PSI ನೇಮಕಾತಿ ಪರೀಕ್ಷೆ ಹಗರಣದಲ್ಲಿ ಬಿಜೆಪಿ ಸರ್ಕಾರದ ಪಾತ್ರವಿದ್ದು ಇದನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದೆ. ಈ ಪ್ರಕರಣದಲ್ಲಿ ಮಂತ್ರಿಗಳು ಹಾಗೂ ದೊಡ್ಡ ದೊಡ್ಡ ಅಧಿಕಾರಿಗಳ ಕೈವಾಡವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ಆರೋಪಿಸಿದ್ದಾರೆ.

ಕನಕಗಿರಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರಕರಣದ ತನಿಖೆ ನಡೆಸುವಾಗ ಪಕ್ಷ ಭೇದಮಾಡಬಾರದು. ಯಾರೇ ತಪ್ಪಿತಸ್ಥರಿದ್ದರೂ ಸೂಕ್ತ ತನಿಖೆ ಕೈಗೊಂಡು ಶಿಕ್ಷೆ ನೀಡಬೇಕು. ಮರು ಪರೀಕ್ಷೆಯಿಂದ ಯಾವುದೇ ಪ್ರಯೋಜನವಿಲ್ಲ. ನೊಂದ ಅಭ್ಯರ್ಥಿಗಳಿಗೆ ನ್ಯಾಯ ದೊರೆಯುವುದಿಲ್ಲ. ಸಿಐಡಿ ತನಿಖೆಯಿಂದ ನ್ಯಾಯ ಸಿಗುವುದಿಲ್ಲ. ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.