ಉತ್ತರ ಪ್ರದೇಶ ರಾಜ್ಯದ ಸಂಭಾಲ್ನ ಬಿಜೆಪಿ ಬಿಜೆಪಿ ಮುಖಂಡ ಅನುಜ್ ಚೌಧರಿ ಅವರನ್ನು ಮೊರಾದಾಬಾದ್ನಲ್ಲಿರುವ ಅವರ ನಿವಾಸದ ಹೊರಗೆ ಗುರುವಾರ (ಆಗಸ್ಟ್ 10) ಸಂಜೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ
34 ವರ್ಷದ ಚೌಧರಿ ತಮ್ಮ ಅಪಾರ್ಟ್ಮೆಂಟ್ ಹೊರಗೆ ಸ್ನೇಹಿತನೊಂದಿಗೆ ನಡೆದುಕೊಂಡು ಹೋಗುತ್ತಿರುವಾಗ ಬೈಕ್ನಲ್ಲಿ ಬಂದ ಮೂವರು ಅಪರಿಚಿತರು ಅನೇಕ ಬಾರಿ ಗುಂಡು ಹಾರಿಸುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ.
ಚೌಧರಿ ಅವರನ್ನು ಉತ್ತರ ಪ್ರದೇಶ ಮೊರಾದಾಬಾದ್ನ ಬ್ರೈಟ್ಸ್ಟಾರ್ ಆಸ್ಪತ್ರೆಗೆ ಕೂಡಲೇ ಕರೆದೊಯ್ಯಲಾಯಿತು. ಆದರೆ ತೀವ್ರ ಗಾಯಗಳಿಂದ ಬಳಲುತ್ತಿದ್ದ ಚೌಧರಿ ಅವರು ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳೀಯ ರಾಜಕೀಯದಲ್ಲಿ ಸಕ್ರಿಯರಾಗಿದ್ದ ಚೌಧರಿ ಅವರು ಸಂಭಾಲ್ನ ಅಸ್ಮೋಲಿ ಬ್ಲಾಕ್ನಿಂದ ಬ್ಲಾಕ್ ಮುಖ್ಯಸ್ಥರ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಆದರೆ ಯಶಸ್ವಿಯಾಗಿರಲಿಲ್ಲ.
ಈ ಸುದ್ದಿ ಓದಿದ್ದೀರಾ? ಇಂದು ಅದಾನಿ ವಿಚಾರ ಮಾತನಾಡುವುದಿಲ್ಲ: ಸಂಸತ್ತಿನಲ್ಲಿ ರಾಹುಲ್ ಗಾಂಧಿ ಮಾತು
ಚೌಧರಿ ಹತ್ಯೆ ಸಂಬಂಧ ಉತ್ತರ ಪ್ರದೇಶ ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.
ಚೌಧರಿ ಅವರ ಕುಟುಂಬವು ಅವರ ರಾಜಕೀಯ ವಿರೋಧಿಗಳಾಗಿದ್ದ ಅಮಿತ್ ಚೌಧರಿ ಮತ್ತು ಅನಿಕೇತ್ ವಿರುದ್ಧ ದೂರು ದಾಖಲಿಸಿದೆ. ಆರೋಪಿಗಳ ಬಂಧನಕ್ಕೆ ಐದು ತಂಡಗಳನ್ನು ರಚಿಸಲಾಗಿದೆ. ಚೌಧರಿ ಹತ್ಯೆಗೆ ಸಂಬಂಧಿಸಿ ಪ್ರಕರಣವನ್ನು ದಾಖಲಿಸಿದ್ದು ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೊರಾದಾಬಾದ್ ಪೊಲೀಸರು ಮಾಹಿತಿ ನೀಡಿದ್ದಾರೆ.