ಪೆಟ್ರೋಲ್, ಡಿಸೇಲ್, ಗ್ಯಾಸ್ ದರ ಏರಿಕೆ ಖಂಡಿಸಿ ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಬೆಲೆ ಏರಿಕೆ ಮುಕ್ತ ಅಭಿಯಾನಕ್ಕೆ ಎಐಸಿಸಿನಿಂದ ಚಾಲನೆ ಸಿಕ್ಕಿದ್ದು ನಗರದ ಕೆಪಿಸಿಸಿ ಕಚೇರಿಮುಂಭಾಗದಲ್ಲೂ ಪ್ರತಿಭಟನೆ ಆರಂಭಿಸಿದ್ದಾರೆ. ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ರಾಮಲಿಂಗಾರೆಡ್ಡಿ, ಪ್ರಿಯಾಂಕ್ ಖರ್ಗೆ, ಸಲೀಂ ಅಹ್ಮದ್, ದೃವನಾರಾಯಣ್ ಸೇರಿ ಪಕ್ಷದ ಶಾಸಕರು, ಹಿರಿಯ ನಾಯಕರು ಭಾಗಿಯಾಗಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ವೀಕ್ ಆಗಿದೆ. ಹೀಗಾಗಿ ಪಿಎಂ ಮತ್ತು ಕೇಂದ್ರ ಮಂತ್ರಿಗಳು ಆಗಮಿಸುತ್ತಿದ್ದಾರೆ. ಬೆಲೆ ಏರಿಕೆ ಗಗನಕ್ಕೆ ಹೋಗಿದೆ. ಆದಾಯ ಪಾತಾಳಕ್ಕೆ ಹೋಗಿದೆ. ಇವತ್ತಿಗೆ ಆರ್ಥಿಕ ವರ್ಷದ ಲೆಕ್ಕಾಚಾರ ಮುಗಿದಿದೆ. ಹೀಗಾಗಿ ಇವತ್ತೇ ಈ ಪ್ರತಿಭಟನೆ ಮಾಡಿದ್ದೇವೆ. ಗ್ಯಾಸ್ ಸಿಲಿಂಡರ್, ಬೈಕ್ ಕಾರಿಗೆ ಹಾರ ಹಾಕಿ ಪೂಜೆ ಮಾಡಿ ವಿನೂತನ ಪ್ರತಿಭಟನೆ ಮಾಡಿದ್ದೇವೆ. ಜನರು ಅವಕಾಶಕ್ಕಾಗಿ ಕಾಯುತ್ತಿದ್ದಾರೆ ಎಂದು ತಿಳಿಸಿದರು.
ಮುಂದುವರೆದು, ಇಂದು ರಾಜ್ಯಕ್ಕೆ ರಾಹುಲ್ ಗಾಂಧಿ ಪಕ್ಷದ ಕಾರ್ಯಕರ್ತರಿಗೆ ಶಕ್ತಿ ತುಂಬಲು ಆಗಮಿಸುತ್ತಿದ್ದಾರೆ. ಅತಿ ಹೆಚ್ಚು ನೊಂದಾಯಿಸಿದವರಿಗೆ ರಾಹುಲ್ ಅಭಿನಂದನೆ ಸಲ್ಲಿಸಲಾಗುತ್ತದೆ. ಜೂಮ್ ಮೂಲಕ ರಾಹುಲ್ ಅಭಿನಂದನೆ ಸಲ್ಲಿಸಲಿದ್ದಾರೆ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಕೆ ಶಿವಕುಮಾರ್ಅವರು ಸಿಲೆಂಡರ್ ಅನ್ನು ತಲೆ ಮೇಲೆ ಹೊತ್ತು ಪ್ರತಿಭಟನೆ ನಡೆಸಿದರು.