ಬಿಜೆಪಿ ಸಚಿವರು ಬಿಬಿಎಂಪಿ ಚುನಾವಣೆ ಮೀಸಲಾತಿಯನ್ನು ದುರ್ಬಳಕೆ ಮಾಡಿಕೊಂಡು ಕುತಂತ್ರ ನಡೆಸಿ ನಮ್ಮ ಶಕ್ತಿಯನ್ನು ಕುಂದಿಸುವ ಹುನ್ನಾರ ನಡೆಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಬೃಹತ್ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದ ಕುಮಾರಸ್ವಾಮಿ ಅವರು, ಬಿಬಿಎಂಪಿ ಚುನಾವಣೆ ಮುಂದೂಡಲು ಕುತಂತ್ರ ನಡೆಸಿದ್ದಾರೆ ಅದಕ್ಕೆ ನಾವು ತಕ್ಕ ಉತ್ತರ ನೀಡಬೇಕಿದೆ. ಕಾಂಗ್ರೆಸ್ ಹಾಗೂ ಬಿಜೆಪಿಗಿಂತ ಹೆಚ್ಚಿನ ಸ್ಥಾನಗಳನ್ನು ಜೆಡಿಎಸ್ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಯಾವ ಪಕ್ಷದ ಮುಖಂಡರು ಹೇಳಿಕೆ ಕೊಟ್ಟರು ನಾನು ಇನ್ನು ಮುಂದೆ ತಲೆಕೆಡಿಸಿಕೊಳ್ಳೊಲ್ಲ. ಜನರ ಸಮಸ್ಯೆಗಳನ್ನು ಬಗೆಹರಿಸುವುದಕ್ಕೆ ಒತ್ತು ನೀಡುತ್ತೇನೆ ಎಂದು ತಿಳಿಸಿದರು.












