• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿ ಸರ್ಕಾರ ಜಿಂದಾಲ್ ಮುಂದೆ ಏಕಾಏಕಿ ಮಂಡಿಯೂರಲೂ ಒಂದು ಕಾರಣವಿದೆ –HD ಕುಮಾರಸ್ವಾಮಿ

Any Mind by Any Mind
April 27, 2021
in ಕರ್ನಾಟಕ
0
ಬಿಜೆಪಿ ಸರ್ಕಾರ ಜಿಂದಾಲ್ ಮುಂದೆ ಏಕಾಏಕಿ ಮಂಡಿಯೂರಲೂ ಒಂದು ಕಾರಣವಿದೆ –HD ಕುಮಾರಸ್ವಾಮಿ
Share on WhatsAppShare on FacebookShare on Telegram

ಜಿಂದಾಲ್‌ ಸ್ಟೀಲ್‌ ಕಂಪೆನಿಗೆ 3677 ಎಕರೆ ಭೂಮಿ ಮಾರಾಟ ಮಾಡಲು ಸರ್ಕಾರ ಅನುಮತಿ ನೀಡಿರುವುದರ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಬಿಜೆಪಿ ಸರ್ಕಾರ ಜಿಂದಾಲ್‌ ಮುಂದೆ ಏಕಾಏಕಿ ಮಂಡಿಯೂರಲೂ ಒಂದು ಕಾರಣವಿದೆ ಎಂದು ಅವರು ಹೇಳಿದ್ದಾರೆ.

ADVERTISEMENT

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಹೆಚ್‌ಡಿಕೆ, ಜಿಂದಾಲ್‌ಗೆ ಜಮೀನು ಮಾರಾಟ ಮಾಡುವ ನಿರ್ಧಾರವನ್ನು ಮೈತ್ರಿ ಸರ್ಕಾರ ಇದ್ದಾಗ ವಿರೋಧ ಮಾಡಿ, ಈವಾಗ ಅದೇ ಜಿಂದಾಲ್‌ಗೆ ಜಮೀನು ಮಾರಿದ್ದರ ಕುರಿತು ಯಡಿಯೂರಪ್ಪ ಸರ್ಕಾರಕ್ಕೆ ಚಾಟಿಯೇಟು ಬೀಸಿದ್ದಾರೆ.  

ಬಿಜೆಪಿ ಸರ್ಕಾರ ಜಿಂದಾಲ್‌ ಮುಂದೆ ಏಕಾಏಕಿ ಮಂಡಿಯೂರಲೂ ಒಂದು ಕಾರಣವಿದೆ. ಅದೇನೆಂದು ಯಡಿಯೂರಪ್ಪರಿಗೆ ಚನ್ನಾಗಿ ಗೊತ್ತಿದೆ. ಅದನ್ನು ಅವರೇ ಬಹಿರಂಗಪಡಿಸಲಿ. ಲೀಸ್‌ ಕಂ ಸೇಲ್‌ ಆಧಾರದ ಭೂಮಿಯನ್ನು ಅಂತಿಮವಾಗಿ ಕ್ರಯ ಮಾಡಿಕೊಡಲೇಬೇಕಾದ ಕಾನೂನು ಬಿಜೆಪಿಗೆ ಈಗಲಾದರೂ ಅರಿವಿಗೆ ಬಂದಿದ್ದರೆ ಸಾಕು. ಇನ್ನಾದರೂ ಬಿಜೆಪಿ ಸಲ್ಲದ ಕಿತಾಪತಿ ಮಾಡದಿರಲಿ.
7/7

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 27, 2021

ಬಿಎಸ್‌ವೈ ಅಹೋರಾತ್ರಿ ಧರಣಿ, ಬಿಜೆಪಿ ಯುವ ಮೋರ್ಚಾದಿಂದ ವಿಧಾನಸೌಧ ಮುತ್ತಿಗೆ, ಮೈತ್ರಿ ಸರ್ಕಾರದ ಮೇಲೆ ಕಿಕ್‌ ಬ್ಯಾಕ್‌ ಆರೋಪ…’ ಜಿಂದಾಲ್‌ಗೆ 3677 ಎಕರೆ ಭೂಮಿ ಮಾರಾಟ ಮಾಡಲು ನಿರ್ಧರಿಸಿದ್ದ ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿ ನಡೆಸಿದ್ದ ಹೋರಾಟಗಳಿವು. ಆದರೆ ಇಂದು ಬಿಜೆಪಿ ಅದೇ ಜಿಂದಾಲ್‌ಗೆ ಅದೇ ಭೂಮಿಯನ್ನು ಸದ್ದಿಲ್ಲದೇ ಮಾರಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ವಿರೋಧಕ್ಕಾಗಿಯೇ ವಿರೋಧ ಮಾಡುವುದು, ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದು ಮುಚ್ಚಿ ಮಾಡುವುದು ಬಿಜೆಪಿಯ ‘ಸಂಸ್ಕೃತಿ’. ಜಿಂದಾಲ್‌ಗೆ ಭೂಮಿ ನೀಡುವ ವಿಚಾರದಲ್ಲಿ ಅಂದು ನನ್ನ ಸರ್ಕಾರದ ವಿರುದ್ಧ, ನನ್ನ ವಿರುದ್ಧ ಸಲ್ಲದ ಆರೋಪ ಮಾಡಿದ್ದ ಬಿಎಸ್‌ವೈ ಇಂದು ಅದೇ ಆರೋಪಗಳನ್ನು ತಮ್ಮ ಮೇಲೆ ಹೊತ್ತುಕೊಳ್ಳುವರೇ?  ಎಂದು ಪ್ರಶ್ನಿಸಿರುವ ಹೆಚ್‌ ಡಿ ಕುಮಾರಸ್ವಾಮಿ, ಆಗ ಕಾಂಗ್ರೆಸ್‌ ಶಾಸಕರಾಗಿದ್ದ, ಈಗ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿರುವ ಆನಂದ್‌ ಸಿಂಗ್‌ ಜಿಂದಾಲ್‌ಅನ್ನು’ಈಸ್ಟ್‌ ಇಂಡಿಯಾ ಕಂಪನಿ’ ಎಂದಿದ್ದರು. ಜಿಂದಾಲ್‌ ವಿರುದ್ಧ ಅಂದಿನ ಗೃಹ ಸಚಿವರಿಗೆ ಪತ್ರ ಬರೆದಿದ್ದರು. ಅವರೇ ಇರುವ ಈಗಿನ ಸಂಪುಟ ಸಭೆ ಜಿಂದಾಲ್‌ಗೆ ಭೂಮಿ ನೀಡಿದೆ. ಆನಂದ್‌ ಸಿಂಗ್‌ ಈಗ ಈಸ್ಟ್‌ ಇಂಡಿಯಾ ಕಂಪನಿ ಪರವಾಗಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.

ಬಳ್ಳಾರಿಯಲ್ಲಿ ಜಿಂದಾಲ್ ಕಂಪೆನಿ ಪರವಾಗಿ 3667 ಎಕರೆ ಭೂಮಿಗೆ ಶುದ್ದ ಕ್ರಯ ಪತ್ರ ನೀಡಲು ಕ್ಯಾಬಿನೆಟ್ ಸಮ್ಮತಿ!
ಬಳ್ಳಾರಿಯಲ್ಲಿ ಜಿಂದಾಲ್ ಕಂಪೆನಿ ಪರವಾಗಿ 3667 ಎಕರೆ ಭೂಮಿಗೆ ಶುದ್ದ ಕ್ರಯ ಪತ್ರ ನೀಡಲು ಕ್ಯಾಬಿನೆಟ್ ಸಮ್ಮತಿ!

ಜಿಂದಾಲ್‌ಗೆ ಭೂಮಿ ನೀಡುವ ವಿಚಾರವಾಗಿ ಅಂದು ಮೈತ್ರಿ ಸರ್ಕಾರದ ಭಾಗವಾಗಿದ್ದುಕೊಂಡೇ ಟೀಕೆ ಮಾಡಿದ್ದ, ದಾಖಲೆ, ಪತ್ರಗಳನ್ನು ಬಿಡುಗಡೆ ಮಾಡಿದ್ದ ಎಚ್‌.ಕೆ ಪಾಟೀಲ್‌ ಅವರು  ಈಗ ಏನು ಮಾಡುತ್ತಿದ್ದಾರೆ. ಅವರ ದಾಖಲೆ ಪತ್ರಗಳೆಲ್ಲವೂ ಎಲ್ಲಿ ಅಡಗಿಕೊಂಡಿವೆ? ಈಗ ಅವುಗಳನ್ನು ಮತ್ತೊಮ್ಮೆ ಬಿಡುಗಡೆ ಮಾಡಲು ಯಾರು ಅಡ್ಡ ಇದ್ದಾರೆ?  ಜಿಂದಾಲ್‌ ಕಂಪನಿಗೆ 3,667 ಎಕರೆ ಭೂಮಿ ಮಾರಾಟ ಮಾಡಲು ಬಿಜೆಪಿ ಸರ್ಕಾರದ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಆದರೆ, ಎಕರೆವಾರು ಶುದ್ಧ ಕ್ರಯಕ್ಕೆ ನಿಗದಿ ಮಾಡಿದ ಮೊತ್ತವೆಷ್ಟು ಎಂಬ ಪ್ರಶ್ನೆಗೆ ಗೃಹ ಸಚಿವರೇ ‘ಗೊತ್ತಿಲ್ಲ’ ಎಂಬ ಉತ್ತರ ನೀಡಿದ್ದಾರೆ. ಸ್ವತಃ ಗೃಹ ಸಚಿವರಿಗೇ ಮಾಹಿತಿ ಇಲ್ಲ ಎಂದರೆ ಏನು ಅರ್ಥ? ಇದನ್ನು ನಂಬಲು ಸಾಧ್ಯವೇ ಎಂದು ಕುಮಾರಸ್ವಾಮಿ ಪ್ರಶ್ನೆ ಹಾಕಿದ್ದಾರೆ.

ಲೀಸ್‌ ಕಂ ಸೇಲ್‌ ಆಧಾರದ ಭೂಮಿಯನ್ನು ಶುದ್ಧ ಕ್ರಯ ಮಾಡಿಕೊಡಬೇಕಾದ್ದು ಕಾನೂನು. ಅದನ್ನೇ ನನ್ನ ಸರ್ಕಾರ ಮಾಡಲು ಹೊರಟಿತ್ತು. ಆದರೆ ಬಿಜೆಪಿ ಕಿತಾಪತಿ ಮಾಡಿತ್ತು. ಜನರಲ್ಲಿ ಮೂಡಬಹುದಾದ ಸಂಶಯ ನಿವಾರಣೆ ಮಾಡಿ ನಂತರ ಭೂಮಿ ನೀಡುವ ನಿರ್ಧಾರಕ್ಕೆ ಬಂದ ನನ್ನ ಸರ್ಕಾರ ಮಾರಾಟ ಪ್ರಕ್ರಿಯೆಯನ್ನು ನಿಲ್ಲಿಸಿತ್ತು. ಬಿಜೆಪಿಗೆ ಈಗ ಜ್ಞಾನೋದಯವಾಗಿದೆ. ಬಿಜೆಪಿ ಸರ್ಕಾರ ಜಿಂದಾಲ್‌ ಮುಂದೆ ಏಕಾಏಕಿ ಮಂಡಿಯೂರಲೂ ಒಂದು ಕಾರಣವಿದೆ. ಅದೇನೆಂದು ಯಡಿಯೂರಪ್ಪರಿಗೆ ಚನ್ನಾಗಿ ಗೊತ್ತಿದೆ. ಅದನ್ನು ಅವರೇ ಬಹಿರಂಗಪಡಿಸಲಿ. ಲೀಸ್‌ ಕಂ ಸೇಲ್‌ ಆಧಾರದ ಭೂಮಿಯನ್ನು ಅಂತಿಮವಾಗಿ ಕ್ರಯ ಮಾಡಿಕೊಡಲೇಬೇಕಾದ ಕಾನೂನು ಬಿಜೆಪಿಗೆ ಈಗಲಾದರೂ ಅರಿವಿಗೆ ಬಂದಿದ್ದರೆ ಸಾಕು. ಇನ್ನಾದರೂ ಬಿಜೆಪಿ ಸಲ್ಲದ ಕಿತಾಪತಿ ಮಾಡದಿರಲಿ ಎಂದು ಅವರು ಹೇಳಿದ್ದಾರೆ.

Previous Post

ಸರ್ಕಾರದ ಮೇಲಿಟ್ಟ ಭರವಸೆ ಕಳೆದುಕೊಂಡು ಜನ ನಮ್ಮ ಜೊತೆ ಅಳಲು ತೋಡಿಕೊಳ್ಳುತ್ತಿದ್ದಾರೆ- ಡಿಕೆಶಿ

Next Post

ಮೇ 2 ಮತ ಏಣಿಕೆ: ವಿಜಯೋತ್ಸವಕ್ಕೆ ಬ್ರೇಕ್‌ ಹಾಕಿದ ಚುನಾವಣಾ ಆಯೋಗ

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
Next Post
ಮೇ 2 ಮತ ಏಣಿಕೆ: ವಿಜಯೋತ್ಸವಕ್ಕೆ ಬ್ರೇಕ್‌ ಹಾಕಿದ ಚುನಾವಣಾ ಆಯೋಗ

ಮೇ 2 ಮತ ಏಣಿಕೆ: ವಿಜಯೋತ್ಸವಕ್ಕೆ ಬ್ರೇಕ್‌ ಹಾಕಿದ ಚುನಾವಣಾ ಆಯೋಗ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada