ದೆಹಲಿ : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ರಂಗೇರಿದೆ. ಬಿಜೆಪಿಯು ಯಾವಾಗ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡುತ್ತೋ ಅಂತಾ ಕುತೂಹಲ ಕೂಡ ಹೆಚ್ಚಾಗಿದೆ. ಈ ನಡುವೆಯೇ ಸಿಎಂ ಬಸವರಾಜ ಬೊಮ್ಮಾಯಿ ಈ ವಿಚಾರವಾಗಿ ಮಾತನಾಡಿದ್ದು ರಾಜ್ಯದಲ್ಲಿ ಈ ಬಾರಿ 2 ಹಂತಗಳಲ್ಲಿ ಬಿಜೆಪಿ ಪಟ್ಟಿ ಬಿಡುಗಡೆ ಆಗಲಿದೆ ಎಂದಿದ್ದಾರೆ.
ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆ ವಿಚಾರವಾಗಿಯೂ ದೆಹಲಿಯಲ್ಲಿ ಮಾತನಾಡಿದ ಅವರು ಕೆ.ಎಸ್. ಈಶ್ವರಪ್ಪ ಅವರು ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದು, ಚುನಾವಣಾ ರಾಜಕಾರಣದಿಂದ ಹಿಂದೆ ಸರಿದಿರುವುದಾಗಿ ಹೇಳಿದ್ದಾರೆ. ಅವರು ಹಲವಾರು ದಿನಗಳಿಂದ ಈ ಮಾತು ಹೇಳುತ್ತಿದ್ದರು. ನಾವು ಅವರಿಗೆ ನಿಮ್ಮ ಅನುಭವದ ಅಗತ್ಯವಿದೆ ಎಂದು ತಿಳಿಸಿದ್ದೆವು. ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿರುವುದರಿಂದ ಅದನ್ನು ಅಧ್ಯಕ್ಷರೇ ತೀರ್ಮಾನ ಮಾಡುತ್ತಾರೆ. ಈಶ್ವರಪ್ಪ ಅವರು ರಾಜಕಾರಣದಲ್ಲಿ ಮುಂದುವರೆಯಬೇಕು. ಚುನಾವಣೆಯಲ್ಲಿ ಸ್ಪರ್ಧಿಸುವುದು ಅವರಿಗೆ ಬಿಟ್ಟಿದ್ದು ಎಂದು ತಿಳಿಸಿದರು.

ನಮ್ಮ ಪಕ್ಷದಲ್ಲಿ ಒಂದು ಸಂಪ್ರದಾಯ ಬೆಳೆಯುತ್ತಿದೆ.ಇನ್ನೊಂದೆಡೆ ಕಾಂಗ್ರೆಸ್ ನಲ್ಲಿ 92 ವರ್ಷದ ಶಾಮನೂರು ಶಿವಶಂಕರಪ್ಪ ಅವರಿಗೆ ಟಿಕೆಟ್ ಕೊಟ್ಟಿದ್ದಾರೆ. ಇದು ಅವರಿಗೂ ನಮಗೂ ಇರುವ ವ್ಯತ್ಯಾಸ ಎಂದು ಹೇಳುವ ಮೂಲಕ ಕಾಂಗ್ರೆಸ್ಗೆ ಟಾಂಗ್ ನೀಡಿದ್ರು.
ಜಗದೀಶ್ ಶೆಟ್ಟರ್ ಅವರ ಜೊತೆ ಮಾತನಾಡಿದ್ದು, ಅವರು ಕ್ಷೇತ್ರದಲ್ಲಿ ಇನ್ನಷ್ಟು ಕೆಲಸ ಮಾಡಬೇಕಿದೆ. ಅದಕ್ಕೆ ಇನ್ನೊಂದು ಅವಕಾಶ ಬೇಕು ಅಂತ ಹೇಳಿದಾರೆ. ಅದನ್ನು ವರಿಷ್ಠರ ಗಮನಕ್ಕೆ ತಂದಿದ್ದೇನೆ. ಬೇರೆ ಯಾವುದೇ ನಾಯಕರ ವಿಷಯಗಳು ನಮ್ಮ ಮುಂದೆ ಇಲ್ಲ. ಲಕ್ಷ್ಮಣ ಸವದಿಯವರೊಂದಿಗೆ ಸಂಪರ್ಕದಲ್ಲಿ ಇದ್ದು, ಮಹೇಶ ಕುಮಠಳ್ಳಿ ಅವರು ನಾವು ಸರ್ಕಾರ ರಚನೆಗೆ ಕಾರಣರಾದವರು. ಹೀಗಾಗಿ ಅವರಿಗೆ ಯಾವುದೇ ದುಡುಕಿನ ನಿರ್ಧಾರ ತೆಗೆದುಕೊಳ್ಳದಂತೆ ಸೂಚಿಸಿದ್ದೇನೆ ಎಂದರು.