ಬಿಜೆಪಿಗೆ ವಿರೋಧಪಕ್ಷದ ನಾಯಕ ಮತ್ತು ರಾಜ್ಯಾಧ್ಯಕ್ಷರನ್ನ ನೇಮಕ ಮಾಡಲು ಆಗುತ್ತಿಲ್ಲ. ಇಂತಹ ಅಸಮರ್ಥ ರಾಷ್ಟ್ರೀಯ ಪಕ್ಷವನ್ನ ಎಂದೂ ನೋಡಿಲ್ಲ’ ಎಂದು MLC ಜಗದೀಶ ಶೆಟ್ಟರ್ ಹೇಳಿದರು.
ಇಂದು ಗಂಗಾವತಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಇದೆ. ಕೇಂದ್ರ ಬಿಜೆಪಿ ವರಿಷ್ಠರಿಗೆ ರಾಜ್ಯ ಬಿಜೆಪಿ ನಾಯಕರ ಮೇಲೆ ವಿಶ್ವಾಸವಿಲ್ಲ. ಹಾಗಾಗಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಜನ ಬೆಂಬಲ ಸಿಗುತ್ತಿದೆ.
‘ನಾನು ಯಾವ ಬಿಜೆಪಿಗರನ್ನು ಕಾಂಗ್ರೆಸ್ಸಿಗೆ ಸೇರಿಸುವ ಪ್ರಯತ್ನ ಮಾಡುತ್ತಿಲ್ಲ. ಬದಲಾಗಿ ಬಿಜೆಪಿ ಅವ್ಯವಸ್ಥೆ ಕಾರಣ ರಾಜ್ಯ ನಾಯಕರಿಂದ ಹಿಡಿದು ಕಾರ್ಯಕರ್ತರವರೆಗೆ ಎಲ್ಲರೂ ಕಾಂಗ್ರೆಸ್ ಸೇರುತ್ತಿದ್ದಾರೆ. ನನ್ನ ಬಳಿ ಸ್ವಇಚ್ಛೆಯಿಂದ ಪಕ್ಷ ಸೇರಲು ಬಂದವರನ್ನ ಸಿಎಂ, ಡಿಸಿಎಂ ಅವರಿಗೆ ಭೇಟಿ ಮಾಡಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಸದ್ಯದ ವಾತವರಣದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಂದಿನ ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನಕ್ಕಿಂತಲೂ ಹೆಚ್ಚು ಸ್ಥಾನ ಗೆಲ್ಲುತ್ತದೆ’ ಎಂದರು. ಚುನಾವಣೆ ಸಮೀಪದಲ್ಲಿ ಹಲವು ಬಿಜೆಪಿ ನಾಯಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳಿದ್ದಾರೆ.