ ಸ್ಫೋಟ ದುರಂತದಲ್ಲಿ ಓರ್ವ ಮಹಿಳೆ ಸಾವು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada