• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ಸದಸ್ಯತ್ವ ಅಭಿಯಾನ- ಔರಾದಗೆ 5ನೇ ಸ್ಥಾನ,ರಾಜ್ಯಾಧ್ಯಕ್ಷರಿಂದ ಶಾಸಕ ಪ್ರಭು ಚವ್ಹಾಣರಿಗೆ ಸನ್ಮಾನ

Any Mind by Any Mind
October 28, 2024
in Top Story, ಇತರೆ / Others, ಕರ್ನಾಟಕ
0
ಬಿಜೆಪಿ ಸದಸ್ಯತ್ವ ಅಭಿಯಾನ- ಔರಾದಗೆ 5ನೇ ಸ್ಥಾನ,ರಾಜ್ಯಾಧ್ಯಕ್ಷರಿಂದ ಶಾಸಕ ಪ್ರಭು ಚವ್ಹಾಣರಿಗೆ ಸನ್ಮಾನ
Share on WhatsAppShare on FacebookShare on Telegram

ಭಾರತೀಯ ಜನತಾ ಪಕ್ಷದಿಂದ ನಡೆದ ಸದಸ್ಯತ್ವ ಅಭಿಯಾನದಲ್ಲಿ ಔರಾದ(ಬಿ) ಮಂಡಲವು ರಾಜ್ಯದಲ್ಲಿ ಐದನೇ ಸ್ಥಾನ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಮೊದಲ ಸ್ಥಾನ ಪಡೆದಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಅವರು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು.ಬಿ ಚವ್ಹಾಣ ಅವರನ್ನು ಸೋಮವಾರ ಬೆಂಗಳೂರಿನ ಜಗನ್ನಾಥ ಭವನದಲ್ಲಿ ಗೌರವಿಸಿದರು.

ADVERTISEMENT

ಬಳಿಕ ಮಾತನಾಡಿದ ಶಾಸಕ ಪ್ರಭು ಚವ್ಹಾಣ ಅವರು, ಔರಾದ(ಬಿ) ಮಂಡಲದಲ್ಲಿ ಅಭಿಯಾನಕ್ಕೆ ಚಾಲನೆ ನೀಡಿದ ಕಾರ್ಯಕರ್ತರು ಪ್ರತಿ ಬೂತ್‌ಗಳಲ್ಲಿ ಓಡಾಡಿ ನಿರಂತರ ಶ್ರಮ ವಹಿಸಿದ್ದಾರೆ.ಅವರ ಪರಿಶ್ರಮದಿಂದಾಗಿ ಅಭಿಯಾನ ಯಶಸ್ವಿಯಾಗಿ ನಡೆಯಲು ಸಾಧ್ಯವಾಗಿದೆ.

ಈ ಸನ್ಮಾನವನ್ನು ಮಂಡಲದ ಎಲ್ಲ ಕಾರ್ಯಕರ್ತರಿಗೆ ಅರ್ಪಿಸುತ್ತೇನೆ ಎಂದು ಹೇಳಿದರು. ಅಭಿಯಾನ ಆರಂಭವಾದ ನಂತರ ತಾಲ್ಲೂಕು ಮಟ್ಟದಲ್ಲಿ ಕಾರ್ಯಾಗಾರವನ್ನು ಆಯೋಜಿಸಿ ಕಾರ್ಯಕರ್ತರು ಅಭಿಯಾನದಲ್ಲಿ ಹೇಗೆ ಕೆಲಸ ಮಾಡಬೇಕೆಂದು ತಿಳುವಳಿಕೆ ಮೂಡಿಸುವ ಕೆಲಸ ಮಾಡಲಾಗಿತ್ತು.

ಮಹಾಶಕ್ತಿ ಕೇಂದ್ರ, ಶಕ್ತಿ ಕೆಂದ್ರ ಹಾಗೂ ಎಲ್ಲ ಬೂತ್‌ಗಳಲ್ಲಿ ಸಭೆಗಳನ್ನು ನಡೆಸಲಾಗಿದೆ. ಜಿಲ್ಲಾಧ್ಯಕ್ಷರಾದ ಸೋಮನಾಥ ಪಾಟೀಲ ಹಾಗೂ ಮಂಡಲ ಅದ್ಯಕ್ಷರಾದ ರಾಮಶೆಟ್ಟಿ ಪನ್ನಾಳೆ ಅವರು ಕಾರ್ಯಕರ್ತರಿಗೆ ಪ್ರೇರಣೆ ನೀಡಿದ್ದಾರೆ. ಅದರಂತೆ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ ಹಾಗೂ ಬೂತ್‌ಗಳಲ್ಲಿ ಅಭಿಯಾನ ನಡೆಸಿರುವುದರಿಂದ ಗುರಿ ತಲುಪಲು ಸಾಧ್ಯವಾಗಿದೆ ಎಂದು ಸಂತೋಷ ಹಂಚಿಕೊಂಡರು.

ಕಾರ್ಯಕರ್ತರು ಸತತ ಎರಡು ತಿಂಗಳವರೆಗೆ ಹಬ್ಬ-ಹರಿದಿನಗಳನ್ನು ಲೆಕ್ಕಿಸದೇ ಸಕ್ರೀಯವಾಗಿ ಅಭಿಯಾನದಲ್ಲಿ ತೊಡಗಿಸಿಕೊಂಡಿದ್ದಾರೆ. ಔರಾದನಲ್ಲಿ ಚುನಾವಣೆಯ ಮಾದರಿಯಲ್ಲಿ ಕೆಲಸವಾಗಿದೆ. ಎಲ್ಲರ ಪರಿಶ್ರಮದಿಂದಾಗಿ ಔರಾದ(ಬಿ) ಮಂಡಲ ರಾಜ್ಯದಲ್ಲಿ 5ನೇ ಸ್ಥಾನ ಮತ್ತು ಉತ್ತರ ಕರ್ನಾಟಕದಲ್ಲಿ ಮೊದಲನೇ ಸ್ಥಾನ ಪಡೆದಿದೆ.

ಔರಾದ(ಬಿ) ಕ್ಷೇತ್ರಕ್ಕೆ ಈ ಸ್ಥಾನಮಾನ ನೀಡಲು ಶ್ರಮಿಸಿದ ಎಲ್ಲ ಕಾರ್ಯಕರ್ತರಿಗೂ ಧನ್ಯವಾದಗಳನ್ನು ತಿಳಿಸಿದ್ದಾರೆ. ರಾಜ್ಯಾಧ್ಯಕ್ಷರು ತಮಗೆ ಭಾಲ್ಕಿ ಹಾಗೂ ಬೀದರ ಪ್ರಭಾರಿಯಾಗಿ ನೇಮಕ ಮಾಡಿದ್ದರು. ಅವರ ನಿರ್ದೇಶನದಂತೆ ಅಲ್ಲಿನ ಮುಖಂಡರು, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಸಭೆಗಳನ್ನು ನಡೆಸಿ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಪ್ರೇರಣೆ ನೀಡಲಾಗಿದೆ. ನಂತರ ಎರಡೂ ಮಂಡಲಗಳಲ್ಲಿಯೂ ಸುಧಾರಣೆ ಕಾಣಿಸಿದೆ ಎಂದು ಹೇಳಿದರು. ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಈ ಅಭಿಯಾನ ಅತ್ಯವಶ್ಯಕವಾಗಿತ್ತು.

ಬೂತ್ ಮಟ್ಟದಿಂದ ಪಕ್ಷವನ್ನು ಬಲಪಡಿಸಲು ಇದೊಂದು ಪರಿಣಾಮಕಾರಿ ವಿಧಾನವೆಂದು ಭಾವಿಸಿ ಕೆಲಸ ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ಪಕ್ಷದ ಚಟುವಟಿಕೆಗಳಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸಿ ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸಲು ಶ್ರಮಿಸೋಣ ಎಂದರು.

ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ ಸದಾನಂದ ಗೌಡ, ರಾಜ್ಯ ಸಹ ಉಸ್ತುವಾರಿ ಡಾ.ಸುಧಾಕರ್ ರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಎನ್.ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags: 5th position for Aurada.BJP Membership CampaignBJP state president Vijayendra Yeddyurappaformer Chief Ministers DV Sadananda GowdaMLA Prabhu Chavanಬಿಜೆಪಿ
Previous Post

ಸಾಯಿ ಪಲ್ಲವಿ ವಿರುದ್ಧ ಮತ್ತೆ ಭುಗಿಲೆದ್ದ ಆಕ್ರೋಶ: ಅಮರನ್‌, ರಾಮಾಯಣ ಚಿತ್ರಕ್ಕೂ ಕಂಟಕ?

Next Post

ಬಿಗ್ ಬಾಸ್ ಮನೆಯಲ್ಲಿ ಕನ್ಫೆಷನ್ ಟಾಸ್ಕ್ – ಕಷ್ಟದ ದಿನಗಳನ್ನು ನೆನೆದು ಕಣ್ಣೀರಾದ ಕಂಟೆಸ್ಟೆಂಟ್.!

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
Next Post
ಬಿಗ್ ಬಾಸ್ ಮನೆಯಲ್ಲಿ ಕನ್ಫೆಷನ್ ಟಾಸ್ಕ್ – ಕಷ್ಟದ ದಿನಗಳನ್ನು ನೆನೆದು ಕಣ್ಣೀರಾದ ಕಂಟೆಸ್ಟೆಂಟ್.!

ಬಿಗ್ ಬಾಸ್ ಮನೆಯಲ್ಲಿ ಕನ್ಫೆಷನ್ ಟಾಸ್ಕ್ - ಕಷ್ಟದ ದಿನಗಳನ್ನು ನೆನೆದು ಕಣ್ಣೀರಾದ ಕಂಟೆಸ್ಟೆಂಟ್.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada