• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿ ಸರ್ಕಾರ ಬಡವರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ: ಪ್ರಧಾನಿ ನರೇಂದ್ರ ಮೋದಿ

ಪ್ರತಿಧ್ವನಿ by ಪ್ರತಿಧ್ವನಿ
February 27, 2023
in ಕರ್ನಾಟಕ, ರಾಜಕೀಯ
0
ಬಿಜೆಪಿ ಸರ್ಕಾರ ಬಡವರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ: ಪ್ರಧಾನಿ ನರೇಂದ್ರ ಮೋದಿ
Share on WhatsAppShare on FacebookShare on Telegram

ಶಿವಮೊಗ್ಗ: ಬಿಜೆಪಿ ಸರ್ಕಾರ ಬಡವರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ. ಹವಾಯಿ ಚಪ್ಪಲಿ ಧರಿಸುವ ಕಡು ಬಡವರು ಕೂಡ ವಿಮಾನದಲ್ಲಿ ಪ್ರಯಾಣಿಸಬೇಕು. ಇದು ಬಿಜೆಪಿ ಸರ್ಕಾರದ ಧ್ಯೇಯವಾಗಿದೆ.

ADVERTISEMENT

ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು,  ರಾಷ್ಟ್ರಕವಿ ಕುವೆಂಪು ಅವರನ್ನು ಸ್ಮರಿಸಿ, ಕನ್ನಡದಲ್ಲಿಯೇ ಭಾಷಣ ಆರಂಭಿಸಿದರು.

ಶಿವಮೊಗ್ಗದ ಜನರ ಬಹುದಿನಗಳ ಬೇಡಿಕೆ ಈಡೇರಿದೆ. ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ ಎಂದು ಹೇಳಿದರು.

ಈ ವೇಳೆ ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ ಮೋದಿಯವರು, ನೆರದಿದ್ದ ಜನರಿಗೆ ತಮ್ಮ ಮೊಬೈಲ್ ಟಾರ್ಚ್ ಆನ್ ಮಾಡಿ ಬಿಎಸ್ ಯಡಿಯೂರಪ್ಪನವರಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಲು ಹೇಳಿದರು. ಬಳಿಕ ಬಿಎಸ್ ಯಡಿಯೂರಪ್ಪ ಅವರನ್ನು ಕೊಂಡಾಡಿದರು.

ಬಿಎಸ್​ವೈ ವಿಧಾನಸಭೆಯಲ್ಲಿ ಭಾಷಣ ಮಾಡಿದರು. ಇದು ಎಲ್ಲರಿಗೂ ಪ್ರೇರಣೆ ನೀಡುವಂಥದ್ದಾಗಿದ್ದೆ. 50 ವರ್ಷಗಳಿಂದ ಯಡಿಯೂರಪ್ಪನವರು ಜನಸೇವೆಯಲ್ಲಿದ್ದಾರೆ. ಕರ್ನಾಟಕದ ಅಭಿವೃದ್ಧಿ ರಥದಲ್ಲಿ ಅಭಿವೃದ್ಧಿ ಪಥವಿದೆ. ಡಬಲ್​ ಇಂಜಿನ್​ ಸರ್ಕಾರದಿಂದ ಅಭಿವೃದ್ಧಿಯ ರಥ ಸಾಗುತ್ತಿದೆ. ವಿಮಾನಯಾನ ಕ್ಷೇತ್ರದಲ್ಲಿ ಭಾರತ ಸಾಕಷ್ಟು ಅಭಿವೃದ್ಧಿ ಹೊಂದಿದೆ ಎಂದು ತಿಳಿಸಿದರು.

ಅಭಿವೃದ್ಧಿ ರಥದಲ್ಲಿ ಕರ್ನಾಟಕ ಸಾಗುತ್ತಿದೆ. ಡಬಲ್​ ಇಂಜಿನ್​ ಸರ್ಕಾರದಿಂದ ಅಭಿವೃದ್ಧಿಯ ರಥ ಸಾಗುತ್ತಿದೆ. ವಿಮಾನಯಾನ ಕ್ಷೇತ್ರದಲ್ಲಿ ಭಾರತ ಸಾಕಷ್ಟು ಅಭಿವೃದ್ಧಿ ಹೊಂದಿದೆ. 2014ರಕ್ಕಿಂತ ಮೊದಲು ಕೇವಲ ದೊಡ್ಡ ನಗರಗಳಿಗೆ ಮಾತ್ರ ವಿಮಾನ ನಿಲ್ದಾಣ ಸೀಮಿತವಾಗಿತ್ತು. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಸಣ್ಣಪುಟ್ಟ ನಗರಗಳಲ್ಲಿಯೂ ಏರ್​ಪೋರ್ಟ್​ ಮಾಡಲಾಗುತ್ತಿದೆ. ಹಳ್ಳಿ ಹಳ್ಳಿಗೂ ಏರ್‌ಪೊರ್ಟ್‌ ಸಂಪರ್ಕ ಸಾಧ್ಯವಾಗಬೇಕು. ಹೀಗಾಗಿಯೇ 74 ವಿಮಾನ ನಿಲ್ದಾಣ ನಿರ್ಮಿಸಿದ್ದೇವೆ ಎಂದರು.

ಶಿವಮೊಗ್ಗ ಪಶ್ಚಿಮ ಘಟ್ಟದಲ್ಲಿ ಬರುವ ಮಲೆನಾಡಿನ ಹೆಬ್ಬಾಗಿಲು. ಇಲ್ಲಿ ನದಿ, ವನ್ಯ ಸಂಪತ್ತು ಅದ್ಭುತವಾಗಿದೆ. ಇಲ್ಲಿ ಜೋಗ್ ಜಲಪಾತ, ಆನೆಗಳ ಬಿಡಾರವೂ ಇದೆ. ಆಗುಂಬೆಯ ಸೂರ್ಯಾಸ್ತ ಯಾರು ಮರೆಯೋದಕ್ಕೆ ಸಾಧ್ಯವಿಲ್ಲ. ಗಂಗಾ ಸ್ನಾನ, ತುಂಗಾ ಪಾನ ಎಂದು ಉಕ್ತಿಯೇ ಇದೆ. ಸಿಗಂದೂರು ಚೌಡೇಶ್ವರಿ, ಕೋಟೆ ಆಂಜನೇಯ ದೇವಸ್ಥಾನವಿದೆ. ಇಲ್ಲಿಗೆ ವಿಮಾನ ಪ್ರಯಾಣದ ಸಂಪರ್ಕ ಅವಶ್ಯಕವಾಗಿದೆ. ಶಿವಮೊಗ್ಗ ವಿಮಾನ ನಿಲ್ದಾಣದಿಂದ ಅಭಿವೃದ್ಧಿ ಆಗಲಿದೆ. ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲು ಮಾರ್ಗ ನಿರ್ಮಾಣವಾದ್ರೆ ಸಾಕಷ್ಟು ಲಾಭವಾಗಲಿದೆ. ಹಾವೇರಿವರೆಗೂ ಜನರಿಗೆ ಸಂಪರ್ಕ ಸಾಧ್ಯವಾಗುತ್ತದೆ ಎಂದು ಹೇಳಿದರು.

ಇದೇ ವೇಳೆ ಕಾಂಗ್ರೆಸ್ ವಿರುದ್ಧ ಮೋದಿಯವರು ವಾಗ್ದಾಳಿ ನಡೆಸಿದರು.

Tags: ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ನಮ್ಮ ತಂದೆ ರಾಜಾಹುಲಿಗೆ ೮೦ ವಯಸ್ಸಾಗಿಲ್ಲ ಕೇವಲ ೨೫ ವರ್ಷ ಅಂತ ಹೇಳಿದ ಬಿಎಸ್‌ ವೈ ಪುತ್ರಿ..!

Next Post

ರಾಜ್ಯದ ವಿಚಾರದಲ್ಲಿ ಸುಳ್ಳು ಹೇಳಿರುವ ಪ್ರಧಾನಿ ಮೋದಿಯವರು ಜನರಲ್ಲಿ ಕ್ಷಮೆಯಾಚಿಸಬೇಕು: ಸಿದ್ದರಾಮಯ್ಯ

Related Posts

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?
Top Story

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

by ಪ್ರತಿಧ್ವನಿ
May 26, 2026
0

ಬೆಂಗಳೂರು : ರಾಜ್ಯ ರಾಜಕಾರಣ ದೆಹಲಿಗೆ ಶಿಫ್ಟ್‌ ಆಗಿದ್ದು, ಕಾಂಗ್ರೆಸ್‌ ಪಾಳಯದಲ್ಲಿನ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಈ ಕುರಿತು ಈಗಾಗಲೇ ದೆಹಲಿಯಲ್ಲಿರುವ ಸಿದ್ದರಾಮಯ್ಯ ಹಾಗೂ...

Read moreDetails
ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

May 26, 2026
ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

May 26, 2026
ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

May 26, 2026
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ?

May 25, 2026
Next Post
ರಾಜ್ಯದ ವಿಚಾರದಲ್ಲಿ ಸುಳ್ಳು ಹೇಳಿರುವ ಪ್ರಧಾನಿ ಮೋದಿಯವರು ಜನರಲ್ಲಿ ಕ್ಷಮೆಯಾಚಿಸಬೇಕು: ಸಿದ್ದರಾಮಯ್ಯ

ರಾಜ್ಯದ ವಿಚಾರದಲ್ಲಿ ಸುಳ್ಳು ಹೇಳಿರುವ ಪ್ರಧಾನಿ ಮೋದಿಯವರು ಜನರಲ್ಲಿ ಕ್ಷಮೆಯಾಚಿಸಬೇಕು: ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada