
ಬಿಜೆಪಿ ವಿರುದ್ಧವೇ ಪದೇ ಪದೇ ಮಾತನಾಡ್ತಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.

ಪಕ್ಷ ವಿರೋಧಿ ಕೆಲಸಗಳ ಕಾರಣಕ್ಕೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯಿಂದ ಯತ್ನಾಳ್ಗೆ ನೋಟಿಸ್ ನೀಡಲಾಗಿತ್ತು. ಶೋಕಾಸ್ ನೋಟಿಸ್ಗೆ ಕೊಟ್ಟಿದ್ದ ಉತ್ತರ ಸಮಾಧಾನ ತರದೆ ಇರುವ ಕಾರಣಕ್ಕೆ ಉಚ್ಛಾಟನೆ ಮಾಡಲಾಗಿದೆ.

ಶೋಕಾಸ್ ನೋಟಿಸ್ ಕೊಟ್ಟರೂ ಸಮರ್ಪಕ ಉತ್ತರ ನೀಡಿರಲಿಲ್ಲ ಎನ್ನಲಾಗಿದೆ. ಪದೇ ಪದೇ ಪಕ್ಷದ ಶಿಸ್ತು ಉಲ್ಲಂಘನೆ ಮಾಡುತ್ತಿರುವ ಹಿನ್ನೆಲೆಯಲ್ಲಿ 6 ವರ್ಷಗಳ ಕಾಲ ಯತ್ನಾಳ್ ಉಚ್ಛಾಟನೆ ಮಾಡಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಕ್ರಮ ತೆಗೆದುಕೊಂಡಿದೆ.