• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಾವಿರಾರು ಕೋಟಿ ಮೌಲ್ಯದ ಆಸ್ತಿ ಹೊಡೆಯುವ ಅತೀ ದೊಡ್ಡ ಅಕ್ರಮ ಬಯಲು: ಎಚ್.ಡಿ. ಕುಮಾರಸ್ವಾಮಿ ಬಾಂಬ್

ಪ್ರತಿಧ್ವನಿ by ಪ್ರತಿಧ್ವನಿ
September 12, 2022
in ಕರ್ನಾಟಕ
0
ಸಿದ್ದರಾಮಯ್ಯ ಒಬ್ಬ ಸ್ವಾರ್ಥ ಬೀಜಾಸುರ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ
Share on WhatsAppShare on FacebookShare on Telegram

ಸಾವಿರಾರು ಕೋಟಿ ರೂಪಾಯಿ ಬೆಲೆ ಬಾಳುವ ಸರಕಾರದ ಆಸ್ತಿಯನ್ನು ನುಂಗುವ ಮಹಾ ಹುನ್ನಾರದ ಬಗ್ಗೆ ಸ್ಫೋಟಕ ಮಾಹಿತಿ ನೀಡಿರುವ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು; ರಾಜ್ಯ ಸರಕಾರದ ಅತಿದೊಡ್ಡ ಹಗರಣವನ್ನು ವಿಧಾನಸಭೆ ಕಲಾಪದಲ್ಲಿ ಬಯಲು ಮಾಡುವುದಾಗಿ ಘೋಷಿಸಿದ್ದಾರೆ.

ADVERTISEMENT

ವಿಧಾನಸೌಧದಲ್ಲಿ ಸೋಮವಾರ ನಡೆದ ಶಾಸಕಾಂಗ ಪಕ್ಷದ ಸಭೆಯ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಬಿಜೆಪಿಯವರು ಭ್ರಷ್ಟಾಚಾರದ ಬಗ್ಗೆ ದಾಖಲೆಗಳನ್ನು ಕೊಡಿ, ದಾಖಲೆಗಳನ್ನು ಕೊಡಿ ಎಂದು ಪದೇಪದೆ ನನ್ನನ್ನು ಕೆಣಕಿದ್ದಾರೆ. ಸಾವಿರಾರು ಕೋಟಿ ರೂಪಾಯಿ ಬೆಲೆ ಬಾಳುವ ಸರಕಾರಿ ಆಸ್ತಿಯನ್ನು ಅಕ್ರಮವಾಗಿ ಪರಭಾರೆ ಮಾಡಲು ಹೊರಟ ಅತಿದೊಡ್ಡ ಅಕ್ರಮದ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಸದನದಲ್ಲಿ ಈ ವಿಚಾರದ ಬಗ್ಗೆ ಚರ್ಚೆ ಮಾಡಲು‌‌ ಕಾಂಗ್ರೆಸ್ ಪಕ್ಷ ಸಹಕರಿಸಬೇಕು. ಈ ಸರಕಾರದ ಭ್ರಷ್ಟಾಚಾರದ ಬಗ್ಗೆ ಜನರಿಗೆ ಗೊತ್ತಾಗಬೇಕು. ನಾನು ಈ ದಾಖಲೆಗಳನ್ನು ಬಿಡುಗಡೆ ಮಾಡುತ್ತಿರುವುದು ಈ ಸರಕಾರದ ಹಗರಣಗಳ ಒಂದು ಸ್ಯಾಂಪಲ್ ಮಾತ್ರ. ಇದನ್ನು ಬಿಜೆಪಿಯವರು ಅರಗಿಸಿಕೊಳ್ಳಲಿ ಸಾಕು ಎಂದು ಕುಮಾರಸ್ವಾಮಿ ಅವರು ಗುಡುಗಿದರು.

ಸದನದ ಸಮಯ ಹಾಳು ಮಾಡಲಾರೆ:

ನಾನು ಸುಖಾಸುಮ್ಮನೆ ಸದನ ಸಮಯವನ್ನು ಹಾಳು ಮಾಡಲಾರೆ. ಇವತ್ತಿನ ಜೆಡಿಎಲ್ ಪಿ ಸಭೆಯಲ್ಲಿಯೂ ಈ ವಿಷಯದ ಸೇರಿ ಹಲವಾರು ವಿಚಾರವಾಗಿ ಚರ್ಚೆ ಮಾಡಲಾಗಿದೆ. ರಾಜ್ಯದಲ್ಲಿ ಇತ್ತಿಚೆಗೆ ಬೆಂಗಳೂರು ನಗರ ಸೇರಿ 22 ಜಿಲ್ಲೆಯಲ್ಲಿ ಮಳೆ ಹೆಚ್ಚಾಗಿ ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಇದರಿಂದ ದೊಡ್ಡ ಮಟ್ಟದ ನಷ್ಟವಾಗಿದೆ. ಬೆಳೆ ಹಾನಿ, ಮನೆ ಕುಸಿತವೂ ಆಗಿದೆ. ಈ ಬಗ್ಗೆ ಸದನದಲ್ಲಿ ವಿವರವಾಗಿ ಚರ್ಚೆ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಪರ್ಸೆಂಟೇಜ್ ಬಗ್ಗೆ ರಾಜ್ಯದ ಉದ್ದಗಲಕ್ಕೂ ಬೀದಿಲಿ ಚರ್ಚೆ ನಡೆಯುತ್ತಿದೆ. ಅಧಿಕೃತ ವಿರೋಧ ಪಕ್ಷ, ಆಳುವ ಪಕ್ಷಗಳ ನಡುವೆ ರಾಜ್ಯದಲ್ಲಿ ನಡೆಯುತ್ತಿರುವ ಲೂಟಿ ಬಗ್ಗೆ ಬರೀ ಮಾತಿನಲ್ಲಿ ಪೈಪೋಟಿ ನಡೆಯುತ್ತಿದೆ. ನಿಖರವಾಗಿ ದಾಖಲೆಗಳು ಇದ್ದರೆ ಚರ್ಚೆ ಮಾಡಿ ಎಂದು ನಾನು ನಮ್ಮ ಶಾಸಕರಿಗೆ ತಿಳಿಸಿದ್ದೇನೆ. ನಾನು ಕೂಡ ದಾಖಲೆ ಇಟ್ಟುಕೊಂಡೇ ಮಾತನಾಡುತ್ತೇನೆ. ಸುಖಾಸುಮ್ಮನೆ ಸದನದಲ್ಲಿ ಸಂತೆ ಭಾಷಣ ಮಾಡಿದರೆ ಪ್ರಯೋಜನವಿಲ್ಲ. ಸದನದ ಅಮೂಲ್ಯ ಅಮೂಲ್ಯ ಸಮಯ ಸದುಪಯೋಗ ಮಾಡಿಕೊಳ್ಳುವಂತೆ ಶಾಸಕರಿಗೆ ಸಲಹೆ ನೀಡಿದ್ದೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಇತ್ತೀಚೆಗೆ ನಾನು ಸದನದ ಕಲಾಪದಲ್ಲಿ ದೊಡ್ಡ ಮಟ್ಟದ ಚರ್ಚೆಯಲ್ಲಿ ಪಾಲ್ಗೊಂಡಿಲ್ಲ. ಯಾವುದಾದರೂ ಮುಖ್ಯ ವಿಚಾರ ಇದ್ದಾಗ ಭಾಗಿಯಾಗಿದ್ದೇನೆ. ನಾನು ಭಾಗಿಯಾದಾಗ ದಾಖಲೆ ಸಮೇತ ಮಾತನಾಡಿದ್ದೇನೆ. ಒಂದಿಷ್ಟು ಜನ ಹೇಳ್ತಾ ಇದ್ದಾರೆ, ಸದನದಲ್ಲಿ ಕುಮಾರಸ್ವಾಮಿ ಏನು ಮಾತಾಡಿ ಬಿಟ್ಟಾರು ಅಂತ. ಯಾರೋ ಸುಮ್ಮನೆ ನನ್ನನ್ನು ಸುಖಾಸುಮ್ಮನೆ ಅವರತ್ರ ನಾನು ಪಾಠ ಹೇಳಿಸಿಕೊಳ್ಳಬೇಕಿದೆ. ಒಂದಿಷ್ಟು ದಾಖಲೆಗಳನ್ನು ನಾನು ಸ್ಯಾಂಪಲ್ ಆಗಿ ಬಹಿರಂಗ ಮಾಡುತ್ತೇನೆ. ಇದನ್ನು ಒಂದು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇನೆ. ಸಾರ್ವಜನಿಕ ಆಸ್ತಿಯನ್ನು ಹಣಕ್ಕೋಸ್ಕರ ಮಾರಾಟಕ್ಕೆ ಇಡ್ತಾ ಇದ್ದಾರೆ. ಇದಕ್ಕೆ ತಡೆ ಹಾಕಬೇಕಿದೆ ಎಂದು ಅವರು ಮಾಹಿತಿ ನೀಡಿದರು.

ರಾಜ್ಯದಲ್ಲಿ ಭ್ರಷ್ಟಾಚಾರ ಯಾವ ರೀತಿ ಇದೆ ಎನ್ನುವುದು ನಾಡಿನ‌ ಜನತೆಗೆ ಹಾಗೂ ಪ್ರಧಾನಿ ಮೋದಿ ಅವರಿಗೂ ಗೊತ್ತಾಗಲಿ. ಅದಕ್ಕೇ ಎಲ್ಲದಕ್ಕೂ ದಾಖಲೆ ಇಟ್ಟು ಮಾತನಾಡುತ್ತೇನೆ. ಇದು ಭಾರೀ ಹಗರಣ. ಸರ್ಕಾರಕ್ಕೆ ಬರಬೇಕಾದ ಎಂಟತ್ತು ಸಾವಿರ ಕೋಟಿ ರೂಪಾಯಿ ಕಬಳಿಸುವ ಹುನ್ನಾರ ನಡೆದಿದೆ. 1957ನೇ ಇಸವಿಯಿಂದ ರೆ ವಿಷಯ ಇದೆ. ಈ ಸರಕಾರಿ ಆಸ್ತಿಗೆ 2008-09ರಲ್ಲೇ 5 ಸಾವಿರ ಕೋಟಿ ಅಂತ ಅಂದಾಜು ಕಟ್ಟಿದ್ದರು. ಆದರೆ, ಈ ಬಗ್ಗೆ ಸರಕಾರ ಮಾಡಿರುವ ಆದೇಶ ದಿಗ್ಭ್ರಮೆ ಉಂಟು ಮಾಡುವ ರೀತಿಯಲ್ಲಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

Previous Post

ಒತ್ತುವರಿ ತೆರವು ವೇಳೆ ಭೇದಭಾವ ಪ್ರಶ್ನೆಯೇ ಇಲ್ಲ: ಸಿಎಂ ಬೊಮ್ಮಾಯಿ

Next Post

ಬಿಬಿಎಂಪಿ ಜಂಟಿ ಆಯುಕ್ತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಶ್ರೀನಿವಾಸ್‌, ಪಿಎ ಅರೆಸ್ಟ್!‌

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಬಿಬಿಎಂಪಿ ಡಿ ಲಿಮಿಟೇಷನ್ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ಷೇಪ : ನಾಲ್ಕೇ ದಿನಕ್ಕೆ 2 ಸಾವಿರ Objection Letter.!

ಬಿಬಿಎಂಪಿ ಜಂಟಿ ಆಯುಕ್ತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಶ್ರೀನಿವಾಸ್‌, ಪಿಎ ಅರೆಸ್ಟ್!‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada