ವಿಧಾನಸಭೆ ಚುನಾವಣೆಗೆ ಇನ್ನು ಆರು ತಿಂಗಳುಗಳು ಬಾಕಿಯಿದ್ದು ಸಕ್ಕರೆನಡು ಮಂಡ್ಯದಲ್ಲಿ ಚುನಾವಣೆ ಕಾವು ಜೋರಾಗಿದ್ದು ಬೆದರಿಕೆ ಹಾಕುವ ಹಂತಕ್ಕೆ ತಲುಪಿದೆ.
ಸೋಮವಾರವಷ್ಟೇ ಸಂಸದೆ ಸುಮಲತಾ ಆಪ್ತ ಸಚ್ಚಿದಾನಂದ ಜೊತೆ ಬಿಜೆಪಿ ಸೇರಿದ ಮಲ್ಲಿಕಾರ್ಜುನ (ಫೈಟರ್ ರವಿ) ಜೆಡಿಎಸ್ ಕಾರ್ಯಕರ್ತನೊಬ್ಬನಿಗೆ ಅವಾಜ್ ಹಾಕಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಆಡಿಯೋದಲ್ಲಿ ಕೇಳಿ ಬರುವ ಹಾಗೆ ಜೆಡಿಎಸ್ ಕಾರ್ಯಕರ್ತನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಫೈಟರ್ ರವಿ ಅವಾಜ್ ಹಾಕಿ ದರ್ಪ ಮೆರೆದಿದ್ದಾರೆ.
ನಾಗಮಂಗಲ ವಿಧಾನಸಭಾ ಕ್ಷೇತ್ರದ ಬಿಜೆಪಿ ಆಕಾಂಕ್ಷಿಯಾಗಿರುವ ಫೈಟರ್ ರವಿ ಜೆಡಿಎಸ್ ಕಾರ್ಯಕರ್ತನಿಗೆ ಅವಾಜ್ ಹಾಕಿರುವ ಆಡಿಯೋ ಎಲ್ಲೆಡೆ ವೈರಲ್ ಆಗಿದ್ದು ಬಿಜೆಪಿ ಹೈಕಮಾಂಡ್ ಹೇಗೆ ಸಂಭಾಲಿಸಲಿದೆ ಎಂಬುದನ್ನ ಕಾದು ನೋಡಬೇಕಿದೆ.