• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮತದಾರರ ಮಾಹಿತಿ ಸಂಗ್ರಹಿಸಲು 2017 ರಲ್ಲೇ ಸಿದ್ದರಾಮಯ್ಯ ಚಿಲುಮೆಗೆ ಅನುಮತಿ ನೀಡಿದ್ದಾರೆ; ಬಿಜೆಪಿ ನಾಯಕರ ಆರೋಪ

Any Mind by Any Mind
November 21, 2022
in ಕರ್ನಾಟಕ, ರಾಜಕೀಯ
0
ಮತದಾರರ ಮಾಹಿತಿ ಸಂಗ್ರಹಿಸಲು 2017 ರಲ್ಲೇ ಸಿದ್ದರಾಮಯ್ಯ ಚಿಲುಮೆಗೆ ಅನುಮತಿ ನೀಡಿದ್ದಾರೆ; ಬಿಜೆಪಿ ನಾಯಕರ ಆರೋಪ
Share on WhatsAppShare on FacebookShare on Telegram

ಬೆಂಗಳೂರಿನ ಮತದಾರರ ದತ್ತಾಂಶ ಕಳ್ಳತನದ ಹಗರಣ ಹೊಸ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದು, ಮತದಾರರ ದತ್ತಾಂಶವನ್ನು ಸಂಗ್ರಹಿಸಲು ಸರ್ಕಾರಿ ಆದೇಶದ ಮೂಲಕ ಚಿಲುಮೆ ಎಂಬ ಎನ್‌ಜಿಒಗೆ ಮೊದಲು ಅನುಮತಿ ನೀಡಿದವರು ಯಾರು ಎಂದು ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ಪರಸ್ಪರ ಕೆಸರೆರಚಾಟಕ್ಕೆ ಕಾರಣವಾಗಿದೆ.

ADVERTISEMENT

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದ ಸಮಯದಲ್ಲೇ ಬೂತ್ ಮಟ್ಟದ ಅಧಿಕಾರಿಗಳ (BLO) ಮೇಲ್ವಿಚಾರಣೆಯಲ್ಲಿ ಮಹದೇವಪುರ ಕ್ಷೇತ್ರದಲ್ಲಿ ಮತದಾರರ ಪಟ್ಟಿಗಳ ಪರಿಷ್ಕರಣೆ ಮಾಡಲು ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಗೆ ಅನುಮತಿ ನೀಡಲಾಗಿದೆ ಎನ್ನುವ ಸರ್ಕಾರಿ ಆದೇಶವನ್ನು ಬಿಜೆಪಿ ನಾಯಕರು ಹಂಚಿಕೊಳ್ಳಲು ಪ್ರಾರಂಭಿಸಿದ್ದಾರೆ.

ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಕೆ ಸುಧಾಕರ್ ಅವರು ಟ್ವಿಟರ್‌ನಲ್ಲಿ 2017 ರ ಆದೇಶದ ಪ್ರತಿಯನ್ನು ಹಂಚಿಕೊಂಡಿದ್ದು, 2017 ರಲ್ಲಿ ಮತದಾರರ ಪಟ್ಟಿಯನ್ನು ಪರಿಷ್ಕರಿಸಲು ಸಂಸ್ಥೆಗೆ ಅವಕಾಶ ನೀಡಿದ್ದ ಕಾಂಗ್ರೆಸ್ ಸರ್ಕಾರ ಈಗ ಬಿಜೆಪಿ ಸರ್ಕಾರದ ಮೇಲೆ ಆರೋಪ ಮಾಡುತ್ತಿದೆ ಎಂದಿದ್ದಾರೆ. “ಮೊಸರು ತಿಂದ ಮಂಗ ಮೇಕೆಯ ಬಾಯಿಗೆ ಹಚ್ಚಿದಂತೆ”ಎಂದು ಕಾಂಗ್ರೆಸ್‌ ಆರೋಪಗಳನ್ನು ಸುಧಾಕರ್ ಟೀಕಿಸಿದ್ದಾರೆ.

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ 2017ರಲ್ಲಿ ಅಂದಿನ ಕಾಂಗ್ರೆಸ್ ಸರಕಾರವೇ ಅನುಮತಿ ಕೊಟ್ಟ ಒಂದು ಸಂಸ್ಥೆಯ ಮೇಲೆ ಈಗ ಇಲ್ಲಸಲ್ಲದ ಆರೋಪ ಮಾಡಿ ಬಿಜೆಪಿ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿರುವುದು 'ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಸವರಿದಂತಾಗಿದೆ.'

1/4 pic.twitter.com/1RHnZXzEsy

— Dr Sudhakar K (@DrSudhakar_) November 20, 2022

“’ಕುಣಿಯಲಾರದವನಿಗೆ ನೆಲ ಡೊಂಕು’ ಎಂಬಂತೆ ಜನರ ವಿಶ್ವಾಸ ಕಳೆದುಕೊಂಡು ಹತಾಶಗೊಂಡಿರುವ ಕಾಂಗ್ರೆಸ್ ಪಕ್ಷ ಮತಯಂತ್ರಗಳ ಮೇಲೆ ಸಂಶಯ ಮೂಡಿಸುವುದು, ಚುನಾವಣಾ ಆಯೋಗದ ಬಗ್ಗೆ ಅಪಸ್ವರ ಎತ್ತುವುದು ಹೀಗೆ ಒಂದಲ್ಲಾ ಒಂದು ಕ್ಯಾತೆ ತೆಗೆಯುತ್ತಲೆ ಬಂದಿದ್ದು ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ ಆರೋಪ ಈ ಸುಳ್ಳುಗಳ ಸರಮಾಲೆಗೆ ಹೊಸ ಸೇರ್ಪಡೆಯಷ್ಟೆ.” ಎಂದು ಸುಧಾಕರ್‌ ಟ್ವೀಟ್‌ ಮಾಡಿದ್ದಾರೆ.

ಮಹದೇವಪುರ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಭಾಗದ ಮತಗಟ್ಟೆಗಳಿಗೆ ಬೂತ್ ಮಟ್ಟದ ಅಧಿಕಾರಿ(BLO)ಗಳನ್ನು ನೇಮಿಸುವ ಆದೇಶದ ಕುರಿತು ಸುಧಾಕರ್ ಹಂಚಿಕೊಂಡಿದ್ದಾರೆ. ಮಹದೇವಪುರ ಕ್ಷೇತ್ರದ 305 ಮತಗಟ್ಟೆಗಳಿಗೆ ಚುನಾವಣಾ ಪರಿಷ್ಕರಣೆ ಮತ್ತು ಸಂಬಂಧಿತ ಕೆಲಸಗಳನ್ನು ಟ್ರಸ್ಟ್ ಮೂಲಕ ನಿರ್ವಹಿಸುವುದಾಗಿ ಬೆಂಗಳೂರು ಪೂರ್ವದ ಕೆಆರ್ ಪುರಂ ತಹಶೀಲ್ದಾರ್‌ಗೆ ಚಿಲುಮೆ ಅವರು ಬರೆದ ಪತ್ರಕ್ಕೆ ಪ್ರತಿಕ್ರಿಯೆಯಾಗಿ ಈ ಪತ್ರ ಬರೆಯಲಾಗಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ನಿಟ್ಟಿನಲ್ಲಿ 94 ಗ್ರಾಮಾಂತರ ಮತಗಟ್ಟೆಗಳಲ್ಲಿರುವ ಬಿಎಲ್‌ಒಗಳನ್ನು ಕರೆದೊಯ್ದು ಖಾಲಿ ಇರುವ ಸ್ಥಳಗಳಲ್ಲಿ ಭರ್ತಿ ಮಾಡಿಕೊಂಡು, ಚುನಾವಣಾ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳು ಸೂಚಿಸುವ ಎಲ್ಲಾ ಕೆಲಸಗಳನ್ನು ಮಾಡುವಂತೆ ಆದೇಶ ಪತ್ರದಲ್ಲಿ ಹೇಳಲಾಗಿದೆ.

ಕೆಆರ್ ಪುರಂ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಎನ್‌ಎಸ್ ನಂದೀಶ ರೆಡ್ಡಿ 2018 ರ ವಿಧಾನಸಭಾ ಚುನಾವಣೆಗೆ ಮುನ್ನ ಮತದಾರರ ಡೇಟಾವನ್ನು ಖರೀದಿಸಲು ಚಿಲುಮೆಗೆ 18 ಲಕ್ಷ ರೂಪಾಯಿಗಳನ್ನು ಪಾವತಿಸಿದ್ದಾರೆ ಎನ್ನುವುದೂ ಇಲ್ಲಿ ಗಮನಾರ್ಹ.

ಡೆಕ್ಕನ್ ಹೆರಾಲ್ಡ್ ವರದಿಯ ಪ್ರಕಾರ, ಚಿಲುಮೆಗೆ 2017 ಮತ್ತು 2022 ರ ನಡುವೆ ಒಟ್ಟು 22 ಸರ್ಕಾರಿ ಆದೇಶಗಳನ್ನು ನೀಡಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣಾ ಅಧಿಕಾರಿಗಳು ಚಿಲುಮೆಗೆ ಹೊರಡಿಸಿದ ಈ ಆದೇಶಗಳು ಚುನಾವಣಾ ಸಂಬಂಧಿತ ಚಟುವಟಿಕೆಗಳನ್ನು ನಿರ್ವಹಿಸಲು ಅನುವು ಮಾಡಿಕೊಡುತ್ತದೆ. ಆದಾಗ್ಯೂ, 2022 ರ ಹೊರತಾಗಿ, ಚಿಲುಮೆ ಎಷ್ಟು ಸಂದರ್ಭಗಳಲ್ಲಿ ನಕಲಿ BLO ಕಾರ್ಡ್‌ಗಳನ್ನು ನೀಡಿದ್ದಾರೆ ಮತ್ತು ಮತದಾರರ ಡೇಟಾವನ್ನು ಸಂಗ್ರಹಿಸಿದ್ದಾರೆ ಎಂಬುದು ಕಂಡು ಬಂದಿಲ್ಲ.

ಈ ಕುರಿತು ಪತ್ರಿಕಾ ಪರಕಟಣೆ ಹೊರಡಿಸಿರುವ ಸಿಎಂ ಬೊಮ್ಮಾಯಿ, “ಚಿಲುಮೆ ಸಂಸ್ಥೆಯು ಮತದಾರರ ಪಟ್ಟಿ ಪರಿಷ್ಕರಣಿಯ ಯಾವುದೇ ಜವಾಬ್ದಾರಿಯನ್ನು ನೀಡಿರುವುದಿಲ್ಲ, ಕೇವಲ ಮತದಾರರ ಜಾಗೃತಿ ಕಾರ್ಯಕ್ರಮಕ್ಕೆ ಆದೇಶ ನೀಡಲಾಗಿರುತ್ತದೆ” ಎಂದಿದ್ದಾರೆ.

ದಿಟ್ಟ ನಾಯಕತ್ವ, ಅಭಿವೃದ್ಧಿ, ಸುಶಾಸನ, ಭ್ರಷ್ಟಾಚಾರ-ಮುಕ್ತ ಆಡಳಿತ ನೀಡುವ ಮೂಲಕ ದೇಶಾದ್ಯಂತ ಜನಮನ್ನಣೆ ಪಡೆಯುತ್ತಿರುವ ನಮ್ಮ ಪಕ್ಷಕ್ಕೆ ಚುನಾವಣೆ ಗೆಲ್ಲಲು ಯಾವುದೇ ವಾಮ ಮಾರ್ಗದ ಅವಶ್ಯಕತೆಯೂ ಇಲ್ಲ ಅದರ ಬಗ್ಗೆ ನಂಬಿಕೆಯೂ ಇಲ್ಲ.

3/4

— Dr Sudhakar K (@DrSudhakar_) November 20, 2022

“ಭಾರತ ಚುನಾವಣಾ ಆಯೋಗವು ನೀಡಿದ PSE ದತ್ತಾಂಶ ಮತ್ತು ಸ್ವೀಕೃತಗೊಂಡ ಅರ್ಜಿಗಳನ್ನು ಪರಿಗಣಿಸಿ, ಸರ್ಕಾರಿ ಅಧಿಕಾರಿಗಳು ಮನೆ-ಮನೆ ಭೇಟಿ ನೀಡಿ, ಒದಗಿಸಿದ ವರದಿಯನ್ನು ಆಧರಿಸಿ ಮತದಾರರನ್ನು ಕೈಬಿಡಲಾಗಿರುತ್ತದೆ. ಆದರೆ ವಾಸ್ತವವಾಗಿ, 2017ರಲ್ಲಿ ಅಂದಿನ ಸಿದ್ದರರಾಮಯ್ಯನವರ ಕಾಂಗ್ರೇಸ್ ಸರ್ಕಾರವು ಚಿಲುಮೆ ಸಂಸ್ಥೆಗೆ ಮತದಾರರ ಪರಿಷ್ಕರಣೆ ಕಾರ್ಯವನ್ನು ಹಾಗೂ ಕೆಲವು ಕಡೆ ಬಿ.ಎಲ್.ಓಗಳನ್ನೂ ಕೂಡ ಭರ್ತಿಮಾಡಿಕೊಳ್ಳುವ ಕಾರ್ಯನಿರ್ವಹಿಸುವ ಗುರುತರ ಜವಾಬ್ದಾರಿಯನ್ನೂ ಕಾನೂನು ಬಾಹಿರವಾಗಿ ನೀಡಲಾಗಿರುತ್ತದೆ” ಎಂದು ಸಿಎಂ ಬೊಮ್ಮಾಯಿ ಆರೋಪಿಸಿದ್ದಾರೆ.

ಮತದಾರರ ಪಟ್ಟಿಯಿಂದ 27 ಲಕ್ಷ ಹೆಸರುಗಳನ್ನು ಅಳಿಸಲಾಗಿದೆ ಎಂಬ ಆರೋಪವನ್ನು ನಿರಾಕರಿಸಿರುವ ಸಿಎಂ,”ಕೇವಲ 6.73 ಲಕ್ಷ ಹೆಸರುಗಳನ್ನು ಅಳಿಸಲಾಗಿದೆ. ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಮತ ಚಲಾಯಿಸುವ ಅವ್ಯವಹಾರಕ್ಕೆ ಕಡಿವಾಣ ಹಾಕಲು ದೇಶಾದ್ಯಂತ ಚುನಾವಣಾ ಆಯೋಗ ಈ ಕ್ರಮ ಕೈಗೊಂಡಿದೆ,” ಎಂದು ಹೇಳಿದ್ದಾರೆ. ಅಲ್ಲದೆ, 2013 ರಿಂದ ಚಿಲುಮೆಯ ಚಟುವಟಿಕೆಗಳ ಬಗ್ಗೆ ಸಂಪೂರ್ಣ ತನಿಖೆಗೆ ಬೊಮ್ಮಾಯಿ ಆದೇಶಿಸಿದ್ದಾರೆ ಎಂದು ವರದಿಯಾಗಿದೆ.

ಟಿಎನ್‌ಎಂ ಮತ್ತು ʼಪ್ರತಿಧ್ವನಿʼ ಜಂಟಿಯಾಗಿ ನಡೆಸಿದ ಮೂರು ತಿಂಗಳ ತನಿಖೆಯ ಆಧಾರದ ಮೇಲೆ ಮತದಾರರ ಡೇಟಾ ಕಳ್ಳತನವನ್ನು ಚಿಲುಮೆ ನಡೆಸಿರುವುದು ಪತ್ತೆಯಾಗಿದೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ ಮತದಾರರ ಪಟ್ಟಿಯನ್ನು ಪರಿಷ್ಕರಿಸಲು ಚುನಾವಣಾ ಆಯೋಗದ ಮತದಾರರ ಜಾಗೃತಿ ಅಭಿಯಾನವಾದ SVEEP (ಸಿಸ್ಟಮ್ಯಾಟಿಕ್ ವೋಟರ್ಸ್ ಎಜುಕೇಶನ್ ಮತ್ತು ಎಲೆಕ್ಟೋರಲ್ ಪಾರ್ಟಿಸಿಪೇಷನ್) ಅನ್ನು ನಡೆಸಲು NGO ಗೆ BBMP ಅನುಮತಿ ನೀಡಿತ್ತು. ಆದಾಗ್ಯೂ, ಆದೇಶವನ್ನು ದುರುಪಯೋಗಪಡಿಸಿಕೊಳ್ಳಲಾಗಿದ್ದು,BBMP ಯಿಂದ BLO ಗಳೆಂದು ಗುರುತಿಸಿಕೊಂಡ ಕ್ಷೇತ್ರ ಏಜಂಟರಿಗೆ ನಕಲಿ ಗುರುತಿನ ಚೀಟಿಗಳನ್ನು ನೀಡಿರುವುದನ್ನು ತನಿಖಾ ವರದಿ ಪತ್ತೆ ಮಾಡಿತ್ತು.

ನವೆಂಬರ್ 16 ರಂದು ಈ ವರದಿಯನ್ನು ಪ್ರಕಟಿಸಿದ ತಕ್ಷಣ, ಬಿಬಿಎಂಪಿ ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದು, ಚಿಲುಮೆ ಎನ್‌ಜಿಒ ಕಾರ್ಯಕರ್ತರೊಂದಿಗೆ ಯಾವುದೇ ಮತದಾರರ ವಿವರಗಳನ್ನು ಹಂಚಿಕೊಳ್ಳದಂತೆ ಸಾರ್ವಜನಿಕರಿಗೆ ಕೇಳಿಕೊಂಡಿದೆ. ಮರುದಿನವೇ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷವು ಪತ್ರಿಕಾಗೋಷ್ಠಿಯನ್ನು ಸಹ ನಡೆಸಿತ್ತು.

'ಕುಣಿಯಲಾರದವನಿಗೆ ನೆಲ ಡೊಂಕು' ಎಂಬಂತೆ ಜನರ ವಿಶ್ವಾಸ ಕಳೆದುಕೊಂಡು ಹತಾಶಗೊಂಡಿರುವ ಕಾಂಗ್ರೆಸ್ ಪಕ್ಷ ಮತಯಂತ್ರಗಳ ಮೇಲೆ ಸಂಶಯ ಮೂಡಿಸುವುದು, ಚುನಾವಣಾ ಆಯೋಗದ ಬಗ್ಗೆ ಅಪಸ್ವರ ಎತ್ತುವುದು ಹೀಗೆ ಒಂದಲ್ಲಾ ಒಂದು ಕ್ಯಾತೆ ತೆಗೆಯುತ್ತಲೆ ಬಂದಿದ್ದು ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ ಆರೋಪ ಈ ಸುಳ್ಳುಗಳ ಸರಮಾಲೆಗೆ ಹೊಸ ಸೇರ್ಪಡೆಯಷ್ಟೆ.

4/4

— Dr Sudhakar K (@DrSudhakar_) November 20, 2022
Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬೆಳಗಾವಿ ಗಡಿ ವಿವಾದ; ಸರ್ವ ಪಕ್ಷ ಸಭೆ ನಡೆಸುವಂತೆ ಆಗ್ರಹಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

Next Post

ಪ್ರೇಯಸಿ ಹತ್ಯೆ ಪ್ರಕರಣ; ಆರೋಪಿ ಪಾಲಿಗ್ರಾಫ್‌ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಪೊಲೀಸರು

Related Posts

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
0

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿತರಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಬೀದರ್...

Read moreDetails

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025
Next Post
ಪ್ರೇಯಸಿ ಹತ್ಯೆ ಪ್ರಕರಣ; ಆರೋಪಿ ಪಾಲಿಗ್ರಾಫ್‌ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಪೊಲೀಸರು

ಪ್ರೇಯಸಿ ಹತ್ಯೆ ಪ್ರಕರಣ; ಆರೋಪಿ ಪಾಲಿಗ್ರಾಫ್‌ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಪೊಲೀಸರು

Please login to join discussion

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada