• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಬಿಜೆಪಿ-ಜೆಡಿಎಸ್ ಮೈತ್ರಿ ಫೈನಲ್‌ : ಹೆಚ್​ಡಿಕೆ ಏನು ಹೇಳಿದ್ರು ಗೊತ್ತಾ..?

ಪ್ರತಿಧ್ವನಿ by ಪ್ರತಿಧ್ವನಿ
September 22, 2023
in ಇದೀಗ, ಕರ್ನಾಟಕ, ರಾಜಕೀಯ
0
ಬಿಜೆಪಿ-ಜೆಡಿಎಸ್ ಮೈತ್ರಿ ಫೈನಲ್‌ :  ಹೆಚ್​ಡಿಕೆ ಏನು ಹೇಳಿದ್ರು ಗೊತ್ತಾ..?
Share on WhatsAppShare on FacebookShare on Telegram

ADVERTISEMENT

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕದಲ್ಲಿ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಜೆಡಿಎಸ್ (JDS) ನಾಯಕ ಹೆಚ್‌.ಡಿಕುಮಾರಸ್ವಾಮಿ (HD Kumaraswamy) ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಧ್ಯೆ ಮಾತುಕತೆ ನಡೆಯಿತು. ದೆಹಲಿಯ ಕೃಷ್ಣ ಮೆನನ್​ ಮಾರ್ಗ್​ನಲ್ಲಿರುವ ಅಮಿತ್ ಶಾ (Amit Shah) ನಿವಾಸದಲ್ಲಿ ಮಾತುಕತೆ ನಡೆದಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸಹ ಉಪಸ್ಥಿತರಿದ್ದರು. ಇಷ್ಟೇ ಅಲ್ಲದೆ, ಗೋವಾ ಸಿಎಂ ಪ್ರಮೋದ್ ಸಾವಂತ್, ಕುಪೇಂದ್ರ ರೆಡ್ಡಿ, ನಿಖಿಲ್ ಕುಮಾರಸ್ವಾಮಿ ಸಹ ಹಾಜರಿದ್ದರು. ಮಾತುಕತೆಯ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ, ಮೈತ್ರಿ ವಿಚಾರವಾಗಿ ಅಧಿಕೃತವಾಗಿ ಕೆಲವು ವಿಚಾರಗಳನ್ನು ಚರ್ಚೆ ನಡೆಸಿದ್ದೇವೆ ಎಂದು ಹೇಳಿದರು.

ಗೊಂದಲವಿಲ್ಲದೆ ಮೈತ್ರಿ ಮಾಡಿಕೊಳ್ಳಲಿದ್ದೇವೆ ; ಕುಮಾರಸ್ವಾಮಿ

ಮೈತ್ರಿ ಬಗ್ಗೆ ಎಲ್ಲಾ ರೀತಿಯಲ್ಲೂ ಸುಗಮವಾಗಿ ಚರ್ಚೆ ನಡೆಯುತ್ತಿದೆ. ಎಷ್ಟು ಸೀಟ್‌ ನಮಗೆ ಕೊಡುತ್ತಾರೆಂಬುದು ಮುಖ್ಯವಲ್ಲ. ರಾಜ್ಯದ 28 ಕ್ಷೇತ್ರಗಳಲ್ಲೂ ಬಿಜೆಪಿ, ಜೆಡಿಎಸ್ ಪಕ್ಷಗಳು ಗೆಲ್ಲುವುದೇ ನಮ್ಮ ಗುರಿ. ಬಿಜೆಪಿ, ಜೆಡಿಎಸ್‌ ಮೈತ್ರಿ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ. ಮುಂದೆ ಯಾವುದೇ ರೀತಿಯಲ್ಲೂ ಗೊಂದಲ ಇಲ್ಲದೆ ಮೈತ್ರಿಯಾಗಲಿದೆ ಎಂದು ಅವರು ಹೇಳಿದರು.

ಮೈತ್ರಿ ವಿಚಾರವಷ್ಟೇ ಅಲ್ಲದೆ ಕರ್ನಾಟಕಕ್ಕೆ ಸಂಬಂಧಿಸಿದ ಇತರ ಅನೇಕ ವಿಚಾರಗಳ ಬಗ್ಗೆಯೂ ಚರ್ಚೆ ನಡೆಸಿದ್ದೇವೆ. ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಗೃಹ ಸಚಿವ ಅಮಿತ್ ಶಾ ಜತೆ ಚರ್ಚಿಸಿದ್ದೇವೆ. ಕಾವೇರಿ ವಿಚಾರದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ತೋರಿದೆ. ರಾಜ್ಯದ ರೈತರಿಗೆ ಮಾರಕವಾಗುವ ರೀತಿ ಸರ್ಕಾರದ ನಡವಳಿಕೆ ಇದೆ. ನಿವೃತ್ತ ನ್ಯಾಯಮೂರ್ತಿಗಳ ಜೊತೆ ಸಭೆ ಮಾಡುವ ಕನಿಷ್ಠ ತಿಳವಳಿಕೆ ಇಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ವಿಜಯದಶಮಿ ಬಳಿಕ ಸೀಟು ಹಂಚಿಕೆ

ಸೀಟು ಹಂಚಿಕೆ ಬಗ್ಗೆ ವಿಜಯದಶಮಿ ಬಳಿಕ ಚರ್ಚೆ ನಡೆಸಲಾಗುವುದು. ಸೀಟು ಹಂಚಿಕೆ ಮುಂಚೆ ರಾಜ್ಯ ಬಿಜೆಪಿ ನಾಯಕರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಜೆಡಿಎಸ್ ತಿಳಿಸಿದೆ.

ಜೆಪಿ ನಡ್ಡಾ ಹರ್ಷ

ಎನ್​​​ಡಿಎ ಮೈತ್ರಿಕೂಟಕ್ಕೆ ಜೆಡಿಎಸ್ ಸೇರ್ಪಡೆಯಾಗಿರುವುದಕ್ಕೆ ಜೆಪಿ ನಡ್ಡಾ ಹರ್ಷ ವ್ಯಕ್ತಪಡಿಸಿದ್ದಾರೆ. ಜೆಡಿಎಸ್ ಸೇರ್ಪಡೆಯಿಂದ ಎನ್​​ಡಿಎ ಮತ್ತಷ್ಟು ಸುಭದ್ರವಾಗಿದೆ. ಪ್ರಧಾನಿ ಮೋದಿ ದೃಷ್ಟಿಕೋನ ಕೂಡ ಬಲಗೊಳ್ಳಲು ಸಹಕಾರಿ ಎಂದು ನಡ್ಡಾ ಹೇಳಿದ್ದಾರೆ.

ಎನ್​​ಡಿಎ ಮೈತ್ರಿಕೂಟಕ್ಕೆ ಜೆಡಿಎಸ್​​ಗೆ ಸ್ವಾಗತ ಎಂದ ಪ್ರಮೋದ್ ಸಾವಂತ್

ಎನ್​ಡಿಎ ಒಕ್ಕೂಟಕ್ಕೆ ಜೆಡಿಎಸ್​ ಸೇರ್ಡಡೆಯಾಗಿದ್ದಕ್ಕೆ ಸ್ವಾಗತಿಸುತ್ತೇನೆ ಎಂದು ದೆಹಲಿಯಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದರು. ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ನನ್ನ ಒಳ್ಳೆಯ ಸ್ನೇಹಿತರು. ಲೋಕಸಭೆಯ ಚುನಾವಣೆಯಲ್ಲಿ ಕರ್ನಾಟಕದಲ್ಲಿ 25ಕ್ಕೂ ಹೆಚ್ಚು ಸೀಟ್ ಬಿಜೆಪಿ ಸಿಗಲಿದೆ ಎಂದು ಅವರು ಹೇಳಿದರು.

ಆರು ಸ್ಥಾನಗಳಿಗೆ ಜೆಡಿಎಸ್ ಬೇಡಿಕೆ; ಇಲ್ಲಿದೆ ಬಲಾಬಲ

ಬಿಜೆಪಿ, ಜೆಡಿಎಸ್ ಮೈತ್ರಿ ಸಂಬಂಧ ಅಂತಿಮ ಮಾತುಕತೆ ವೇಳೆ ಹೆಚ್​ಡಿ ಕುಮಾರಸ್ವಾಮಿ 6 ಸ್ಥಾನಗಳಿಗೆ ಬೇಡಿಕೆ ಇಟ್ಟಿದ್ದಾರೆ. 6 ಕ್ಷೇತ್ರಗಳಲ್ಲಿ ಪಕ್ಷಗಳ ಬಲಾಬಲ, ಮತ ವಿವರ ಕಲೆ ಹಾಕಿ, ಬಿಜೆಪಿಗಿಂತ ಹೆಚ್ಚು ಮತಗಳು ಇರುವ ಕ್ಷೇತ್ರಗಳಿಗೆ ಬೇಡಿಕೆ ಇಟ್ಟಿದ್ದಾರೆ. ಅವುಗಳೆಂದರೆ ತುಮಕೂರು, ಹಾಸನ, ಮಂಡ್ಯ, ಕೋಲಾರ ಕ್ಷೇತ್ರಗಳಾಗಿವೆ. ವಿಧಾನಸಭಾ ಚುನಾವಣೆಯ ಮತ ಗಳಿಕೆಯ ಪಟ್ಟಿ ಹಿಡಿದುಕೊಂಡೇ ಕುಮಾರಸ್ವಾಮಿ ಅವರು ಗೃಹ ಸಚಿವ ಅಮಿತ್ ಶಾ ಅವರ ಬಳಿ ಮಾತುಕತೆ ನಡೆಸಿದ್ದಾರೆ.

ಆರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಗಳ ಮತ ಗಳಿಕೆ ವಿವರ ಇಲ್ಲಿದೆ;

ತುಮಕೂರು

ಬಿಜೆಪಿ – 4.13 ಲಕ್ಷ ಮತಗಳು ಜೆಡಿಎಸ್ – 4.69 ಲಕ್ಷ ಮತಗಳು ಕಾಂಗ್ರೆಸ್ – 4.35 ಲಕ್ಷ ಮತಗಳು

ಮಂಡ್ಯ

ಕಾಂಗ್ರೆಸ್ – 6.72 ಲಕ್ಷ ಮತಗಳು ಬಿಜೆಪಿ – 1.81 ಲಕ್ಷ ಮತಗಳು ಜೆಡಿಎಸ್ – 5.69 ಲಕ್ಷ ಮತಗಳು

ಹಾಸನ

ಜೆಡಿಎಸ್ – 5.34 ಲಕ್ಷ ಕಾಂಗ್ರೆಸ್ – 4.76 ಲಕ್ಷ ಬಿಜೆಪಿ – 2.99 ಲಕ್ಷ

ಕೋಲಾರ

ಕಾಂಗ್ರೆಸ್ – 5.80 ಲಕ್ಷ ಬಿಜೆಪಿ – 1.94 ಲಕ್ಷ ಜೆಡಿಎಸ್ – 4.71 ಲಕ್ಷ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ

ಕಾಂಗ್ರೆಸ್ – 8.12 ಲಕ್ಷ ಮತಗಳು ಬಿಜೆಪಿ – 6.09ಲಕ್ಷ ಜೆಡಿಎಸ್ – 3.62 ಲಕ್ಷ

ಚಿಕ್ಕಬಳ್ಳಾಪುರ

ಕಾಂಗ್ರೆಸ್ – 6.10 ಲಕ್ಷ ಬಿಜೆಪಿ – 5.40 ಲಕ್ಷ ಜೆಡಿಎಸ್ – 2.35 ಲಕ್ಷ

Tags: BJP JDS AllianceKarnataka Politicskarnatakanewsಎಚ್ ಡಿ ಕುಮಾರಸ್ವಾಮಿ
Previous Post

ಬಿಜೆಪಿ ಜೆಡಿಎಸ್ ಮೈತ್ರಿ ಹೆಚ್‌ ಡಿಕೆ ಮತ್ತು ಅಮಿತ್ ಶಾ ಮಧ್ಯೆ ಮಾತುಕತೆ ಅಂತಿಮ

Next Post

ತಮಿಳುನಾಡಿನ ಮೇಲೆ ಹೆಚ್ಚಾಗ್ತಿದೆ ಕನ್ನಡಿಗರ ಆಕ್ರೋಶ: ಬಂದ್, ಪ್ರತಿಭಟನೆ ವೇಳೆ ಹೈಅಲರ್ಟ್​!

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post
ತಮಿಳುನಾಡಿನ ಮೇಲೆ ಹೆಚ್ಚಾಗ್ತಿದೆ ಕನ್ನಡಿಗರ ಆಕ್ರೋಶ: ಬಂದ್, ಪ್ರತಿಭಟನೆ ವೇಳೆ ಹೈಅಲರ್ಟ್​!

ತಮಿಳುನಾಡಿನ ಮೇಲೆ ಹೆಚ್ಚಾಗ್ತಿದೆ ಕನ್ನಡಿಗರ ಆಕ್ರೋಶ: ಬಂದ್, ಪ್ರತಿಭಟನೆ ವೇಳೆ ಹೈಅಲರ್ಟ್​!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada