ಬಿಟ್ ಕಾಯಿನ್ ವಿಷಯವನ್ನ ನಮ್ಮ ನಾಯಕರು ಪ್ರಸ್ತಾಪಿಸಿದ ಕಾರಣ ದಲಿತ ವಿರೋಧಿ ವಿಚಾರ ಹೊರಗೆ ಬಂದಿದೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ರಾಮಲಿಂಗರೆಡ್ಡಿ ಆರೋಪಿಸಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ದಲಿತ ವಿರೋಧಿ ಅಸ್ತ್ರ ಪ್ರಯೋಗ ಆಗ್ತಿದೆ ವಿಷಯಾಂತರ ಮಾಡಲು ಈ ವಿಚಾರವನ್ನು ಬಿಜೆಪಿ ಪ್ರಸ್ತಾಪ ಮಾಡ್ತಿದೆ ಎಂದು ಹೇಳಿದ್ದಾರೆ.
ಬಿಟ್ ಕಾಯಿನ್ ದಂಧೆ ಪ್ರಕರಣದ ನಿಷ್ಪಕ್ಷಪಾತ ತನಿಖೆಯಾದ್ರೆ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಂಟಕ ಎದುರಾಗಲಿದೆ. ಬಿಟ್ ಕಾಯಿನ್ ವಿಚಾರ ಡೈವರ್ಟ್ ಮಾಡಲು ಈ ಆರೋಪ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ದಲಿತ ವಿರೋಧಿ ಎಂದು ಬಿಂಬಿಸುತ್ತಿದ್ದಾರೆ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಬಿಟ್ ಕಾಯಿನ್ ಹ್ಯಾಕ್ ಮಾಡಿ ಕೋಟ್ಯಂತರ ಹಣ ಮಾಡಿದ್ದಾರೆ. 7 ರಿಂದ 8 ಸಾವಿರ ಕೋಟಿ ಮಾಡಿದ ಬಗ್ಗೆ ಮಾತಾಡ್ತಿದ್ದಾರೆ. ಇದರ ಹಿಂದೆ ಆಡಳಿತ ಪಕ್ಷದ ಪ್ರಭಾವಿಗಳು ಇರುವ ಮಾಹಿತಿ ಇದೆ. ಬಿಟ್ ಕಾಯಿನ್ ದಂಧೆ ಬಗ್ಗೆ ಎಫ್ಬಿಐ ತನಿಖೆ ಮಾಡ್ತಿದೆ. ಈಗ ಸಿಬಿಐಗೆ ಕೊಟ್ಟಿದ್ದಾಗಿ ಗೃಹ ಸಚಿವರು ಹೇಳುತ್ತಿದ್ದಾರೆ. ಯಾವಾಗ ಸಿಬಿಐ ತನಿಖೆಗೆ ಕೊಟ್ಟರು ಎಂದು ಗೊತ್ತಾಗುತ್ತಿಲ್ಲ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಪ್ರಧಾನಿ ಕಚೇರಿಯಿಂದ ಪತ್ರ ಬಂದಿರೋದಾಗಿ ಗೊತ್ತಾಗಿದೆ ಪ್ರಕರಣದ ನ್ಯಾಯಾಂಗ ತನಿಖೆಯಾದರೆ ಎಲ್ಲಾ ಬಹಿರಂಗ ಆಗಲಿದೆ ಎಂದು ಹೇಳಿದ್ದಾರೆ.
ಬಿಟ್ ಕಾಯಿನ್ ದಂಧೆ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆಯಾದ್ರೆ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಂಟಕ ಎದುರಾಗಲಿದೆ. ಬಿಟ್ ಕಾಯಿನ್ ವಿಚಾರ ಡೈವರ್ಟ್ ಮಾಡಲು ಈ ಆರೋಪ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ದಲಿತ ವಿರೋಧಿ ಎಂದು ಬಿಂಬಿಸುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಹೇಳಿದ್ದಾರೆ.