ದೆಹಲಿ : ರಾಜ್ಯ ವಿಧಾನಸಭಾ ಚುನಾವಣೆಗೆ ಒಂದು ತಿಂಗಳಿಗೂ ಕಡಿಮೆ ಅವಧಿ ಬಾಕಿ ಉಳಿದಿದೆ. ಆದರೂ ಬಿಜೆಪಿ ಮಾತ್ರ ಇನ್ನೂ ತನ್ನ ಮೊದಲ ಪಟ್ಟಿಯನ್ನು ಅನೌನ್ಸ್ ಮಾಡಿಲ್ಲ. ಹೀಗಾಗಿ ಬಿಜೆಪಿ ಲೆಕ್ಕಾಚಾರ ಏನಿರಬಹುದು ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ.

ಉನ್ನತ ಮೂಲಗಳು ನೀಡಿರುವ ಮಾಹಿತಿಯ ಪ್ರಕಾರ ಅರುಣಾಚಲ ಪ್ರದೇಶದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿಗೆ ವಾಪಸ್ಸಾದ ಬಳಿಕವೇ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಹೇಳಲಾಗ್ತಿದೆ. ಇಂದು ಸಂಜೆ ನಾಲ್ಕು ಗಂಟೆ ಸುಮಾರಿಗೆ ಅಮಿತ್ ಶಾ ದೆಹಲಿ ತಲುಪಲಿದ್ದು ಇದಾದ ಬಳಿಕವೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಲಿದೆ ಎನ್ನಲಾಗಿದೆ.
ನಿನ್ನೆಯಷ್ಟೇ ಈ ಕುರಿತು ಮಾತನಾಡಿದ್ದ ಸಿಎಂ ಬೊಮ್ಮಾಯಿ, ಕೇಂದ್ರ ಸಚಿವ ಅಮಿತ್ ಶಾ ಸದ್ಯ ಅರುಣಾಚಲ ಪ್ರದೇಶದಲ್ಲಿದ್ದು ಅವರು ಮಂಗಳವಾರ ದೆಹಲಿಗೆ ವಾಪಸ್ಸಾಗಲಿದ್ದಾರೆ. ನಾಳೆ ಅಥವಾ ಮಾಡಿದ್ದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆಗಲಿದೆ ಎಂದಿದ್ದರು.






