• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BREAKING NEWS : ಸಿಐಡಿಯಿಂದ ಭೈರತಿ ಬಸವರಾಜ್‌ ಅರೆಸ್ಟ್..!

ಕೊನೆಗೂ ಖಾಕಿಗೆ ಶರಣಾದ ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಬಿಜೆಪಿ ಶಾಸಕ.. ಶರಣಾಗುವಂತೆ ವಾರ್ನಿಂಗ್‌ ಮಾಡಿದ್ದ ಗೃಹ ಸಚಿವ ಡಾ.ಜಿ. ಪರಮೇಶ್ವರ್..

ಪ್ರತಿಧ್ವನಿ by ಪ್ರತಿಧ್ವನಿ
February 12, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
BREAKING NEWS : ಸಿಐಡಿಯಿಂದ ಭೈರತಿ ಬಸವರಾಜ್‌ ಅರೆಸ್ಟ್..!
Share on WhatsAppShare on FacebookShare on Telegram

ಬೆಂಗಳೂರು : ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಬಂಧನವಾಗಿದೆ. ಅಹಮದಾಬಾದ್‌ನಿಂದ ವಿಮಾನದಲ್ಲಿ ಆಗಮಿಸಿದ ಶಾಸಕನನ್ನು ಸಿಐಡಿ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.‌

ADVERTISEMENT
Epstein Files Big Blast BJP Vs Congress Fight : ಭಾರತ ಮಾತೆಯನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ?

ರೌಡಿ ಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಎ5 ಆರೋಪಿಯಾಗಿರುವ ಬಿಜೆಪಿ ಶಾಸಕನಿಗೆ ಹೈಕೋರ್ಟ್‌ನಲ್ಲಿ ಜಾಮೀನು ಸಿಕ್ಕಿರಲಿಲ್ಲ. ಆದರೂ ಅಜ್ಞಾತ ಸ್ಥಳದಿಂದಲೇ ಸುಪ್ರೀಂಕೋರ್ಟ್‌ಗೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ಭೈರತಿಗೆ ಅಲ್ಲಿಯೂ ತೀವ್ರ ಹಿನ್ನಡೆಯಾಗಿತ್ತು.

ಇದನ್ನೂ ಓದಿ : ಈ 2 ವಂದೇ ಭಾರತ್ ರೈಲುಗಳು ಸ್ಥಗಿತಗೊಳ್ಳಲಿವೆ

ಏನಿದು ಕೊಲೆ ಕೇಸ್..?

5ನೇ ಆರೋಪಿಯಾಗಿರುವ ಬಿಜೆಪಿ ಶಾಸಕ ಬಿಕ್ಲು ಶಿವ ಮರ್ಡರ್‌ ಕೇಸ್‌ನಲ್ಲಿ ಪ್ರಮುಖರಾಗಿದ್ದಾರೆ. ಎರಡು ಗುಂಪುಗಳ ಘರ್ಷಣೆ ಹಾಗೂ ಹೊಡೆದಾಟದ ಸಂದರ್ಭದಲ್ಲಿ ಭೈರತಿ ಸ್ಥಳದಲ್ಲಿದ್ದರು, ಈ ವೇಳೆ ಕೊಲೆಯಾಗಿರುವ ಬಿಕ್ಲು ಶಿವನ ತಾಯಿಗೆ ಬೆದರಿಕೆ ಹಾಕಿ ಗನ್‌ ತೋರಿಸಲಾಗಿದೆ. ಅಲ್ಲಿನ ಆರೋಪಿತ ವ್ಯಕ್ತಿಯ ಜೊತೆಗೆ ಭೈರತಿ ಬಸವರಾಜ್‌ ಸಂಪರ್ಕ ಇಟ್ಟುಕೊಂಡಿದ್ದರು ಎಂಬ ಆರೋಪ ಇವರ ಮೇಲಿದೆ.

ಬಳಿಕ ಅಲ್ಲಿಂದ ಕಾಲ್ಕಿತ್ತಿದ್ದ ಆರೋಪಿಗಳು ಶ್ರೀಲಂಕಾಗೆ ಎಕೇಪ್‌ ಆಗಿದ್ದರು. ಇನ್ನೂ ಈ ಘಟನೆಯ ಬಳಿಕ ಭೈರತಿಗೆ ಆರಂಭಿಕ ದಿನಗಳಲ್ಲಿ ಬಂಧನದ ಭೀತಿಯು ಜೋರಾಗಿತ್ತು. ಇದನ್ನು ಅರಿತ ಬಿಜೆಪಿ ಶಾಸಕ ತಲೆಮರೆಸಿಕೊಂಡಿದ್ದರು. ಇದಾದ ಬಳಿಕ ನ್ಯಾಯಾಲಯದಲ್ಲೂ ಭೈರತಿಗೆ ಸಾಕಷ್ಟು ಮುಖಭಂಗವಾಗಿತ್ತು. ಜಾಮೀನು ಅರ್ಜಿಗಳ ವಿಚಾರಣೆ ವೇಳೆ ಖುದ್ದು ಹಾಜರಾಗಿರಲಿಲ್ಲ. ಇದರಿಂದ ನ್ಯಾಯಾಲಯ ಇನ್ನಷ್ಟು ಆಕ್ರೋಶ ವ್ಯಕ್ತಪಡಿಸಿತ್ತು.

ಅಲ್ಲದೆ ಇದೇ ವಿಚಾರಕ್ಕೆ ಗೃಹ ಸಚಿವ ಬಿಜೆಪಿ ಶಾಸಕ ಭೈರತಿ ಬಸವರಾಜ್‌ಗೆ ತಾವಾಗಿಯೇ ಶರಣಾಗುವಂತೆ ವಾರ್ನಿಂಗ್‌ ಕೂಡ ನೀಡಿದ್ದರು. ಪರಮೇಶ್ವರ್‌ ಎಚ್ಚರಿಕೆಯ ಬೆನ್ನಲ್ಲೇ ಖಾಕಿಗೆ ಭೈರತಿ ಶರಣಾಗಿದ್ದಾರೆ. ಪೊಲೀಸರು ಅವರನ್ನು ಸಿಐಡಿ ಕಚೇರಿಗೆ ಕರೆತಂದು ವಿಚಾರಣೆ ನಡೆಸಿ, ನ್ಯಾಯಾಧೀಶರೆದುರು ಹಾಜರು ಪಡಿಸುವುದು ಸೇರಿದಂತೆ ಮುಂದಿನ ಕಾನೂನು ಪ್ರಕ್ರಿಯೆಗಳು ಇನ್ನಷ್ಟೇ ನಡೆಯಲಿವೆ.

Tags: Biklu Shiva Murder Casebjp karnataka newsBJP MLAbyrathi basavaraj arrest newsCID KarnatakaCID PolicCRIME NEWSPratidhvani
Previous Post

ಈ 2 ವಂದೇ ಭಾರತ್ ರೈಲುಗಳು ಸ್ಥಗಿತಗೊಳ್ಳಲಿವೆ

Next Post

ಅಂತರರಾಷ್ಟ್ರೀಯ ಕಾಫಿ ಉತ್ಸವ ಉದ್ಘಾಟಿಸಿದ ಸಚಿವ ಎಂಬಿ ಪಾಟೀಲ

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post
ಅಂತರರಾಷ್ಟ್ರೀಯ ಕಾಫಿ ಉತ್ಸವ ಉದ್ಘಾಟಿಸಿದ ಸಚಿವ ಎಂಬಿ ಪಾಟೀಲ

ಅಂತರರಾಷ್ಟ್ರೀಯ ಕಾಫಿ ಉತ್ಸವ ಉದ್ಘಾಟಿಸಿದ ಸಚಿವ ಎಂಬಿ ಪಾಟೀಲ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada