• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿ ಪ್ರಜಾಪ್ರಭುತ್ವ ವಿರೋಧಿ- ಸಂವಿಧಾನ ವಿರೋಧಿ-ಜನ ವಿರೋಧಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Any Mind by Any Mind
July 19, 2023
in ಕರ್ನಾಟಕ, ರಾಜಕೀಯ
0
ಸಿದ್ದರಾಮಯ್ಯ ಬಜೆಟ್​ನಲ್ಲಿ ಕೊಟ್ಟಿದ್ದೇನು..? ಯಾವ ಯೋಜನೆ ಜಾರಿ..? ಯಾವುದಕ್ಕೆ ಕೊಕ್..?
Share on WhatsAppShare on FacebookShare on Telegram

ಬೆಂಗಳೂರು ಜು 19: ನಾವು ಬಸವಣ್ಣನವರ ಸಂಸ್ಕಾರದಂತೆ ನುಡಿದಂತೆ ನಡೆದು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದನ್ನು ನಾಡಿನ ಜನ ಸ್ವಾಗತಿಸಿದ್ದಾರೆ, ಸಂಭ್ರಮಿಸಿದ್ದಾರೆ. ಇದನ್ನು ಬಿಜೆಪಿ ಯವರಿಗೆ ಸಹಿಸಲು ಆಗುತ್ತಿಲ್ಲ, ಸಂಕಟ ತಡೆದುಕೊಳ್ಳಲು ಆಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ADVERTISEMENT

ವಿದಾನಸಭಾ ಅಧಿವೇಶನದಲ್ಲಿ ಬಿಜೆಪಿ ಸದಸ್ಯರು ಸ್ಪೀಕರ್ ಮುಖಕ್ಕೆ ಪೇಪರ್ ಹರಿದು ಎಸೆದದ್ದು ಮತ್ತು ಸ್ಪೀಕರ್ ಪೀಠಕ್ಕೆ ಅವಮಾನಿಸಿದ್ದನ್ನು ವಿರೋಧಿಸಿ ಸದನದಲ್ಲಿ ಮಾತನಾಡಿದರು.

ಕರ್ನಾಟಕ ವಿಧಾನಸಭೆಯಲ್ಲಿ ಇಂದು ಅತ್ಯಂತ ಬೇಸರದ ದಿನ. ನಮ್ಮ ಐದು ಗ್ಯಾರಂಟಿಗಳನ್ನು ನಾಡಿನ ಜನ‌ತೆ ಅತ್ಯಂತ ಹೃದಯಪೂರ್ವಕವಾಗಿ ಸ್ವಾಗತಿಸಿದ್ದು ಬಿಜೆಪಿ ಶಾಸಕರ ಹೊಟ್ಟೆಗೆ ಬೆಂಕಿ ಬಿದ್ದಂತಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅರ್ಥಪೂರ್ಣ ವಿರೋಧ ಪಕ್ಷ ಇರಬೇಕು ಎನ್ನುವುದು ನನ್ನ ನಂಬಿಕೆ. ಈ ಕಾರಣಕ್ಕೇ ನಾವು ಬಿಜೆಪಿ ಮುಕ್ತ ಎನ್ನುವ ಮಾತನ್ನು ಯಾವತ್ತೂ ಆಡಿಲ್ಲ. ಇವರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಗೌರವ ಇಲ್ಲ.

ಅಂಬೇಡ್ಕರ್, ಬುದ್ದ, ಬಸವ ಮುಂತಾದ ಮಹನೀಯರ ಪ್ರಜಾಪ್ರಭುತ್ವವಾದಿ ಮೌಲ್ಯಗಳ ಮುಂದುವರೆದ ಪರಂಪರೆಯ ಪ್ರಾತಿನಿಧಿಕ ಸಂಸ್ಥೆಯಾಗಿದ್ದ ವಿಧಾನಸಭೆಗೆ ಅಗೌರವ ಸಲ್ಲಿಸಿದ್ದಾರೆ.

ಪ್ರಜಾಪ್ರಭುತ್ವ ಮಾದರಿಯಲ್ಲಿ ಮತ್ತು ಸದನದ ನಿಯಮಾವಳಿಗಳ ಆಧಾರದಲ್ಲಿ ಪ್ರತಿಭಟನೆ ನಡೆಸಲು ಬಿಜೆಪಿಯವರಿಗೆ ಅವಕಾಶ ಇತ್ತು. ಆದರೆ ಸ್ಪೀಕರ್ ಮುಖಕ್ಕೆ ಪತ್ರ ಎಸೆಯುವುದು, ಸ್ಪೀಕರ್ ಪೀಠಕ್ಕೆ ಎಸೆಯುವುದು, ಅವಮಾನ ಮಾಡುವುದು ನಿಯಮ ಬಾಹಿರ. ಇದು ಅನಾಗರೀಕ ನಡವಳಿಕೆಯಲ್ಲವೇ ಎಂದು ಪ್ರಶ್ನಿಸಿದರು.

ಹೆಚ್.ಡಿ.ಕುಮಾರಸ್ವಾಮಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದ ಸಂದರ್ಭದಲ್ಲೂ ಐಎಎಸ್ ಅಧಿಕಾರಿಗಳನ್ನೇ ಲೈಸನಿಂಗ್ ಅಧಿಕಾರಿಗಳನ್ನಾಗಿ ಮಾಡಿದ್ದರು. ಆದೆಲ್ಲಾ ಅವರಿಗೆ ಮರೆತುಹೋಯ್ತಾ ?

ದಿವಂಗತ ಅನಂತ್ ಕುಮಾರ್ ಅವರು ಬದುಕಿದ್ದಾಗ ರಾಜ್ಯದಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿ ಸಭೆಗೆ ಬರುವ ಬಿಜೆಪಿ ರಾಷ್ಟ್ರೀಯ ನಾಯಕರನ್ನು ರಾಜ್ಯದ ಅತಿಥಿಗಳನ್ನಾಗಿ ಘೋಷಿಸಿ ಆ ಶಿಷ್ಟಾಚಾರದಂತೆ ಕ್ರಮ ವಹಿಸಲು ನನ್ನ ಬಳಿ ಬಂದು ಮನವಿ ಮಾಡಿದ್ದರು. ಆಗ ನಾನು ಮುಖ್ಯಮಂತ್ರಿ ಆಗಿ ಬಿಜೆಪಿ ನಾಯಕರಿಗೆ ಶಿಷ್ಟಾಚಾರದ ಪ್ರಕಾರ ರಾಜ್ಯದ ಅತಿಥಿಗಳು ಎಂದು ಘೋಷಿಸಿ ಗೌರವ ನೀಡಿದ್ದೆವು. ಇದು ಬಿಜೆಪಿಯವರಿಗೆ ಸ್ಪಷ್ಟವಾಗಿ ಗೊತ್ತಿದ್ದೂ ಸುಳ್ಳು ಹೇಳುತ್ತಾ ನಕಲಿ ಪ್ರತಿಭಟನೆಯ ಡ್ರಾಮಾ ಮಾಡಿದ್ದಾರೆ. ಅವತ್ತು ಬಿಜೆಪಿಯ ರಾಷ್ಟ್ರೀಯ ನಾಯಕರಿಗೆ ಯಾವ ರೀತಿ ನಡೆಸಿಕೊಂಡಿದ್ದೇವೋ ಈಗಲೂ ಅದೇ ರೀತಿ ನಡೆದುಕೊಂಡಿದ್ದೇವೆ. ಇದು ಹಿಂದಿನಿಂದ ನಡೆದುಕೊಂಡಿರುವ ಪದ್ಧತಿ. ಅದರಂತೆ ನಡೆಯುತ್ತಿದೆ. ಆದರೆ ಇವತ್ತು ಬಿಜೆಪಿ ಸದಸ್ಯರು ಅದನ್ನೆಲ್ಲಾ ಮರೆತರಂತೆ ಡ್ರಾಮಾ ಆಡುತ್ತಾ, ಅಮಾನವೀಯವಾಗಿ ವರ್ತಿಸಿದ್ದಾರೆ. ಸ್ಪೀಕರ್ ಜತೆ ಮತ್ತು ಅವರ ಪೀಠದ ಎದುರು ಅತ್ಯಂತ ಅಸಹ್ಯವಾಗಿ ಅಮಾನವೀಯವಾಗಿ ವರ್ತಿಸಿದ್ದಾರೆ. ನಾವೂ ವಿರೋಧ ಪಕ್ಷದಲ್ಲಿದ್ದೆವು. ಇಷ್ಟು ಅಸಹ್ಯವಾಗಿ ನಡೆದುಕೊಂಡಿದ್ದ ಸಣ್ಣ ಉದಾಹರಣೆಯಾದರೂ ಇದೆಯೇ ಎಂದು ಪ್ರಶ್ನಿಸಿದರು.

Tags: Basavaraj BommaiBJPCMSiddaramaiahDKShivakumar
Previous Post

ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ವಿಶೇಷ ಸಚಿವ ಸಂಪುಟ ಸಭೆಗೆ ಸರ್ಕಾರದ ನಿರ್ಧಾರ

Next Post

ಮೊಂಡುತನ ಮುಂದುವರೆಸಿದ ಬಿಜೆಪಿ, ಪ್ರತಿಭಟನೆ ನಡೆಸಿದ ನಾಯಕರ ಬಂಧನ

Related Posts

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ
ಕರ್ನಾಟಕ

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

by ಪ್ರತಿಧ್ವನಿ
April 23, 2026
0

ಕನ್ನಡ–ಹಿಂದಿ ಭಾಷಾ ವಿವಾದದ ನಡುವೆಯೇ ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನಕಾರಿ ಹೇಳಿಕೆಗಳು ಕೇಳಿಬರುತ್ತಿರುವುದು ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣ ಗೌಡ ವಿರುದ್ಧ ಸಾಮಾಜಿಕ...

Read moreDetails
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
Next Post
ನಾನು ಭ್ರಷ್ಟಾಚಾರಿಯೂ ಅಲ್ಲ, ನನ್ನ ಸಿ.ಡಿ ಯಾರ ಬಳಿಯೂ ಇಲ್ಲ ; ಆದ್ರೂ ನನಗೆ ಟಿಕೆಟ್‌ ಕೊಟ್ಟಿಲ್ಲ; ಜಗದೀಶ್​ ಶೆಟ್ಟರ್​..!

ಮೊಂಡುತನ ಮುಂದುವರೆಸಿದ ಬಿಜೆಪಿ, ಪ್ರತಿಭಟನೆ ನಡೆಸಿದ ನಾಯಕರ ಬಂಧನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada