545 ಪಿಎಸ್ ಐ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದಲ್ಲಿ ಬಿಜೆಪಿ ನಾಯಕಿ ಪತಿ ಅರೆಸ್ಟ್ ಅವರನ್ನು ಸಿಐಡಿ ಬಂಧಿಸಿದೆ.
ಶೇ.೪೦ ಕಮಿಷನ್ ಆರೋಪದಲ್ಲಿ ಸಚಿವ ಕೆಎಸ್ ಈಶ್ವರಪ್ಪ ರಾಜೀನಾಮೆ ನಂತರ ಮುಜುಗರಕ್ಕೆ ಒಳಗಾಗಿದ್ದ ಬಿಜೆಪಿಗೆ ಈ ಘಟನೆಯಿಂದ ಮತ್ತೊಂದು ಮುಜುಗರ ತಂದಿದೆ.
ಕಲಬುರಗಿಯ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಪತಿ ರಾಜೇಶ್ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ದಿವ್ಯಾ ಹಾಗರಗಿ ಅವರ ನಿವಾಸದ ಮೇಲೆ ಸಿಐಡಿ ಅಧಿಕಾರಿಗಳು ಭಾನುವಾರ ದಾಳಿ ನಡೆಸಿದ್ದರು. ದಿವ್ಯಾ ಹಾಗರಗಿ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪತಿ ರಾಜೇಶ್ ಅವರನ್ನು ವಿಚಾರಣೆಗೊಳಪಡಿಸಿದ್ದ ಅಧಿಕಾರಿಗಳು ಇದೀಗ ಪತಿಯನ್ನು ಬಂಧಿಸಿದ್ದಾರೆ.
ದಿವ್ಯಾ ಅವರ ಶಾಲೆಯಲ್ಲಿ ಮೂಲಭೂತ ಸೌಕರ್ಯ ಕೊರತೆ ಎಂದು ಅಧಿಕಾರಿಗಳು ವರದಿ ನೀಡಿದ್ದರು. ಬಿಜೆಪಿ ನಾಯಕಿ ಎಂಬ ಕಾರಣಕ್ಕೆ ಶಿಫಾರಸು ಮಾಡಿ ಅವರ ಕೇಂದ್ರದಲ್ಲಿ ಪಿಎಸ್ ಐ ಪರೀಕ್ಷೆ ನಡೆಸಲು ಅವಕಾಶ ಮಾಡಿಕೊಡಲಾಗಿತ್ತು.





