• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯ ಸರ್ಕಾರದಲ್ಲಿ ಮುಗಿಯದ ಖಾತೆ ಕ್ಯಾತೆ; ಪ್ರಬಲ ಖಾತೆಗಾಗಿ ಆಕಾಂಕ್ಷಿಗಳ ಬಿಗಿ ಪಟ್ಟು

ನಚಿಕೇತು by ನಚಿಕೇತು
August 31, 2021
in ಕರ್ನಾಟಕ
0
ರಾಜ್ಯ ಸರ್ಕಾರದಲ್ಲಿ ಮುಗಿಯದ ಖಾತೆ ಕ್ಯಾತೆ; ಪ್ರಬಲ ಖಾತೆಗಾಗಿ ಆಕಾಂಕ್ಷಿಗಳ ಬಿಗಿ ಪಟ್ಟು
Share on WhatsAppShare on FacebookShare on Telegram

ಬಸವರಾಜ್ ಬೊಮ್ಮಾಯಿ ಸಂಪುಟ ರಚನೆಯಾದ ಕ್ಷಣದಿಂದಲೂ ಖಾತೆ ಕ್ಯಾತೆ ಮುಗಿಯದ ಕಥೆಯಾಗಿದೆ. ಅಸಮಾಧಾನಿತ ಸಚಿವರು ಖಾತೆ ಬದಲಾವಣೆಗೆ ಪಟ್ಟು ಹಿಡಿದಿದ್ರೆ, ಸಂಪುಟದಲ್ಲಿ ಖಾಲಿ ಉಳಿದಿರುವ ಸ್ಥಾನಗಳ ಭರ್ತಿಗೂ ಸಿಎಂ ಮೇಲೆ ಒತ್ತಡ ಹೆಚ್ಚಾಗಿದೆ. ಈ ಮಧ್ಯೆ ರಾಜ್ಯ ಪ್ರವಾಸ ಕೈಗೊಂಡಿರುವ ಉಸ್ತುವಾರಿ ಅರುಣ್ ಸಿಂಗ್ ಖಾತೆ ಅಸಮಾಧಾನಿತರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ADVERTISEMENT

ಸಿಎಂ ಬಸವರಾಜ್ ಬೊಮ್ಮಾಯಿ ಸಂಪುಟ ರಚನೆಯಾದ ಕ್ಷಣದಿಂದಲೂ ಖಾತೆ ಅಸಮಾಧಾನ ಅನ್ನೋ ಕೆಂಡ ಕಮಲ ಕೋಟೆಯಲ್ಲಿ ಹೊಗೆಯಾಡುತ್ತಲೇ ಇದೆ. ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಈ ಕ್ಷಣದವೆರಗೂ ತಮಗೆ ಕೊಟ್ಟಿರುವ ಖಾತೆಯನ್ನು ಬದಲಿಸಲು ತಮ್ಮ ಬಿಗಿಪಟ್ಟು ಮುಂದುವರಿಸಿದ್ದಾರೆ. ಸಿಎಂ ಬೊಮ್ಮಾಯಿಗೆ ಖಾತೆ ಕ್ಯಾತೆ ಬಿಸಿತುಪ್ಪದಂತಾಗಿದ್ದು, ಅಸಮಾಧಾನ ಶಮನ ಮಾಡೋಕೆ ಹರಸಾಹಸಪಡ್ತಿದ್ದಾರೆ. ಈ ನಡುವೆ ರಾಜ್ಯಕ್ಕೆ ಆಗಮಿಸಿರೋ ಅರುಣ್ ಸಿಂಗ್ ಖಾತೆ ಅಸಮಾಧಾನಿತರಿಗೆ ಎಚ್ಚರಿಕೆ ನೀಡಿದ್ದು, ಕೊಟ್ಟಿರೋ ಖಾತೆಯನ್ನು ಸಮರ್ಥವಾಗಿ ನಿಭಾಯಿಸುವಂತೆ ಸಂದೇಶ ರವಾನಿಸಿದ್ದಾರೆ.

ಪಕ್ಷದಲ್ಲಿ ಲಕ್ಷಾಂತರ ಕಾರ್ಯಕರ್ತರಿದ್ದಾರೆ. ಅವರಿಗೆ ಯಾವ ಅಧಿಕಾರವೂ ಸಿಕ್ಕಿಲ್ಲ. ಆದರೂ ಅವರು ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ. ಇವರಿಗಂತೂ ಅಧಿಕಾರ ಸಿಕ್ಕಿದೆ. ಇವರು ಹೆಚ್ಚಿನ ಶ್ರದ್ಧೆಯಿಂದ ಪಕ್ಷಕ್ಕಾಗಿ ಕೆಲಸ ಮಾಡಬೇಕು. ಈ ರೀತಿಯ ಘಟನೆಗಳು ಪಕ್ಷದಲ್ಲಿ ನಡೆಯಬಾರದು ಎಂದಿದ್ದಾರೆ.
ಇನ್ನು ಸಂಪುಟದಲ್ಲಿ ಖಾಲಿ ಉಳಿದಿರೋ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿರೊ ನಾಯಕರಿಗೂ ಅರುಣ್ ಸಿಂಗ್ ತಿರುಗೇಟು ನೀಡಿದ್ದಾರೆ. ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಕದ ತಟ್ಟುವ ಅವಶ್ಯಕತೆಯಿಲ್ಲ. ಸಂಪುಟ ವಿಸ್ತರಣೆ ಕುರಿತು ಸಿಎಂ ಅವರೇ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಅಂತಾ ಅರುಣ್ ಸಿಂಗ್ ತಿಳಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿಗಳು ನಿರ್ಣಯಕೈಗೊಳ್ಳಬೇಕಾಗುತ್ತೆ. ಇದು ಅವರ ಅಧಿಕಾರ ಕ್ಷೇತ್ರ. ಸೂಕ್ತ ಸಮಯದಲ್ಲಿ ಸಂಪುಟ ವಿಸ್ತರಣೆ ಕುರಿತು ಸಿಎಂ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದಿದ್ದಾರೆ.
ಇನ್ನು 3 ದಿನದ ರಾಜ್ಯ ಪ್ರವಾಸ ಕೈಗೊಂಡಿರೋ ಅರುಣ್ ಸಿಂಗ್, ಮೈಸೂರು ಭಾಗದಲ್ಲಿ ಪ್ರವಾಸ ಮಾಡಿ ಪಕ್ಷ ಸಂಘಟಿಸುವುದಾಗಿ ಹೇಳಿದ್ದಾರೆ. ಮೈಸೂರು ಪ್ರಾಂತ್ಯದಲ್ಲಿ ಪ್ರಾಬಲ್ಯ ಸಾಧಿಸಿದರೆ ಅಧಿಕಾರದ ಮೆಟ್ಟಿಲು ಮತ್ತಷ್ಟು ಸನಿಹವಾಗಲಿದೆ ಅನ್ನೋದು ಅರುಣ್ ಸಿಂಗ್ ಲೆಕ್ಕಾಚಾರ.

ಹಳೆ ಮೈಸೂರು ಭಾಗದಿಂದ ನಾನು ಜಿಲ್ಲಾ ಪ್ರವಾಸವನ್ನು ಆರಂಭಿಸಲಿದ್ದೇನೆ. ಹಳೆ ಮೈಸೂರು ಭಾಗದಲ್ಲಿ ಪಕ್ಷ ಅಷ್ಟೊಂದು ಪ್ರಬಲವಾಗಿಲ್ಲ. ಭಾರತೀಯ ಪಕ್ಷ ಸರಳ ಬಹುಮತದೊಂದಿಗೆ ಅಧಿಕಾರಕ್ಕೆ ಬರಲು ಹಳೆ ಮೈಸೂರು ಭಾಗ ತುಂಬಾ ಮಹತ್ವದ್ದಾಗಿದೆ. ಇತ್ತ ಸಿಎಂಗೆ ಸಚಿವಾಕಾಂಕ್ಷಿಗಳ ತಲೆನೋವು ಹೆಚ್ಚಾಗಿದೆ. 5 ದಿನ ದೆಹಲಿಯಲ್ಲೇ ಬೀಡುಬಿಟ್ಟಿದ್ದ ರಮೇಶ್ ಜಾರಕಿಹೊಳಿ ಹಾಗೂ ಬಾಲಚಂದ್ರ ಜಾರಕಿಹೊಳಿ ಹೈಕಮಾಂಡ್ ನಾಯಕರ ಮೂಲಕ ಮಮತ್ರಿಪಟ್ಟಕ್ಕಾಗಿ ಒತ್ತಡ ಹಾಕ್ತಿದ್ರೆ,  ಮರಾಠ ಕೋಟಾದಡಿ ಮಂತ್ರಿಪಟ್ಟ ನೀಡುವಂತೆ ಹಾಗವಾಡ ಶಾಸಕ ಶ್ರೀಮಂತ ಪಾಟೀಲ್ ಸಮುದಾಯದ ಪಟ್ಟು ಹಾಕಿದ್ದಾರೆ. ಖಾತೆ ಕ್ಯಾತೆ ನಿಭಾಯಿಸಲು  ಸಿಎಂ ಬೊಮ್ಮಾಯಿ ಹೆಣಗಾಡುತ್ತಿರೋ ಹೊತ್ತಲ್ಲೇ ರಾಜ್ಯ ಪ್ರವಾಸ ಕೈಗೊಂಡಿರೋ ಉಸ್ತುವಾರಿ ಅರುಣ್ ಸಿಂಗ್ ಅಸಮಾಧಾನಿತರಿಗೆ ಚಾಟಿ ಬೀಸಿರೊದು ಹೈಕಮಾಂಡ್ ಬೊಮ್ಮಾಯಿ ಬೆನ್ನಿಗೆ ಬಲವಾಗಿ ನಿಂತಿದೆ ಅನ್ನೋ ಸಂದೇಶ ಸಾರಿದಂತಿದೆ.

Tags: Arun SinghBasavaraj BommaiBJPcabinetCongress PartyKarnatakaMinistersಅರುಣ್ ಸಿಂಗ್ಎಚ್ ಡಿ ಕುಮಾರಸ್ವಾಮಿಬಸವರಾಜ್ ಬೊಮ್ಮಾಯಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಡೆಲ್ಟಾ ರೂಪಾಂತರಿಯನ್ನು ತಡೆಯುವಲ್ಲಿ ಕೋವಿಶೀಲ್ಡ್ ಪರಿಣಾಮಕಾರಿಯಲ್ಲ: IGIB ಅಧ್ಯಯನ

Next Post

20 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ, 9 ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಒಂದೇ ಬಾರಿಗೆ ಪ್ರಮಾಣವಚನ ಸ್ವೀಕಾರ

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
Next Post
20 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ, 9 ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಒಂದೇ ಬಾರಿಗೆ ಪ್ರಮಾಣವಚನ ಸ್ವೀಕಾರ

20 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ, 9 ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಒಂದೇ ಬಾರಿಗೆ ಪ್ರಮಾಣವಚನ ಸ್ವೀಕಾರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!