ಬೆಂಗಳೂರು: ಕಾವೇರಿ ನೀರಿನ ವಿವಾದದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ನಗರದ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಬಿಜೆಪಿಯ ಹಲವು ನಾಯಕರು ಭಾಗಿಯಾಗಿದ್ದಾರೆ. ಖಾಲಿ ಕೊಡ ಹಾಗೂ ಬಿತ್ತಿ ಪತ್ರಗಳನ್ನು ಹಿಡಿದುಕೊಂಡು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ವಿಧಾನಪರಿಷತ್ ಸದಸ್ಯ ಅಶ್ವತ್ಥ ನಾರಾಯಣ, ಕಾವೇರಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ರೈತರಿಗೆ ದ್ರೋಹ ಬಗೆದಿದ್ದಾರೆ. ಮೇಕೆದಾಟು ಯೋಜನೆ ಜಾರಿಗೆ ತರುವ ವಿಚಾರವಾಗಿ ಕೇಂದ್ರ ಬಿಜೆಪಿ ಮೇಲೆ ಏಕೆ ಗೂಬೆ ಕೂರಿಸುತ್ತೀರಾ? ಕಡಲ ಜಾರಿಗೆ ತನ್ನಿ. ಡಿಕೆಶಿ ಒಳ ಒಪ್ಪಂದದಿಂದ ರಾಜ್ಯದ ಜನರಿಗೆ ಮೋಸ ಆಗ್ತಿದೆ ಎಂದು ಕಿಡಿಕಾರಿದರು.