ವಿಧಾನ ಸಭಾ ಅಧಿವೇಶನದಲ್ಲಿ ಮಂಡಿಸಲಾದ ಮತಾಂತರ ನಿಷೇಧ ಕಾಯ್ದೆ ಭಾರೀ ಗದ್ದಲಕ್ಕೆ ದಾರಿ ಮಾಡಿಕೊಟ್ಟಿದೆ. ಈ ಒಂದು ಮಸೂದೆಯನ್ನು ವಿಧಾನ ಮಂಡಲ ಅಧಿವೇಶನದಲ್ಲಿ ಮಂಡಿಸಿ ಒಪ್ಪಿಗೆ ಪಡೆದ್ದರು. ಪರಿಷತ್ ನಲ್ಲೂ ಇಂದು ಮಸೂದೆ ಮಂಡಿಸಿ ಅನುಮತಿ ಪಡೆಯುವ ಎಲ್ಲಾ ಸಾಧ್ಯತೆಗಳು ಇದೆ ಎನ್ನಲಾಗಿತ್ತು ಆದರೆ ಕೊನೆಯ ಕ್ಷಣದಲ್ಲಿರಾಜ್ಯ ಬಿಜೆಪಿ ಸರ್ಕಾರ ಮಸೂದೆ ಮಂಡನೆಯಿಂದ ಹಿಂದೆ ಸರಿದಿದೆ.
ವಿಧಾನ ಸಭಾ ಅಧಿವೇಶನದಲ್ಲಿ ಬಹುಮತದ ಆಧಾರದಲ್ಲಿ ಅಂಗೀಕಾರ ಆಗಿದೆ. ಆದರೆ ವಿಧಾನ ಪರಿಷತ್ನಲ್ಲಿ ಬಿಜೆಪಿಗೆ ಬಹುಮತ ಇಲ್ಲದ ಕಾರಣ ಮತಾಂತರ ನಿಷೇಧ ಮಸೂದೆ ಮಂಡನೆಗೆ ಹಿಂದೇಟು ಹಾಕಿದ್ದು, ಈ ಬಾರಿ ಮಸೂದೆಯನ್ನು ಮಂಡಿಸಲಾಗುವುದಿಲ್ಲ ಎಂದು ಕೊನೆ ಘಳಿಗೆಯಲ್ಲಿ ನಿರ್ಧರಿಸಿದ್ದಾರೆ. ಈ ಕುರಿತು ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದು, ಮತಾಂತರ ನಿಷೇಧ ಮಸೂದೆಯನ್ನು ಸರ್ಕಾರ ಮಂಡಿಸುತ್ತಿಲ್ಲ. ಮುಂದಿನ ಅಧಿವೇಶನದಲ್ಲಿ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ವಿಧಾನ ಪರಿಷತ್ನಲ್ಲಿ ಮಸೂದೆ/ಬಿಲ್ ಪಾಸಾಗಲು ಕನಿಷ್ಠ 38 ಮತಗಳು ಬೇಕಿದ್ದು ಸದ್ಯ ಈಗ ಬಿಜೆಪಿಲ್ಲಿ ಕೇವಲ 26 ಸದಸ್ಯರಿದ್ದಾರೆ. ಇತ್ತೀಚಿನ ವಿಧಾನ ಪರಿಷತ್ ಫಲಿತಾಂಶಗಳ ಪ್ರಕಾರ ಬಿಜೆಪಿ ಸದಸ್ಯರ ಸಂಖ್ಯೆ 37 ಆಗಿದೆ. ಆದರೆ ಈ ಸದಸ್ಯರ ಸದಸ್ಯತ್ವ ಜನವರಿ 5ರ ನಂತರವಷ್ಟೇ ಶುರುವಾಗಲಿದ್ದು ಈ ಬಿಲ್ ಪಾಸ್ ಮಾಡಲು ಸಾಧ್ಯವಾಗದ ಕಾರಣ ಈ ಬಾರಿ ಬಿಜೆಪಿ ಹಿಂದೆ ಸರಿದಿದೆ.