ಕೋಲಾರ : ಮಾಲೂರು ಬಳಿಕ ಕೆಜಿಎಫ್ನಲ್ಲಿಯೂ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಭುಗಿಲೆದ್ದಿದೆ. ಕೆಜಿಎಫ್ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಕೈ ತಪ್ಪಿರುವ ಹಿನ್ನೆಲೆಯಲ್ಲಿ ಮೋಹನ್ ಕೃಷ್ಣ ಬೆಂಬಲಿಗರ ಜೊತೆ ಸಭೆ ನಡೆಸುತ್ತಿದ್ದಾರೆ. ಬೆಂಬಲಿಗರು ಹಾಗೂ ಮುಖಂಡರಿಂದ ಅಭಿಪ್ರಾಯ ಸಂಗ್ರಹಿಸಿ ಬಳಿಕ ತಮ್ಮ ನಿರ್ಧಾರ ಘೋಷಿಸಲಿದ್ದಾರೆ.

ಬಿಜೆಪಿಯಿಂದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಮೋಹನ್ ಕೃಷ್ಣ ಇದೀಗ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮೂಲಕ ಕೇಸರಿ ಪಾಳಯಕ್ಕೆ ಸೆಡ್ಡು ಕೊಡುವ ಸಾಧ್ಯತೆಯಿದೆ ಎಂದು ನಿರೀಕ್ಷಿಸಲಾಗಿದೆ. ಮಾಜಿ ಶಾಸಕ ವೈ.ಸಂಪಂಗಿ ಮಗಳಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿರೋದು ಮೋಹನ್ ಕೃಷ್ಣ ಆಕ್ರೋಶಕ್ಕೆ ಕಾರಣವಾಗಿದೆ.
ಸ್ಥಳೀಯ ಸಂಸದ ಎಸ್ ಮುನಿಸ್ವಾಮಿ ಕುತಂತ್ರದಿಂದ ನನಗೆ ಟಿಕೆಟ್ ಕೈ ತಪ್ಪಿದೆ. ಸಂಸದರು ಜಾತಿ – ಜಾತಿಗಳ ನಡುವೆ ವಿಷ ಬೀಜ ಬಿತ್ತುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಮೋಹನ್ ಕೃಷ್ಣ ಶಕ್ತಿ ಏನೆಂದು ತೋರಿಸುತ್ತೇನೆ. ನಾನು ರಾಜಕೀಯಕ್ಕೆ ಹಣ ಮಾಡೋಕೆ ಬಂದಿಲ್ಲ ಎಂದು ಹೇಳುತ್ತಾ ಮೋಹನ್ ಕೃಷ್ಣ ಭಾವುಕರಾಗಿದ್ದಾರೆ.