ರಾಜ್ಯ ಬಿಜೆಪಿ ಯುವ ಮೋರ್ಚಾದ ಮುಖಂಡನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಮಂಗಳೂರು ಸಮೀಪದ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ.
ಜಿಲ್ಲಾ ಯುವ ಮೋರ್ಚಾದ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆಯಾಗಿದ್ದಾರೆ.
ಮೃತನು ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದು, ಬೈಕ್ ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಅಂಗಡಿ ಬಳಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.