• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ವಿಧಾನಸಭೆ ಚುನಾವಣೆಯಲ್ಲಿ ಸೋತು ಲೋಕಸಭೆ ಪ್ರವೇಶಿಸಿದ ಬಿಜೆಪಿ ನಾಯಕರು!

ಪ್ರತಿಧ್ವನಿ by ಪ್ರತಿಧ್ವನಿ
June 4, 2024
in ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಮೂರು ಮಕ್ಕಳಾಗಿದ್ದಕ್ಕೆ ಪಾಲಿಕೆಯ ಇಬ್ಬರು ಬಿಜೆಪಿ ಸದಸ್ಯರು ಅನರ್ಹ
Share on WhatsAppShare on FacebookShare on Telegram

ವಿಧಾನಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿದ್ದ ಬಿಜೆಪಿಯ ಕೆಲವು ನಾಯಕರು ಲೋಕಸಭೆ ಚುನಾವಣೆಯಲ್ಲಿ ಗೆದ್ದು ರಾಜಕೀಯ ಮರು ಹುಟ್ಟು ಪಡೆದುಕೊಂಡಿದ್ದಾರೆ.

ADVERTISEMENT

ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಕಳೆದುಕೊಂಡಿದ್ದ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಿ ಸೋಲು ಕಂಡಿದ್ದರು. ಆನಂತರ ವಿಧಾನ ಪರಿಷತ್ ಸದಸ್ಯರಾಗಿದ್ದರು. ಆದರೆ, ಲೋಕಸಭಾ ಚುನಾವಣೆ ವೇಳೆ ಮತ್ತೆ ಬಿಜೆಪಿ ಸೇರಿ ಬೆಳಗಾವಿ ಟಿಕೆಟ್ ಪಡೆದಿದ್ದರು. ಸದ್ಯ ಶೆಟ್ಟರ್ ಭರ್ಜರಿಯಾಗಿ ಜಯ ಸಾಧಿಸಿ ಲೋಕಸಭೆ ಪ್ರವೇಶಿಸಿದ್ದಾರೆ.

ಶೆಟ್ಟರ್ 7,56,471 ಮತಗಳನ್ನು ಪಡೆದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ನನ್ನು ಸೋಲಿಸಿದ್ದಾರೆ. ಇಬ್ಬರ ಮಧ್ಯೆ 1,75,574 ಮತಗಳ ಅಂತರವಿದೆ. ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಡಾ. ಕೆ. ಸುಧಾಕರ್ ಗೆದ್ದಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಸುಧಾಕರ್ ಸೋತಿದ್ದರು. ಈಗ ಕಾಂಗ್ರೆಸ್ನ ರಕ್ಷಾ ರಾಮಯ್ಯ ಅವರನ್ನು ಸೋಲಿಸಿ ಸಂಸತ್ ಪ್ರವೇಶಿಸಿದ್ದಾರೆ. ಹಿರಿಯ ನಾಯಕ ವಿ ಸೋಮಣ್ಣ ಅವರ ಸ್ವಪಕ್ಷ ಬಿಟ್ಟು ಸಿದ್ದರಾಮಯ್ಯ ವಿರುದ್ಧ ವರುಣಾ ಹಾಗೂ ಚಾಮರಾಜನಗರ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು.

ಹೀಗಾಗಿ ಎಲ್ಲರೂ ಸೋಮಣ್ಣ ರಾಜಕೀಯ ಅಂತ್ಯವಾಯಿತು ಎಂದೇ ಭಾವಿಸಿದ್ದರು. ಆದರೆ, ಸೋಮಣ್ಣ ತುಮಕೂರು ಲೋಕಸಭಾ ಕ್ಷೇತ್ರದಿಮದ ಗೆದ್ದು ಸಂಸತ್ ಪ್ರವೇಶಿಸಿದ್ದಾರೆ. ಶಿರಸಿ ವಿಧಾನಸಭಾ ಕ್ಷೇತ್ರದಿಂದ ಸೋತಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಈ ಬಾರಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಗೆಲುವು ಕಂಡಿದ್ದಾರೆ. ಕಾಂಗ್ರೆಸ್ನ ಡಾ ಅಂಜಲಿ ನಿಂಬಾಳ್ಕರ್ ಅವರನ್ನು ಮಣಿಸಿ ಸಂಸತ್ಗೆ ಪ್ರವೇಶಿಸಿದ್ದಾರೆ.

ಮುಧೋಳ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಕಂಡಿದ್ದ ಗೋವಿಂದ್ ಕಾರಜೋಳ ಚಿತ್ರದುರ್ಗಕ್ಕೆ ವಲಸೆ ಹೋಗಿ ಗೆಲುವುಕಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎನ್ ಚಂದ್ರಪ್ಪ ವಿರುದ್ಧ 47,958 ಮತಗಳ ಅಂತರದಿಂದ ಗೆಲವು ಕಂಡಿದ್ದಾರೆ. ಈ ಎಲ್ಲ ನಾಯಕರು ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸೋಲುತ್ತಿದ್ದಂತೆ ಅವರ ರಾಜಕೀಯ ಜೀವನವೇ ಅಂತ್ಯವಾಯಿತು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಲೋಕಸಭಾ ಚುನಾವಣೆ ಅವರಿಗೆ ಮರು ಹುಟ್ಟು ನೀಡಿದೆ.

Tags: BJPcongressElectionlokasabha election
Previous Post

ಇನ್ನು ಕೆಲವೇ ಗಂಟೆಗಳಲ್ಲಿ ಪ್ರದೀಪ್ ಈಶ್ವರ್ ರಾಜೀನಾಮೆ..!

Next Post

ಕಿಂಗ್ ಮೇಕರ್ ಆದ್ರಾ ನಿತೀಶ್ ಮತ್ತು ಚಂದ್ರಬಾಬು ನಾಯ್ಡು ?! NDA ಭವಿಷ್ಯ ಅತಂತ್ರ ?! 

Related Posts

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ
ಕರ್ನಾಟಕ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

by ಪ್ರತಿಧ್ವನಿ
April 9, 2026
0

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಮಧ್ಯಾಹ್ನ 3 ಗಂಟೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಈ ಬಾರಿ ರಾಜ್ಯವು...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಕಿಂಗ್ ಮೇಕರ್ ಆದ್ರಾ ನಿತೀಶ್ ಮತ್ತು ಚಂದ್ರಬಾಬು ನಾಯ್ಡು ?! NDA ಭವಿಷ್ಯ ಅತಂತ್ರ ?! 

ಕಿಂಗ್ ಮೇಕರ್ ಆದ್ರಾ ನಿತೀಶ್ ಮತ್ತು ಚಂದ್ರಬಾಬು ನಾಯ್ಡು ?! NDA ಭವಿಷ್ಯ ಅತಂತ್ರ ?! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada