• Home
  • About Us
  • ಕರ್ನಾಟಕ
Thursday, October 30, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಿಜೆಪಿ ನಾಯಕರಿಗೆ ಬೆಂಗಳೂರು ಅಭಿವೃದ್ಧಿ ಬಗ್ಗೆ ಕಾಳಜಿ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು ಅಭಿವೃದ್ಧಿಗೆ ಬಿಜೆಪಿ ಕೊಡುಗೆ ಏನು? ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ ಸಚಿವರು, ಶಾಸಕರ ಅಭಿಪ್ರಾಯ ಪಡೆದು ಪರಿಷತ್ ಚುನಾವಣೆ ಅಭ್ಯರ್ಥಿಗಳ ಅಂತಿಮ

ಪ್ರತಿಧ್ವನಿ by ಪ್ರತಿಧ್ವನಿ
October 29, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ADVERTISEMENT

“ಬಿಜೆಪಿ ನಾಯಕರಿಗೆ ಬೆಂಗಳೂರು ಅಭಿವೃದ್ಧಿ ಬಗ್ಗೆ ಕಾಳಜಿ ಇಲ್ಲ. ಅವರ ಕಾಲದಲ್ಲಿ ಬೆಂಗಳೂರು ಅಭಿವೃದ್ಧಿಗೆ ಏನು ಮಾಡಿದ್ದಾರೆ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಆವರು ಬುಧವಾರ ಪ್ರತಿಕ್ರಿಯೆ ನೀಡಿದರು.

ಟನಲ್ ರಸ್ತೆ ಮಾಡಲು ಬಿಡುವುದಿಲ್ಲ ಎಂಬ ಸಂಸದ ತೇಜಸ್ವಿ ಸೂರ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ಈ ವಿಚಾರದಲ್ಲಿ ತಾಂತ್ರಿಕ ತಜ್ಞ ಅಲ್ಲ. ಅವರೂ ತಜ್ಞರಲ್ಲ. ಅದಕ್ಕಾಗಿಯೇ ಪ್ರತ್ಯೇಕ ತಾಂತ್ರಿಕ ತಜ್ಞರ ತಂಡವೇ ಇದೆ. ಅವರು ನಗರ ರೈಲು ಯೋಜನೆ ಮಾಡಬೇಕು ಎಂದು ಹೇಳುತ್ತಿದ್ದಾರೆ. ಅದನ್ನು ಮಾಡಲಿ, ಅದರಲ್ಲಿ ತಪ್ಪೇನು ಇಲ್ಲ. ಇದಕ್ಕೆ ಅಗತ್ಯವಾದ ಅನುದಾನವನ್ನು ಕೇಂದ್ರ ಸರ್ಕಾರದಿಂದ ಕೊಡಿಸಲಿ. ನಮ್ಮದೇ ರಾಜ್ಯದ ಸೋಮಣ್ಣ ಅವರು ಕೇಂದ್ರ ಸಚಿವರಾಗಿದ್ದಾರೆ. ಅವರ ನೆರವು ಪಡೆಯಲಿ, ಏನು ಬೇಕಾದರೂ ಮಾಡಲಿ. ಆವರು ಹೋರಾಟ ಮಾಡುವುದಾದರೆ ಮಾಡಲಿ, ಬೇಡ ಎಂದು ಹೇಳಿದವರು ಯಾರು? ಬಿಜೆಪಿಯಲ್ಲಿ ತೇಜಸ್ವಿ ಸೂರ್ಯ ಹಾಗೂ ಅಶೋಕ್ ಹೊರತಾಗಿ ಉಳಿದ ಯಾವುದೇ ನಾಯಕರು ಮಾತನಾಡುತ್ತಿಲ್ಲ” ಎಂದು ತಿಳಿಸಿದರು.

Akbar Ali Podcast:ಮುಸ್ಲಿಂ ಹಬ್ಬದಲ್ಲಿ ಗಲಾಟೆ ಇಲ್ಲ.. ಹಿಂದೂ ಹಬ್ಬದಲ್ಲಿ ಗಲಾಟೆ ಯಾಕೆ...? #pratidhvani

ಸ್ಟೀಲ್ ಬ್ರಿಡ್ಜ್ ಮಾದರಿಯಲ್ಲೇ ಟನಲ್ ರಸ್ತೆ ಯೋಜನೆ ಮುರಿದು ಬೀಳುತ್ತಾ ಎಂದು ಕೇಳಿದಾಗ, “ನಾವು ನಮ್ಮ ಕೆಲಸ ಮಾಡುತ್ತೇವೆ. ನಮ್ಮ ಆಸಕ್ತಿ ನೋಡಿ ಜನರು ನಮ್ಮ ಪ್ರಯತ್ನಕ್ಕೆ ಬೆಂಬಲ ನೀಡುತ್ತಿದ್ದಾರೆ. ನಮ್ಮ ಕೆಲಸ ಅನುಷ್ಠಾನ ಆಗಲಿದೆ ಎಂಬ ವಿಶ್ವಾಸ ಇದೆ” ಎಂದರು.

ನವೆಂಬರ್ ಕ್ರಾಂತಿ, ಸಿಎಂ ಬದಲಾವಣೆ, ದಲಿತ ಸಿಎಂ ವಿಚಾರವಾಗಿ ಸಚಿವರ ಚರ್ಚೆ ಬಗ್ಗೆ ಕೇಳಿದಾಗ, “ಅನಗತ್ಯ ಮಾತನಾಡಿ ದಣಿವಾಗುವುದು ಬೇಡ ಎಂದು ಮನವಿ ಮಾಡುತ್ತೇನೆ” ಎಂದು ತಿಳಿಸಿದರು.

ವರದಿ ಬಳಿಕ ದಿನಾಂಕ ನಿಗದಿ:

Kanhaiya Kumar : ಗೃಹ ಸಚಿವ ಅಮಿತ್ ಶಾಗೆ ಖಡಕ್‌ ಟಾಂಗ್‌ ಕೊಟ್ಟ ಕನ್ಹಯ್ಯಾ ಕುಮಾರ್..! #amitshah #congress

ರಾಹುಲ್ ಗಾಂಧಿ ಅವರು ಇದೇ ತಿಂಗಳು 20ರಂದು ರಾಜ್ಯಕ್ಕೆ ಭೇಟಿ ನೀಡಿ ಕಾಂಗ್ರೆಸ್ ಕಚೇರಿ ಶಂಕುಸ್ಥಾಪನೆ ಮಾಡಲಿದ್ದಾರೆಯೇ ಎಂದು ಕೇಳಿದಾಗ, ‘ಇನ್ನೂ ದಿನಾಂಕ ಅಂತಿಮವಾಗಿಲ್ಲ. ನಾನು ಮನವಿ ಸಲ್ಲಿಸಿದ್ದೇನೆ. ಕಚೇರಿ ನಿರ್ಮಾಣ ಜಾಗದ ಕಾಗದ ಪತ್ರ ಸಿದ್ಧವಾಗುತ್ತಿದೆ. ಈ ಕಚೇರಿ ನಿರ್ಮಾಣ ವಿಚಾರದಲ್ಲಿ ಸಚಿವರು, ಸಂಸದರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ಯಾರ್ಯಾರು ಆಸಕ್ತಿ ತೋರಿದ್ದಾರೆ, ಯಾರು ತೋರಿಲ್ಲ ಎಂದು ವರದಿ ನೀಡುವಂತೆ ಹೈಕಮಾಂಡ್ ನಾಯಕರು ಕೇಳಿದ್ದಾರೆ. ನಾನು ವರದಿ ಸಿದ್ಧಪಡಿಸುತ್ತಿದ್ದು, ಅದನ್ನು ಕಳುಹಿಸಬೇಕು. ಆನಂತರ ಆವರು ದಿನಾಂಕ ನಿಗದಿ ಮಾಡುತ್ತಾರೆ” ಎಂದು ವಿವರಿಸಿದರು.

ಶ್ರೀರಾಮುಲು ಕೊಟ್ಟ ಹಣವನ್ನೇ ಬಿಹಾರಕ್ಕೆ ನೀಡಿದ್ದೇವೆ:

K. S. Eshwarappa : ಕುರ್ಚಿಗಾಗಿ ಕೈ ನಾಯಕರ ಕಿತ್ತಾಟ ಈಶ್ವರಪ್ಪ ಏನಂದ್ರು..! #siddaramaiah #dkshivakumar

ಬಿಹಾರ ಚುನಾವಣೆಗೆ ಸಿಎಂ, ಡಿಸಿಎಂ 300 ಕೋಟಿ ರೂ. ಕಪ್ಪ ಕಾಣಿಕೆ ನೀಡಿದ್ದಾರೆ ಎಂಬ ಶ್ರೀರಾಮುಲು ಹೇಳಿಕೆ ಬಗ್ಗೆ ಕೇಳಿದಾಗ, “ಶ್ರೀರಾಮುಲು ಅವರು ಕಾಂಗ್ರೆಸ್ ಪಕ್ಷಕ್ಕೆ ಹಣ ನೀಡಿದ್ದು, ಅದನ್ನೇ ನಾವು ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ” ಎಂದು ಲೇವಡಿ ಮಾಡಿದರು.

ಸಚಿವರು, ಶಾಸಕರ ಅಭಿಪ್ರಾಯ ಪಡೆದು ಅಭ್ಯರ್ಥಿ ಅಂತಿಮ:

ಕೆಪಿಸಿಸಿ ಕಚೇರಿಯಲ್ಲಿ ನಡೆದ ಮೇಲ್ಮನೆ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಸಭೆ ಬಗ್ಗೆ ಮಾತನಾಡಿ, “ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಪ್ರತಿ ಕ್ಷೇತ್ರದಲ್ಲಿ ಐದಾರು ಮಂದಿ ಟಿಕೆಟ್ ಆಕಾಂಕ್ಷಿಗಳು ಇದ್ದಾರೆ. 8-10 ದಿನಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಮಾಡುತ್ತೇವೆ. ಮುಂದಿನ ಸಭೆಯಲ್ಲಿ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಚರ್ಚೆ ಮಾಡಿ ಅಭಿಪ್ರಾಯ ಪಡೆಯುತ್ತೇವೆ” ಎಂದು ತಿಳಿಸಿದರು.

Tags: DCM DK ShivakumarDK Shivakumardk shivakumar campdk shivakumar cm newsdk shivakumar cryingdk shivakumar eventdk shivakumar fansdk shivakumar in jp parkdk shivakumar in parkdk shivakumar kpccdk shivakumar latestdk shivakumar livedk shivakumar newsdk shivakumar next cmdk shivakumar on cmdk shivakumar sondk shivakumar speechdk shivakumar todaydk shivakumar viraldk shivakumar walkdk shivakumar walkingdk shivakumar wifedk shivakumar yatnalkpcc dk shivakumar
Previous Post

ಸಚಿವ ಸ್ಥಾನಕ್ಕೆ ಕಾಶಪ್ಪನವರ ಹೆಸರು ಕೇಳಿ ಬರುತ್ತಿರುವಾಗಲೇ ಮತ್ತೇ ಶುರುವಾಯ್ತು ದಂಗಲ್…!!!

Next Post

MB Patil: ಕೇನ್ಸ್ ಟೆಕ್ನಾಲಜೀಸ್ ವಿಸ್ತರಣೆಗೆ ಚಾಮರಾಜನಗರದಲ್ಲಿ 20 ಎಕರೆ ಭೂಮಿ: ಎಂ ಬಿ ಪಾಟೀಲ

Related Posts

Top Story

CM Siddaramaiah: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಭೆ..

by ಪ್ರತಿಧ್ವನಿ
October 29, 2025
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯಲ್ಲಿ ಒಟ್ಟು 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಲಾಯಿತು. ಪ್ರತಿ...

Read moreDetails

Priyank Kharge: ಬೆಂಗಳೂರು ಟೆಕ್ ಶೃಂಗಸಭೆ 2025: ವಿಸಿಗಳೊಂದಿಗೆ ಸಚಿವ ಖರ್ಗೆ ಸಭೆ..!!

October 29, 2025

ಜಯನಗರದ ಪ್ರಾದೇಶಿಕ ಸಾರಿಗೆ ಕಚೇರಿ ಅಂಜನಾಪುರಕ್ಕೆ ಸ್ಥಳಾಂತರ

October 29, 2025

ಡಾ. ಪುನೀತ್ ರಾಜಕುಮಾರ್ 4 ನೇ ಪುಣ್ಯತಿಥಿಯನ್ನು ಆಚರಿಸಿದ‌ ಚಿಕ್ಕೋಡಿ ಜನತೆ..

October 29, 2025

MB Patil: ರಂಗಸನ್ಸ್ ಏರೋಸ್ಪೇಸ್ ನೂತನ ಕಚೇರಿಗೆ ಸಚಿವ ಎಂ ಬಿ ಪಾಟೀಲ ಚಾಲನೆ..!!

October 29, 2025
Next Post

MB Patil: ಕೇನ್ಸ್ ಟೆಕ್ನಾಲಜೀಸ್ ವಿಸ್ತರಣೆಗೆ ಚಾಮರಾಜನಗರದಲ್ಲಿ 20 ಎಕರೆ ಭೂಮಿ: ಎಂ ಬಿ ಪಾಟೀಲ

Recent News

Top Story

CM Siddaramaiah: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಭೆ..

by ಪ್ರತಿಧ್ವನಿ
October 29, 2025
Top Story

Priyank Kharge: ಬೆಂಗಳೂರು ಟೆಕ್ ಶೃಂಗಸಭೆ 2025: ವಿಸಿಗಳೊಂದಿಗೆ ಸಚಿವ ಖರ್ಗೆ ಸಭೆ..!!

by ಪ್ರತಿಧ್ವನಿ
October 29, 2025
Serial

ಜಯನಗರದ ಪ್ರಾದೇಶಿಕ ಸಾರಿಗೆ ಕಚೇರಿ ಅಂಜನಾಪುರಕ್ಕೆ ಸ್ಥಳಾಂತರ

by ಪ್ರತಿಧ್ವನಿ
October 29, 2025
Top Story

ಡಾ. ಪುನೀತ್ ರಾಜಕುಮಾರ್ 4 ನೇ ಪುಣ್ಯತಿಥಿಯನ್ನು ಆಚರಿಸಿದ‌ ಚಿಕ್ಕೋಡಿ ಜನತೆ..

by ಪ್ರತಿಧ್ವನಿ
October 29, 2025
Top Story

MB Patil: ರಂಗಸನ್ಸ್ ಏರೋಸ್ಪೇಸ್ ನೂತನ ಕಚೇರಿಗೆ ಸಚಿವ ಎಂ ಬಿ ಪಾಟೀಲ ಚಾಲನೆ..!!

by ಪ್ರತಿಧ್ವನಿ
October 29, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಭೆ..

October 29, 2025

Priyank Kharge: ಬೆಂಗಳೂರು ಟೆಕ್ ಶೃಂಗಸಭೆ 2025: ವಿಸಿಗಳೊಂದಿಗೆ ಸಚಿವ ಖರ್ಗೆ ಸಭೆ..!!

October 29, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada