ರಾಜ್ಯದಲ್ಲಿ ಚುನಾವಣೆಯ ರಣಕಹಳೆ ಮೊಳಗಿದ್ದು, ಈಗಾಗಲೇ ಪಕ್ಷದ ನಾಯಕರು ಅಖಾಡಕ್ಕಿಳಿದು ಭರ್ಜರಿ ಮತ ಪ್ರಚಾರ ನಡೆಸುತ್ತಿದ್ದಾರೆ. ಈ ಮಧ್ಯೆ ರಾಜಕೀಯ ನಾಯಕರ ನಡುವೆ ವಾಕ್ಸಮರ ಕೂಡ ಮುಂದುವರೆದಿದೆ. ಇಂದು ಹುಬ್ಬಳ್ಳಿಯಲ್ಲಿ ಪ್ರಚಾರದ ವೇಳೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ʻಶೆಟ್ಟರ್ ಮುಖ ನೋಡಿ ವೋಟ್ ಹಾಕ್ತೀವಿ ಅನ್ನೋ ಭಾವನೆ ಜನರಲ್ಲಿ ಬರುತ್ತಿದೆಬಿಜೆಪಿ ರಾಷ್ಟ್ರೀಯ ನಾಯಕರ ಚಾಲೆಂಜ್‌ಅನ್ನ ಜನರೇ ಸ್ವೀಕರಿಸುತ್ತಿದ್ದಾರೆ. ಎಲ್ಲರೂ ನಮ್ಮನ್ನ ಗೆಲ್ಲಿಸಿ ಅಂತಾ ಕ್ಯಾಂಪೇನ್ ಮಾಡಿದ್ರೆ, ಬಿಜೆಪಿಯವ್ರು ಶೆಟ್ಟರ್‌ನನ್ನು ಸೋಲಿಸಿ ಅಂತಾ ಕ್ಯಾಂಪೇನ್ ಮಾಡ್ತಿದ್ದಾರೆ. ಹೀಗಾಗಿ ಜನರಲ್ಲಿ ಸಿಂಪತಿ ಕ್ರಿಯೇಟ್ ಆಗಿದೆ. ಪಕ್ಷ ಬಿಟ್ಟು ಹೊರಗೆ ಹೋದ ಮೇಲೆ ಶೆಟ್ಟರ್ ಶಕ್ತಿ ಏನು ಅಂತಾ ಗೊತ್ತಾಗಿದೆ. ಹೀಗಾಗಿ ಅವರಿಗೆ ತಳಮಳ ಶುರುವಾಗಿದೆ. ನನ್ನನ್ನು ರಾಜಕೀಯವಾಗಿ ಮುಗಿಸಲು ಷಡ್ಯಂತ್ರ ಮಾಡಿದ್ರು. ಪ್ರತಿದಿನ ಒಬ್ಬರು ಬಂದು ಪ್ರಚಾರ ಮಾಡಿ, ಸುತ್ತಾಡಿ ಹೋಗ್ತಿದ್ದಾರೆ. ಬೇರೆ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಬಗ್ಗೆ ಚಿಂತೆಯಿಲ್ಲ, ಕೇವಲ ಶೆಟ್ಟರ್ ಒಬ್ಬರನ್ನು ಸೋಲಿಸಲು ಪ್ರಯತ್ನ ನಡೆಸುತ್ತಿದ್ದಾರೆ.

ಕೇಂದ್ರ ಮಂತ್ರಿಗಳು ಎಲ್ಲಾ ಕಾರ್ಪೋರೇಟರ್‌ಗಳ ಮೇಲೆ ನಿಗಾ ಇಟ್ಟಿದ್ದಾರೆ. ಪ್ರತಿ ಚಲನವಲನದ ಮೇಲೆ ನಿಗಾ ಇಟ್ಟು ಕಾಯುತ್ತಿದ್ದಾರೆ. ನಮ್ಮ ಬೆಂಬಲಿಗರಿಗೆ ಬೆದರಿಕೆ ಹಾಕುತ್ತಿದ್ದಾರೆ. ಬಿಜೆಪಿ ಮಾತ್ರವಲ್ಲಾ, ಕಾಂಗ್ರೆಸ್ ಕಾರ್ಪೊರೇಟರ್‌ಗಳಿಗೆ ಧಮ್ಕಿ ಹಾಕುತ್ತಿದ್ದಾರೆ ಎಂದರು. ʻಬಿ.ಎಲ್. ಸಂತೋಷ್‌ಗೆ ಡೈರೆಕ್ಟ್ ಫೈಟ್ ಮಾಡುವ ಸ್ವಭಾವವಿಲ್ಲ. ಹಿಂಬಾಗಿಲ ರಾಜಕೀಯ ಮಾಡುವುದೇ ಇವರ ಸ್ವಭಾವ. ಬಿ.ಎಲ್. ಸಂತೋಷ್ ಬಗ್ಗೆ ರಾಷ್ಟ್ರದಲ್ಲಿ ಮೊದಲು ಧ್ವನಿ ಎತ್ತಿದವನೇ ನಾನು. ಬಹಳಷ್ಟು ಜನ ಫೋನ್ ಮಾಡಿ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಯಾವುದೇ ಲಾಬಿ ಮಾಡಿ, ಕೈಕಾಲು ಹಿಡಿದು ರಾಜಕೀಯ ಮಾಡಿದವನು ನಾನಲ್ಲಾ. ಬಿ.ಎಲ್. ಸಂತೋಷ್ ಅವರೇ ತೇಜಸ್ವಿನಿ ಅನಂತಕುಮಾರ್‌ಗೆ ಟಿಕೆಟ್ ಕೈತಪ್ಪಿಸಿದ್ರು. ಲಿಂಗಾಯತ ಲೀಡರ್‌ಶಿಪ್ ಇಲ್ಲದೆ ಸರ್ಕಾರ ಮಾಡ್ತೇವೆ ಅಂತಾ ಹೊರಟಿದ್ದಾರೆ. ಈಶ್ವರಪ್ಪ, ಯಡಿಯೂರಪ್ಪ ಯಾರೇ ನನಗೆ ಬೈದರೂ ಆಶಿರ್ವಾದ ಅಂತಾ ತೆಗೆದುಕೊಳ್ತೇನೆ. ಇನ್ನೊಬ್ಬರ ಹೆಗಲ ಮೇಲೆ ಬಂದೂಕು ಇಟ್ಟು ಹೊಡೆಯುವುದು ಬಿಡಲಿ. ನೇರವಾಗಿ ನನ್ನ ಜೊತೆ ಯುದ್ಧಕ್ಕೆ ಬರಲಿ. ನಾನು ಹೊರಗೆ ಹೋದ್ರೆ ಐಡಿಯಾಲಜಿ ನೆನಪಾಗಿದೆ. ಕಾಂಗ್ರೆಸ್‌ನವರನ್ನು ಕರೆತಂದು ಸರ್ಕಾರ ಮಾಡಿದಾಗ ಇವರ ಐಡಿಯಾಲಜಿ ಎಲ್ಲಿ ಹೋಗಿತ್ತು?ಕಾಂಗ್ರೆಸ್ ಐಡಿಯಾಲಜಿ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗೆ ಇಲ್ಲ. ಕ್ರಿಮಿನಲ್‌ಗಳಿಗೆ ಟಿಕೆಟ್ ಕೊಡುತ್ತಿರುವ ಬಿಜೆಪಿಯಲ್ಲಿ ಯಾವುದೇ ಐಡಿಯಾಲಜಿ ಉಳಿದಿಲ್ಲ. ಬಿಜೆಪಿ ನನಗೆ ಟೀಕಿಸಿದಷ್ಟು ನಾನು ಜಯದ ಹತ್ತಿರ ಹೋಗುತ್ತೇನೆ. ನಾನು ಎಲ್ಲವನ್ನೂ ಫೇಸ್ ಮಾಡುತ್ತಿದ್ದೇನೆ, ಐತಿಹಾಸಿಕ ಗೆಲುವು ಸಾಧಿಸುತ್ತೇನೆ ಅಂತ ಜಗದೀಶ್ ಶೆಟ್ಟರ್ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.