ಬಡವರನ್ನು ಬಡವರಾಗಿಯೇ ಮಾಡುವುದು ಬಿಜೆಪಿ ಸಿದ್ಧಾಂತವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಪೆಟ್ರೋಲ್, ಡೀಸೆಲ್ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದು, ಜನ ಸಾಮಾನ್ಯರಿಗೆ ತೊಂದರೆ ಆಗುತ್ತಿದೆ. ಈ ನೀತಿಯಿಂದಾಗ ಬಡವರು ಬಡವರಾಗಿಯೇ ಉಳಿಯಲಿದ್ದಾರೆ ಎಂದು ಹೇಳುದ್ದಾರೆ.
ಆದರೆ ಜನರ ಸಮಸ್ಯೆಗೆ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸ್ಪಂದಿಸಲ್ಲ ಎಂದು ಆರೋಪಿಸಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಗಳೂರಿಗೆ ಬಂದಿದ್ದರು. ಪಕ್ಷ ಸಂಘಟನೆ ಬಗ್ಗೆ ಅವರೊಂದಿಗೆ ಚರ್ಚಿಸಲಾಗಿದೆ. ಪ್ರಸ್ತುತ ದಿನಗಳಲ್ಲಿ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಗೆ ತರಬೇತಿ ನೀಡುವುದು ಅಗತ್ಯವಾಗಿದೆ ಎಂದು ತಿಳಿಸಿದರು.