ಮುಂದಿನ ತಿಂಗಳು ನಡೆಯಲಿರುವ ಪಂಚರಾಜ್ಯ ಚುನಾವಣೆ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ನಡುವೆ ಆಡಳಿತಾರೂಢ ಬಿಜೆಪಿ ಮಣಿಪುರದಲ್ಲಿ ಏಕಾಂಗಿ ಸ್ಪರ್ಧೆಗೆ ಮುಂದಾಗಿದೆ. ಈ ಹಿಂದೆ 2017ರಲ್ಲಿ ಬಿಜೆಪಿ ಎರಡು ಪ್ರಾದೇಶಿಕ ಪಕ್ಷ ಹಾಗೂ ಪಕ್ಷೇತರ ಶಾಸಕರ ಬೆಂಬಲದೊಂದಿಗೆ ಸರ್ಕಾರವನ್ನ ರಚಿಸಿತ್ತು.
ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ಅಶೋಂಕ್ ಸಿಂಘಾಲ್, ಈ ಭಾರೀ ಬಿಜೆಪಿ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದೆ ಮತ್ತು ಚುನಾವಣಾ ಪೂರ್ವ ಮೈತ್ರಿ ಕುರಿತು ಈಗಾಗಲೇ ಸಮಾನ ಮನಸ್ಕ ಪಕ್ಷಗಳೊಂದಿಗೆ ಚರ್ಚಿಸುತ್ತಿದ್ದೇವೆ ಎಂದು ಚುನಾವಣಾ ಪೂರ್ವ ಮೈತ್ರಿ ಸಾಧ್ಯತೆಯ ಬಗ್ಗೆ ಸುಳಿವನ್ನು ನೀಡಿದ್ದಾರೆ.
ಆದಷ್ಟು ಬೇಗ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಮತ್ತು ಬಿಜೆಪಿಯು ಈ ಭಾರೀ ಸಂಘಟಿತ ಹೋರಾಟವನ್ನಮಾಡಲಿದೆ ಎಂದು ಕೇಂದ್ರ ಸಚಿವೆ ಪ್ರತಿಮಾ ಭೌಮಿಕ್ ಹೇಳಿದ್ದಾರೆ.
60 ಸದಸ್ಯ ಬಲದ ವಿಧಾನಸಭೆಗೆ 2017ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 28 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಆದರೆ, ಬಿಜೆಪಿ ಕಡೇ ಕ್ಷಣದಲ್ಲಿ ಪ್ರಾದೇಶಿಕ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರವನ್ನ ರಚಿಸಿ ಕಾಂಗ್ರೆಸ್ ಆಸೆಗೆ ತಣ್ಣೀರು ಎರಚಿತ್ತು.